Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 15:15 - ಪರಿಶುದ್ದ ಬೈಬಲ್‌

15 “ನೀನು ತುಂಬಾ ಮುದುಕನಾಗುವ ತನಕ ಜೀವಿಸಿ ಸಮಾಧಾನದಿಂದ ಸಾಯುವೆ; ನಿನ್ನನ್ನು ನಿನ್ನ ಕುಟುಂಬದವರೊಡನೆ ಸಮಾಧಿ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀನಂತೂ ಸಮಾಧಾನದೊಡನೆ ಪೂರ್ವಿಕರ ಬಳಿಗೆ ಸೇರುವಿ, ಬಹಳ ವೃದ್ಧನಾಗಿ ಉತ್ತರಕ್ರಿಯೆಯನ್ನು ಹೊಂದುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನೀನಂತೂ ಹಣ್ಣುಹಣ್ಣು ಮುದುಕನಾಗಿ ಶವಸಂಸ್ಕಾರವನ್ನು ಪಡೆಯುವೆ; ಶಾಂತಿ ಸಮಾಧಾನದಿಂದ ನಿನ್ನ ಪಿತೃಗಳನ್ನು ಸೇರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀನಂತೂ ಸಮಾಧಾನದೊಡನೆ ಪಿತೃಗಳ ಬಳಿಗೆ ಸೇರುವಿ; ತುಂಬಾ ವೃದ್ಧನಾಗಿ ಉತ್ತರಕ್ರಿಯೆಯನ್ನು ಹೊಂದುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನೀನಾದರೋ ಸಮಾಧಾನದಿಂದ ನಿನ್ನ ಪಿತೃಗಳ ಬಳಿಗೆ ಸೇರುವೆ. ಬಹಳ ಮುದಿ ಪ್ರಾಯದವನಾಗಿ ಮರಣಹೊಂದುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 15:15
29 ತಿಳಿವುಗಳ ಹೋಲಿಕೆ  

ಸುಗ್ಗಿಕಾಲದವರೆಗೂ ಬೆಳೆದು ಬಲಿಯುವ ಗೋಧಿಯಂತೆ ನೀನಿರುವೆ. ಹೌದು, ನೀನು ವೃದ್ಧಾಪ್ಯದ ಕೊನೆಯವರೆಗೂ ಜೀವಿಸುವೆ.


ನಿನ್ನನ್ನು ನಿನ್ನ ಪೂರ್ವಿಕರ ಬಳಿಗೆ ತೆಗೆದುಕೊಳ್ಳುತ್ತೇನೆ. ನಿನ್ನ ಪ್ರಾರ್ಥನೆಯನ್ನು ನಾನು ಕೇಳಿದೆ. ನೀನು ನಿನ್ನ ಸಮಾಧಿಗೆ ಸಮಾಧಾನದಿಂದ ಸೇರುವೆ. ನಾನು ಈ ಸ್ಥಳದ ಮೇಲೂ ಈ ಸ್ಥಳದಲ್ಲಿ ವಾಸಿಸುವವರ ಮೇಲೂ ತರುವ ಸಂಕಟಗಳಲ್ಲಿ ನೀನು ಒಂದಾನ್ನಾದರೂ ಅನುಭವಿಸುವದಿಲ್ಲ.’” ಹಿಲ್ಕೀಯನೂ ಅರಸನ ಸೇವಕರೂ ಈ ಸಂದೇಶವನ್ನು ಅರಸನಾದ ಯೋಷೀಯನಿಗೆ ತಂದರು.


ಆ ದೇಶವನ್ನು ನೋಡಿದ ನಂತರ ನಿನ್ನ ಅಣ್ಣನಾದ ಆರೋನನಂತೆ ನೀನೂ ಸಾಯುವೆ.


“ದಾನಿಯೇಲನೇ, ನೀನು ಹೋಗಿ ಕೊನೆಯವರೆಗೆ ನಿನ್ನ ಜೀವನವನ್ನು ಸಾಗಿಸು. ನೀನು ದೀರ್ಘನಿದ್ರೆಯನ್ನು ಪಡೆಯುವೆ. ಅಂತ್ಯಕಾಲದಲ್ಲಿ, ನೀನು ದೀರ್ಘನಿದ್ರೆಯಿಂದ ಎಚ್ಚೆತ್ತು ನಿನ್ನ ಸ್ವಾಸ್ತ್ಯವನ್ನು ಪಡೆಯುವೆ” ಎಂದು ಉತ್ತರಿಸಿದನು.


“ದಾವೀದನು ತನ್ನ ಜೀವಮಾನಕಾಲದಲ್ಲಿ ದೇವರ ಚಿತ್ತಕ್ಕನುಸಾರವಾಗಿ ಬಾಳಿದನು. ಬಳಿಕ ಅವನು ಸತ್ತುಹೋದನು. ದಾವೀದನನ್ನು ಅವನ ಪಿತೃಗಳೊಂದಿಗೆ ಸಮಾಧಿಮಾಡಲಾಯಿತು. ಅವನ ದೇಹ ಸಮಾಧಿಯಲ್ಲಿ ಕೊಳೆತುಹೋಯಿತು!


ನಿನ್ನ ದೇಹ ಭೂಮಿಯಿಂದ ಬಂದಿದೆ. ನೀನು ಸತ್ತಾಗ ಅದು ಮತ್ತೆ ಭೂಮಿಯ ಪಾಲಾಗುವುದು. ಆದರೆ ನಿನ್ನ ಆತ್ಮವು ದೇವರಿಂದ ಬಂದಿದೆ. ನಿನ್ನ ದೇಹವು ಸತ್ತ ಮೇಲೆ, ನಿನ್ನ ಆತ್ಮವು ಮತ್ತೆ ದೇವರ ಬಳಿಗೆ ಹೋಗುವುದು.


ತರುವಾಯ ಯೋಬನು ಮುಪ್ಪಿನ ಮುದುಕನಾಗಿ ತೀರಿಕೊಂಡನು.


ಅವನು ಬಹಳ ಮುದುಕನಾಗಿ ಸತ್ತನು. ಅವನ ದೀರ್ಘಾಯುಷ್ಯದಲ್ಲಿ ಹೆಚ್ಚಾದ ಗೌರವ ಸನ್ಮಾನಗಳು ದೊರೆತವು. ಅವನ ನಂತರ ಮಗನಾದ ಸೊಲೊಮೋನನು ಅರಸನಾದನು.


ಈ ಪೀಳಿಗೆಯವರೆಲ್ಲರು ಸತ್ತುಹೋದ ಮೇಲೆ ಮುಂದಿನ ಪೀಳಿಗೆಯು ಬೆಳೆಯಿತು. ಈ ಹೊಸ ಪೀಳಿಗೆಗೆ ಯೆಹೋವನ ಬಗ್ಗೆ ಮತ್ತು ಯೆಹೋವನು ಇಸ್ರೇಲಿನ ಜನರಿಗಾಗಿ ಮಾಡಿದ ಮಹತ್ಕಾರ್ಯಗಳ ಬಗ್ಗೆ ಏನೂ ಗೊತ್ತಿರಲಿಲ್ಲ.


ಬಳಿಕ ಇಸ್ರೇಲನು ಅವರಿಗೆ ಈ ಆಜ್ಞೆಯನ್ನು ಕೊಟ್ಟನು: “ನಾನು ಸತ್ತಾಗ, ನನ್ನ ಪೂರ್ವಿಕರ ಸಂಗಡವಿರಲು ಇಷ್ಟಪಡುತ್ತೇನೆ. ನನ್ನ ಪೂರ್ವಿಕರಿಗೆ ಸಮಾಧಿ ಮಾಡಿರುವ ಹಿತ್ತಿಯನಾದ ಎಫ್ರೋನನ ಗವಿಯಲ್ಲಿ ನನಗೆ ಸಮಾಧಿಮಾಡಬೇಕು.


“ಆರೋನನು ಸತ್ತು ಪೂರ್ವಿಕರ ಬಳಿ ಸೇರುವ ಸಮಯ ಬಂದಿದೆ. ಇಸ್ರೇಲರಿಗೆ ನಾನು ವಾಗ್ದಾನ ಮಾಡಿದ ದೇಶದೊಳಗೆ ಆರೋನನು ಪ್ರವೇಶಿಸುವುದಿಲ್ಲ. ಯಾಕೆಂದರೆ ನೀವಿಬ್ಬರೂ ಮೆರೀಬಾ ಬುಗ್ಗೆಯ ಕುರಿತಾಗಿ ನಾನು ಕೊಟ್ಟ ಆಜ್ಞೆಗೆ ವಿಧೇಯರಾಗದಿದ್ದುದರಿಂದ ನಾನು ನಿಮಗೆ ಇದನ್ನು ಹೇಳುತ್ತಿದ್ದೇನೆ.


ಆಮೇಲೆ ಇಸಾಕನು ದಿನ ತುಂಬಿದ ಮುದುಕನಾಗುವವರೆಗೆ ಜೀವಿಸಿ ತೀರಿಕೊಂಡನು. ಅವನ ಮಕ್ಕಳಾದ ಏಸಾವನು ಮತ್ತು ಯಾಕೋಬನು ತಮ್ಮ ಅಜ್ಜನಿಗೆ ಸಮಾಧಿಯಾಗಿದ್ದ ಸ್ಥಳದಲ್ಲೇ ತಮ್ಮ ತಂದೆಗೆ ಸಮಾಧಿ ಮಾಡಿದರು.


‘ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿರುವುದನ್ನು ನೀವು ಓದಿಲ್ಲವೇ? ಹೀಗಿರುವಲ್ಲಿ, ದೇವರು ಜೀವಿತರಿಗೆ ಮಾತ್ರ ದೇವರೇ ಹೊರತು ಸತ್ತವರಿಗಲ್ಲಾ” ಅಂದನು.


ಒಬ್ಬನು ಬಹುಕಾಲ ಬದುಕಬಹುದು. ಅವನಿಗೆ ನೂರು ಮಂದಿ ಮಕ್ಕಳಿರಬಹುದು. ಆದರೆ ಅವನಿಗೆ ಸುಖತೃಪ್ತಿಯೂ ಸತ್ತ ಮೇಲೆ ಉತ್ತರಕ್ರಿಯೆಯೂ ಇಲ್ಲದಿದ್ದರೆ ಹುಟ್ಟುವಾಗಲೇ ಸಾಯುವ ಮಗು ಅವನಿಗಿಂತಲೂ ಉತ್ತಮ.


ಪವಿತ್ರರನ್ನೂ ಯಥಾರ್ಥರನ್ನೂ ಗಮನಿಸು. ಶಾಂತಿಪ್ರಿಯರು ಅನೇಕ ಸಂತಾನಗಳನ್ನು ಹೊಂದಿಕೊಳ್ಳುವರು.


ದಾವೀದನು ಬಹಳ ಮುದುಕನಾದಾಗ ತನ್ನ ಮಗನಾದ ಸೊಲೊಮೋನನನ್ನು ಇಸ್ರೇಲರ ಅರಸನನ್ನಾಗಿ ಮಾಡಿದನು.


ಅವರು ಅವನ ಶರೀರವನ್ನು ಕಾನಾನ್ ದೇಶಕ್ಕೆ ತೆಗೆದುಕೊಂಡು ಹೋಗಿ ಮಕ್ಪೇಲದಲ್ಲಿದ್ದ ಗವಿಯಲ್ಲಿ ಸಮಾಧಿ ಮಾಡಿದರು. ಮಮ್ರೆಯ ಬಯಲಿನಲ್ಲಿದ್ದ ಈ ಗವಿಯನ್ನು ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಸಮಾಧಿಯ ಸ್ಥಳಕ್ಕಾಗಿ ಕೊಂಡುಕೊಂಡಿದ್ದನು.


ಅಬ್ರಹಾಮನನ್ನು ಮತ್ತು ಅವನ ಹೆಂಡತಿಯಾದ ಸಾರಳನ್ನು ಆ ಗವಿಯಲ್ಲಿ ಸಮಾಧಿ ಮಾಡಲಾಗಿದೆ. ಇಸಾಕನನ್ನು ಮತ್ತು ರೆಬೆಕ್ಕಳನ್ನು ಅಲ್ಲಿ ಸಮಾಧಿ ಮಾಡಲಾಗಿದೆ. ನನ್ನ ಹೆಂಡತಿಯಾದ ಲೇಯಳನ್ನು ನಾನು ಅಲ್ಲಿ ಸಮಾಧಿ ಮಾಡಿದ್ದೇನೆ. ಬೆನ್ಯಾಮೀನ


ಬಳಿಕ ಅಬ್ರಹಾಮನು ತನ್ನ ಹೆಂಡತಿಯಾದ ಸಾರಳನ್ನು ಮಮ್ರೆಗೆ ಸಮೀಪದಲ್ಲಿದ್ದ ಜಮೀನಿನ ಗವಿಯಲ್ಲಿ ಸಮಾಧಿಮಾಡಿದನು. (ಅದು ಕಾನಾನ್ ದೇಶದ ಹೆಬ್ರೋನ್).


ಅವರಿಗೆ, “ನಾನು ಈ ನಾಡಿನವನಲ್ಲ. ನಾನು ಇಲ್ಲಿ ಕೇವಲ ಪ್ರವಾಸಿಗನಷ್ಟೇ. ಆದ್ದರಿಂದ ನನ್ನ ಹೆಂಡತಿಯನ್ನು ಸಮಾಧಿಮಾಡಲು ನನಗೆ ಸ್ವಲ್ಪ ಸ್ಥಳ ಬೇಕು” ಎಂದು ಹೇಳಿದನು.


ನನ್ನ ಪೂರ್ವಿಕರನ್ನು ಸಮಾಧಿ ಮಾಡಿದ ಸ್ಥಳದಲ್ಲಿಯೇ ನನ್ನನ್ನು ಸಮಾಧಿ ಮಾಡು. ನನ್ನನ್ನು ಈಜಿಪ್ಟಿನಿಂದ ತೆಗೆದುಕೊಂಡು ಹೋಗಿ ನಮ್ಮ ಕುಟುಂಬದವರ ಸ್ಮಶಾನದಲ್ಲಿ ಸಮಾಧಿ ಮಾಡು” ಎಂದು ಹೇಳಿದನು. ಯೋಸೇಫನು, “ನೀನು ಹೇಳಿದಂತೆಯೇ ಮಾಡುತ್ತೇನೆ” ಎಂದು ಪ್ರಮಾಣ ಮಾಡಿದನು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ನೀನು ಬೇಗನೇ ಸಾಯುವೆ. ನಿನ್ನ ಪೂರ್ವಿಕರ ಬಳಿಗೆ ನೀನು ಸೇರಿದಾಗ ಈ ಜನರು ನನಗೆ ನಂಬಿಗಸ್ತರಾಗಿರುವುದಿಲ್ಲ. ನಾನು ಅವರೊಡನೆ ಮಾಡಿರುವ ಒಡಂಬಡಿಕೆಯನ್ನು ಅವರು ಮುರಿಯುವರು. ಅವರು ನನ್ನನ್ನು ತೊರೆದು ತಾವು ಸ್ವಾಧೀನಮಾಡಿಕೊಳ್ಳುವ ದೇಶದ ಅನ್ಯದೇವತೆಗಳನ್ನು ಪೂಜಿಸುವರು.


ಸತ್ತು ತನ್ನ ಪೂರ್ವಿಕರ ಬಳಿ ಸೇರುವ ಕಾಲ ಅವನಿಗೆ ಬಂದೇ ಬರುವುದು. ಅವನು ಹಗಲಿನ ಬೆಳಕನ್ನು ಮತ್ತೆಂದಿಗೂ ನೋಡಲಾರ.


ಅದು ಈಜುವಾಗ ಅದರ ಹಿಂದೆ ಒಂದು ದಾರಿಯೇ ನಿರ್ಮಿತವಾಗುವುದು. ಅದು ನೀರನ್ನು ಕಲಕಿ ತನ್ನ ಹಿಂದೆ ಬಿಳಿ ನೊರೆಯನ್ನು ಉಂಟುಮಾಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು