ಆದಿಕಾಂಡ 14:9 - ಪರಿಶುದ್ದ ಬೈಬಲ್9 ಅವರು ಏಲಾಮಿನ ರಾಜ ಕೆದೊರ್ಲಗೋಮರನಿಗೂ ಗೋಯಿಮದ ರಾಜ ತಿದ್ಗಾಲನಿಗೂ ಶಿನಾರಿನ ರಾಜ ಅಮ್ರಾಫೆಲನಿಗೂ, ಎಲ್ಲಸಾರಿನ ರಾಜ ಅರಿಯೋಕನಿಗೂ ವಿರುದ್ಧವಾಗಿ ಹೋರಾಡಿದರು. ಹೀಗೆ ನಾಲ್ಕು ಮಂದಿ ರಾಜರು ಐದು ಮಂದಿ ರಾಜರ ವಿರುದ್ಧವಾಗಿ ಹೋರಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅಂದರೆ ಏಲಾಮಿನ ರಾಜನಾದ ಕೆದೊರ್ಲಗೋಮರ್, ಗೋಯಿಮದ ರಾಜನಾದ ತಿದ್ಗಾಲ, ಶಿನಾರ್ ಅರಸನಾದ ಅಮ್ರಾಫೆಲ್, ಎಲ್ಲಸಾರಿನ ರಾಜನಾದ ಅರಿಯೋಕ ಇವರಿಗೆ ವಿರೋಧವಾಗಿ ಸಿದ್ದೀಮ್ ಎಂಬ ತಗ್ಗಿನಲ್ಲಿ ತಮ್ಮ ದಂಡನ್ನು ನಿಲ್ಲಿಸಿದರು. ಹೀಗೆ ನಾಲ್ಕು ಮಂದಿ ರಾಜರು ಐದು ಮಂದಿ ರಾಜರನ್ನು ಎದುರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಏಲಾಮನ ಅರಸ ಕೆದೊರ್ಲಗೋಮರ್, ಗೋಯಿಮದ ಅರಸ ತಿದ್ಗಾಲ, ಬಾಬಿಲೋನಿನ ಅರಸ ಅಮ್ರಾಫೆಲ, ಎಲ್ಲಸಾರಿನ ಅರಸ ಅರಿಯೋಕ ಇವರಿಗೆ ವಿರೋಧವಾಗಿ ಸಿದ್ದೀಮ್ ತಗ್ಗುಪ್ರದೇಶದಲ್ಲಿ ತಮ್ಮ ದಂಡನ್ನು ನಿಲ್ಲಿಸಿದರು. ಹೀಗೆ ನಾಲ್ಕು ಮಂದಿ ರಾಜರು ಐದು ಮಂದಿ ರಾಜರನ್ನು ಎದುರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅಂದರೆ ಏಲಾವಿುನ ಅರಸನಾದ ಕೆದೂರ್ಲಗೋಮರ್, ಗೋಯಿಮದ ಅರಸನಾದ ತಿದ್ಗಾಲ, ಶಿನಾರಿನ ಅರಸನಾದ ಅಮ್ರಾಫೆಲ, ಎಲ್ಲಸಾರಿನ ಅರಸನಾದ ಅರಿಯೋಕ ಇವರಿಗೆ ವಿರೋಧವಾಗಿ ಸಿದ್ದೀಮೆಂಬ ತಗ್ಗುಮೈದಾನದಲ್ಲಿ ತಮ್ಮ ದಂಡನ್ನು ನಿಲ್ಲಿಸಿದರು. ಹೀಗೆ ನಾಲ್ಕು ಮಂದಿ ರಾಜರು ಐದು ಮಂದಿ ರಾಜರನ್ನು ಎದುರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಏಲಾಮಿನ ಅರಸ ಕೆದೊರ್ಲಗೋಮರನಿಗೂ ಗೋಯಿಮದ ಅರಸನಾದ ತಿದ್ಗಾಲನಿಗೂ ಶಿನಾರಿನ ಅರಸ ಅಮ್ರಾಫೆಲನಿಗೂ ಎಲ್ಲಸಾರಿನ ಅರಸ ಅರಿಯೋಕನಿಗೂ ವಿರೋಧವಾಗಿ ಸಿದ್ದೀಮ್ ತಗ್ಗಿನಲ್ಲಿ ಯುದ್ಧಮಾಡಿದರು. ಹೀಗೆ ನಾಲ್ವರು ಅರಸರಿಗೆ ವಿರೋಧವಾಗಿ ಐದು ಮಂದಿ ಅರಸರು ಎದುರಿಸಿದರು. ಅಧ್ಯಾಯವನ್ನು ನೋಡಿ |