ಆದಿಕಾಂಡ 15:17 - ಪರಿಶುದ್ದ ಬೈಬಲ್17 ಸೂರ್ಯನು ಮುಳುಗಿದ ಮೇಲೆ ತುಂಬ ಕತ್ತಲಾಯಿತು. ಕಡಿದುಹಾಕಿದ್ದ ಪ್ರತಿಯೊಂದು ಪ್ರಾಣಿಗಳ ದೇಹದ ಎರಡೆರಡು ಹೋಳುಗಳು ಇನ್ನೂ ನೆಲದ ಮೇಲೆ ಇದ್ದವು. ಆ ಸಮಯದಲ್ಲಿ ಇದ್ದಕ್ಕಿದ್ದಂತೆ ಹೊಗೆ ಮತ್ತು ಬೆಂಕಿಗಳಿಂದ ಕೂಡಿದ ದೀವಿಟಿಗೆಯು ಈ ತುಂಡುಗಳ ನಡುವೆ ಹಾದುಹೋಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಹೊತ್ತು ಮುಳುಗಿ ಕಾರ್ಗತ್ತಲಾದಾಗ, ಇಗೋ, ಹೊಗೆ ಹಾಯುವ ಒಲೆಯೂ ಉರಿಯುವ ದೀಪವೂ ಕಾಣಿಸಿ ಆ ತುಂಡುಗಳ ಮಧ್ಯದಲ್ಲಿ ಹಾದು ಹೋದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಹೊತ್ತು ಮುಳುಗಿ ಕಾರ್ಗತ್ತಲಾದಾಗ ಇಗೋ, ಹೊಗೆಯಾಡುವ ಒಲೆಯೊಂದು ಹಾಗು ಉರಿಯುವ ದೀವಿಟಿಗೆಯೊಂದು ಕಾಣಿಸಿಕೊಂಡು ಆ ತುಂಡುಗಳ ನಡುವೆ ಹಾದುಹೋದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಹೊತ್ತು ಮುಣುಗಿ ಕಾರ್ಗತ್ತಲಾದಾಗ ಇಗೋ ಹೊಗೆಹಾಯುವ ಒಲೆಯೂ ಉರಿಯುವ ದೀವಟಿಗೆಯೂ ಕಾಣಿಸಿ ಆ ತುಂಡುಗಳ ನಡುವೆ ಹೋದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಇದಾದ ಮೇಲೆ ಹೊತ್ತು ಮುಳುಗಿ ಕತ್ತಲಾಗುತ್ತಿರಲು, ಹೊಗೆ ಹಾಯುವ ಒಲೆಯೂ ಉರಿಯುವ ದೀಪವೂ ಆ ತುಂಡುಗಳ ಮಧ್ಯದಲ್ಲಿ ಹಾದು ಹೋದವು. ಅಧ್ಯಾಯವನ್ನು ನೋಡಿ |
ನಾನು ನಿಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಬಗ್ಗೆ ಮಾತನಾಡುತ್ತಿದ್ದೇನೆ. ನಾನು ಈಜಿಪ್ಟಿನಿಂದ ಅವರನ್ನು ಹೊರತಂದಾಗ ನಾನು ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಂಡೆ. ಈಜಿಪ್ಟು ಅನೇಕ ಕಷ್ಟಗಳ ನಾಡಾಗಿತ್ತು. ಅದು ಕಬ್ಬಿಣವನ್ನು ಕರಗಿಸುವ ಉರಿಯುವ ಕುಲುಮೆಯಂತಿತ್ತು. ನಾನು ಅವರಿಗೆ, ‘ನನ್ನ ಆಜ್ಞಾಪಾಲನೆಯನ್ನು ಮಾಡಿರಿ ಮತ್ತು ನಾನು ಹೇಳಿದಂತೆ ಎಲ್ಲವನ್ನು ಮಾಡಿರಿ. ಆಗ ನೀವು ನನ್ನ ಭಕ್ತರಾಗುವಿರಿ. ನಾನು ನಿಮ್ಮ ದೇವರಾಗುವೆನು’ ಎಂದೆ.