Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 15:13 - ಪರಿಶುದ್ದ ಬೈಬಲ್‌

13 ಆಗ ಯೆಹೋವನು ಅಬ್ರಾಮನಿಗೆ, “ನಿನಗೆ ಈ ವಿಷಯಗಳು ತಿಳಿದಿರಬೇಕು. ನಿನ್ನ ಸಂತತಿಯವರು ಪರದೇಶಿಯರಾಗಿ ತಮ್ಮದಲ್ಲದ ದೇಶದಲ್ಲಿ ವಾಸಮಾಡುವರು. ಅಲ್ಲಿನ ಜನರು ಅವರನ್ನು ಗುಲಾಮರನ್ನಾಗಿ ಮಾಡಿಕೊಳ್ಳುವರು. ಅಲ್ಲಿ ಅವರು ನಾನೂರು ವರ್ಷಗಳವರೆಗೆ ಬಾಧೆಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಯೆಹೋವನು ಅಬ್ರಾಮನಿಗೆ, “ನೀನು ಚೆನ್ನಾಗಿ ತಿಳಿಯತಕ್ಕದ್ದೇನೆಂದರೆ, ನಿನ್ನ ಸಂತತಿಯವರು ಅನ್ಯದೇಶದಲ್ಲಿ ಪ್ರವಾಸಿಯಾಗಿ ವಾಸವಾಗಿದ್ದು ಆ ದೇಶದವರಿಗೆ ದಾಸರಾಗುವರು. ನಾನೂರು ವರ್ಷ ಆ ದೇಶದವರಿಂದ ಬಾಧೆಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಅಬ್ರಾಮನಿಗೆ ಸರ್ವೇಶ್ವರ, “ಇದನ್ನು ನೀನು ಸ್ಪಷ್ಟವಾಗಿ ತಿಳಿದುಕೊಳ್ಳಬೇಕು: ನಿನ್ನ ಸಂತತಿಯವರು ಅನ್ಯ ನಾಡಿಗೆ ಆಗಂತುಕರಂತೆ ಹೋಗುವರು; ಆ ನಾಡಿಗರಿಗೆ ಗುಲಾಮರಾಗುವರು; ನಾನೂರು ವರ್ಷ ಅಲ್ಲಿಯವರ ಶೋಷಣೆಗೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಯೆಹೋವನು ಅವನಿಗೆ - ನೀನು ಚೆನ್ನಾಗಿ ತಿಳಿಯತಕ್ಕದ್ದೇನಂದರೆ - ನಿನ್ನ ಸಂತತಿಯವರು ಅನ್ಯದೇಶದಲ್ಲಿ ಕೆಲವು ಕಾಲವಾಸವಾಗಿದ್ದು ಆ ದೇಶದವರಿಗೆ ದಾಸರಾಗುವರು. ನಾನೂರು ವರುಷ ಆ ದೇಶದವರಿಂದ ಬಾಧೆಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರು ಅಬ್ರಾಮನಿಗೆ, “ನಿನ್ನ ಸಂತತಿಯವರು ತಮ್ಮದಲ್ಲದ ದೇಶದಲ್ಲಿ ಪ್ರವಾಸಿಗಳಾಗಿರುವರು, ಅವರು ಗುಲಾಮರಾಗಿ ನಾಲ್ಕುನೂರು ವರ್ಷಗಳವರೆಗೆ ದಬ್ಬಾಳಿಕೆಗೆ ಗುರಿಯಾಗುವರು ಎಂಬುದನ್ನು ನೀನು ಖಂಡಿತವಾಗಿಯೂ ತಿಳಿಯತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 15:13
26 ತಿಳಿವುಗಳ ಹೋಲಿಕೆ  

ಆದ್ದರಿಂದ ಅವರು ಇಸ್ರೇಲರನ್ನು ಹಿಂಸಿಸಲು ತೀರ್ಮಾನಿಸಿದರು. ಇಸ್ರೇಲರಿಂದ ಬಿಟ್ಟೀಕೆಲಸ ಮಾಡಿಸುವುದಕ್ಕಾಗಿ ಅಧಿಕಾರಿಗಳನ್ನು ನೇಮಿಸಿದರು. ಈ ಅಧಿಕಾರಿಗಳು ರಾಜನಿಗಾಗಿ ಪಿತೋಮ್ ಮತ್ತು ರಾಮ್ಸೇಸ್ ಪಟ್ಟಣಗಳನ್ನು ಇಸ್ರೇಲರಿಂದ ಬಲವಂತವಾಗಿ ಕಟ್ಟಿಸಿದರು; ಧಾನ್ಯಗಳನ್ನು ಮತ್ತು ಇನ್ನಿತರ ವಸ್ತುಗಳನ್ನು ಶೇಖರಿಸುವುದಕ್ಕೆ ರಾಜನು ಈ ಪಟ್ಟಣಗಳನ್ನು ಉಪಯೋಗಿಸಿದನು.


“ಈಜಿಪ್ಟಿನಲ್ಲಿ ನಮ್ಮ ಜನರಾದ ಯೆಹೂದ್ಯರ ಸಂಖ್ಯೆಯು ಹೆಚ್ಚತೊಡಗಿತು. (ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ ಕಾಲ ಬಹು ಶೀಘ್ರದಲ್ಲೇ ಬರಲಿತ್ತು.)


ನಾನು ಹೇಳುತ್ತಿರುವುದೇನೆಂದರೆ, ದೇವರು ಅಬ್ರಹಾಮನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡು ಅದನ್ನು ಸ್ಥಿರಪಡಿಸಿದನು. ಆದ್ದರಿಂದ ನಾನೂರಮೂವತ್ತು ವರ್ಷಗಳಾದ ನಂತರ ಬಂದ ಧರ್ಮಶಾಸ್ತ್ರವು ಅಬ್ರಹಾಮನಿಗೆ ದೇವರು ಮಾಡಿದ ವಾಗ್ದಾನವನ್ನು ರದ್ದುಪಡಿಸುವುದೂ ಇಲ್ಲ ಬದಲಾಯಿಸುವುದೂ ಇಲ್ಲ.


ನಿಮ್ಮ ಸ್ವಂತ ದೇಶದವರೊಡನೆ ವರ್ತಿಸುವ ಪ್ರಕಾರ ಪರದೇಶಸ್ಥರೊಡನೆ ವರ್ತಿಸಿರಿ. ನಿಮ್ಮನ್ನು ಪ್ರೀತಿಸುವಂತೆ ಪರದೇಶಸ್ಥರನ್ನು ಪ್ರೀತಿಸಿರಿ. ಯಾಕೆಂದರೆ ನೀವು ಸಹ ಒಂದು ಕಾಲದಲ್ಲಿ ಈಜಿಪ್ಟಿನಲ್ಲಿದ್ದಾಗ ಪರದೇಶಸ್ಥರಾಗಿದ್ದಿರಿ. ನಾನೇ ನಿಮ್ಮ ದೇವರಾದ ಯೆಹೋವನು!


ನೀನು ಪ್ರಯಾಣ ಮಾಡುತ್ತಿರುವ ಈ ಕಾನಾನ್ ದೇಶವನ್ನೆಲ್ಲ ನಿನಗೂ ನಿನ್ನ ಸಂತತಿಯವರಿಗೂ ಶಾಶ್ವತವಾಗಿ ಕೊಡುವೆನು. ನಾನೇ ನಿಮ್ಮ ದೇವರಾಗಿರುವೆನು” ಎಂದು ಹೇಳಿದನು.


ಆದ್ದರಿಂದ ನೀವೂ ಪರದೇಶಿಯರನ್ನು ಪ್ರೀತಿಸಬೇಕು. ನೀವೂ ಸಹ ಈಜಿಪ್ಟ್ ದೇಶದಲ್ಲಿ ಪರದೇಶಿಗಳಾಗಿದ್ದಿರಿ.


“ನೀವು ಪರದೇಶಸ್ಥರಿಗೆ ತೊಂದರೆ ಕೊಡಬಾರದು. ನೀವು ಈಜಿಪ್ಟಿನಲ್ಲಿ ಪರದೇಶಸ್ಥರಾಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.


“ನೀವು ಮೊದಲು ಈಜಿಪ್ಟಿನಲ್ಲಿ ಪರದೇಶಸ್ಥರಾಗಿದ್ದದ್ದನ್ನು ಜ್ಞಾಪಕಮಾಡಿಕೊಳ್ಳಿ. ಆದ್ದರಿಂದ ನೀವು ಮೋಸಮಾಡಬಾರದು; ನಿಮ್ಮ ದೇಶದಲ್ಲಿರುವ ಯಾವ ಪರದೇಶಸ್ಥನಿಗೂ ಕೇಡು ಮಾಡಬಾರದು.


ನಾಲ್ಕು ತಲೆಮಾರುಗಳ ನಂತರ ನಿನ್ನ ಜನರು ಈ ನಾಡಿಗೆ ಹಿಂತಿರುಗುವರು. ಆ ಕಾಲದಲ್ಲಿ ನಿನ್ನ ಜನರು ಅಮೋರಿಯರನ್ನು ಸೋಲಿಸುವರು. ಇಲ್ಲಿ ವಾಸಿಸುತ್ತಿರುವ ಅಮೋರಿಯರನ್ನು ನಿನ್ನ ಜನರ ಮೂಲಕ ನಾನೇ ಶಿಕ್ಷಿಸುವೆನು. ಇದು ಮುಂದೆ ನಡೆಯುವ ಸಂಗತಿ. ಯಾಕೆಂದರೆ ಆ ಸಮಯದಲ್ಲಿ ಅಮೋರಿಯರು ಅಂಥ ಶಿಕ್ಷೆ ಅನುಭವಿಸುವಷ್ಟು ಕೆಟ್ಟವರಾಗಿರಲಿಲ್ಲ” ಎಂದು ಹೇಳಿದನು.


ಅವರು ಫರೋಹನಿಗೆ, “ಬರಗಾಲವು ಕಾನಾನ್ ದೇಶದಲ್ಲಿ ತುಂಬ ಘೋರವಾಗಿದೆ. ಯಾವ ಹೊಲದಲ್ಲಿಯೂ ನಮ್ಮ ಪಶುಗಳಿಗೆ ಹುಲ್ಲು ಉಳಿದಿಲ್ಲ. ಆದ್ದರಿಂದ ನಾವು ಈ ದೇಶದಲ್ಲಿ ವಾಸಿಸಲು ಬಂದಿದ್ದೇವೆ. ನಾವು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲು ದಯವಿಟ್ಟು ನಮಗೆ ಅವಕಾಶ ಮಾಡಿಕೊಡಬೇಕೆಂದು ಕೇಳಿಕೊಳ್ಳುತ್ತಿದ್ದೇವೆ” ಎಂದು ಹೇಳಿದರು.


ಅಲ್ಲದೆ ಇನ್ನೂ ಪ್ರಯಾಸಕರವಾದ ಕೆಲಸವನ್ನು ಬಲವಂತದಿಂದ ಮಾಡಿಸಿಕೊಂಡರು.


ದೇವರು ಅವರ ನರಳಾಟವನ್ನು ಕೇಳಿ ತಾನು ಅಬ್ರಹಾಮನೊಂದಿಗೂ ಇಸಾಕನೊಂದಿಗೂ ಯಾಕೋಬನೊಂದಿಗೂ ಮಾಡಿದ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಂಡನು.


ಈಗ ನಾನು ಇಳಿದುಹೋಗಿ ಈಜಿಪ್ಟಿನವರಿಂದ ನನ್ನ ಜನರನ್ನು ರಕ್ಷಿಸುವೆನು. ನಾನು ಅವರನ್ನು ಆ ದೇಶದಿಂದ ಬಿಡುಗಡೆ ಮಾಡಿ ಒಳ್ಳೆಯದಾದ ಮತ್ತು ವಿಶಾಲವಾದ ದೇಶಕ್ಕೆ ಅವರನ್ನು ನಡೆಸುವೆನು. ಅದು ಸಮೃದ್ಧಿಕರವಾದ ದೇಶ. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸವಾಗಿರುವ ದೇಶ ಅದಾಗಿದೆ.


ಆದ್ದರಿಂದ ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತಿದ್ದೇನೆ. ಹೋಗು! ನನ್ನ ಜನರಾದ ಇಸ್ರೇಲರನ್ನು ಈಜಿಪ್ಟಿನಿಂದ ಬಿಡುಗಡೆ ಮಾಡು!” ಎಂದು ಹೇಳಿದನು.


ಈಜಿಪ್ಟಿನಲ್ಲಿ ನೀವು ಅನುಭವಿಸುತ್ತಿರುವ ಸಂಕಟಗಳಿಂದ ಬಿಡಿಸಬೇಕೆಂದು ತೀರ್ಮಾನಿಸಿದ್ದೇನೆ. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸವಾಗಿರುವ ಸಮೃದ್ಧಿಕರವಾದ ದೇಶಕ್ಕೆ ನಾನು ನಿಮ್ಮನ್ನು ನಡೆಸುವೆನು!’ ಎಂದು ಹೇಳು.


ನೀವು ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದಿರೆಂಬುದನ್ನು ಮರೆಯಬೇಡಿ. ನಿಮ್ಮ ದೇವರಾದ ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿ ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ಆದ್ದರಿಂದಲೇ ನಿಮ್ಮ ದೇವರು ಸಬ್ಬತ್ ದಿನವನ್ನು ಆಚರಿಸಬೇಕೆಂದು ಆಜ್ಞೆ ಮಾಡಿದ್ದು.


ಆತನು ತನ್ನ ಸೇವಕನಾದ ಆಬ್ರಹಾಮನಿಗೆ ತಾನು ಮಾಡಿದ ವಾಗ್ದಾನವನ್ನು ಜ್ಞಾಪಿಸಿಕೊಂಡನು.


ಈಜಿಪ್ಟಿನವರು ಇಸ್ರೇಲರ ಜೀವಿತವನ್ನು ಕಷ್ಟಕರವನ್ನಾಗಿ ಮಾಡಿದರು. ಇಸ್ರೇಲರಿಂದ ಇಟ್ಟಿಗೆ, ಗಾರೆ, ಬೇಸಾಯ ಮತ್ತು ಪ್ರತಿಯೊಂದು ಕೆಲಸವನ್ನು ಬಲವಂತವಾಗಿ ಮಾಡಿಸಿಕೊಂಡರು.


ನಮ್ಮ ಪೂರ್ವಿಕರು ಈಜಿಪ್ಟ್ ದೇಶಕ್ಕೆ ಇಳಿದುಹೋದದ್ದೂ ನಾವು ಅಲ್ಲಿ ಬಹುಕಾಲ ವಾಸವಾಗಿದ್ದದ್ದೂ ಈಜಿಪ್ಟಿನವರು ನಮಗೂ ನಮ್ಮ ಪೂರ್ವಿಕರಿಗೂ ಕ್ರೂರರಾಗಿದ್ದದ್ದೂ ನಿಮಗೆ ತಿಳಿದದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು