ಆದಿಕಾಂಡ 15:12 - ಪರಿಶುದ್ದ ಬೈಬಲ್12 ಸಾಯಂಕಾಲವಾಯಿತು, ಸೂರ್ಯ ಮುಳುಗತೊಡಗಿದಾಗ ಅಬ್ರಾಮನಿಗೆ ಗಾಢ ನಿದ್ರೆ ಬಂದಿತು. ಅವನು ನಿದ್ರೆ ಮಾಡುತ್ತಿರುವಾಗ ಕಾರ್ಗತ್ತಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಹೊತ್ತು ಮುಣುಗುತ್ತಿರುವಾಗ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು; ಕಾರ್ಗತ್ತಲು ಅವನ ಮೇಲೆ ಕವಿಯಿತು; ಅವನು ಮಹಾಭೀತಿಯಿಂದ ಭಯಭ್ರಾಂತನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಹೊತ್ತು ಮುಳುಗುತ್ತಿದ್ದಾಗ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು. ಭೀಕರವಾದ ಕಾರ್ಗತ್ತಲು ಅವನನ್ನು ಕವಿಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಹೊತ್ತು ಮುಣುಗುತ್ತಿರುವಾಗ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು; ಕಾರ್ಗತ್ತಲು ಅವನ ಮೇಲೆ ಕವಿಯಿತು; ಅವನು ಭಯಭ್ರಾಂತನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಸೂರ್ಯನು ಅಸ್ತಮಿಸಲಾಗಿ ಅಬ್ರಾಮನಿಗೆ ಗಾಢನಿದ್ರೆ ಹತ್ತಿತ್ತು. ಭೀಕರವಾದ ಕಾರ್ಗತ್ತಲು ಅವನ ಮೇಲೆ ಕವಿಯಿತು. ಅಧ್ಯಾಯವನ್ನು ನೋಡಿ |
ಅಂತೆಯೇ, ಸೌಲನ ತಲೆಯ ಹತ್ತಿರವಿದ್ದ ಭರ್ಜಿಯನ್ನೂ ನೀರಿನ ತಂಬಿಗೆಯನ್ನೂ ದಾವೀದನು ತೆಗೆದುಕೊಂಡನು. ನಂತರ ದಾವೀದ ಮತ್ತು ಅಬೀಷೈ ಸೌಲನ ಪಾಳೆಯನ್ನು ಬಿಟ್ಟು ಹೋದರು. ಇದನ್ನು ಯಾರೂ ನೋಡಲಿಲ್ಲ. ಇದರ ಬಗ್ಗೆ ಯಾರಿಗೂ ತಿಳಿಯಲಿಲ್ಲ. ಒಬ್ಬನಾದರೂ ನಿದ್ರೆಯಿಂದ ಎಚ್ಚರಗೊಳ್ಳಲಿಲ್ಲ! ಸೌಲನು ಮತ್ತು ಅವನ ಸೈನಿಕರೆಲ್ಲರೂ ನಿದ್ರಿಸುತ್ತಿದ್ದರು. ಏಕೆಂದರೆ ಯೆಹೋವನು ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದನು.