ಆದಿಕಾಂಡ 15:5 - ಪರಿಶುದ್ದ ಬೈಬಲ್5 ನಂತರ ದೇವರು ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು ಅವನಿಗೆ, “ಆಕಾಶದ ಕಡೆಗೆ ಕಣ್ಣೆತ್ತಿ ನಕ್ಷತ್ರಗಳನ್ನು ನೋಡು. ನೀನು ಲೆಕ್ಕ ಮಾಡಲಾರದಷ್ಟು ನಕ್ಷತ್ರಗಳಿವೆ. ಮುಂದಿನ ಕಾಲದಲ್ಲಿ ನಿನ್ನ ಕುಟುಂಬವು ಅದೇ ರೀತಿಯಲ್ಲಿರುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 “ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವುದು ನಿನ್ನಿಂದಾದರೆ ಲೆಕ್ಕಿಸು.” ನಂತರ ಯೆಹೋವನು ಅಬ್ರಾಮನಿಗೆ, “ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸರ್ವೇಶ್ವರ ಬಳಿಕ ಅಬ್ರಾಮನನ್ನು ಹೊರಗೆ ಕರೆತಂದು, “ಆಕಾಶದ ಕಡೆಗೆ ನೋಡು. ಆ ನಕ್ಷತ್ರಗಳನ್ನು ನಿನ್ನಿಂದಾದರೆ ಲೆಕ್ಕಿಸು. ನಿನ್ನ ಸಂತಾನವು ಅಷ್ಟು ಅಸಂಖ್ಯಾತವಾಗುವುದು!” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವನನ್ನು ಹೊರಗೆ ಕರತಂದು - ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವದು ನಿನ್ನಿಂದಾದರೆ ಲೆಕ್ಕಿಸು; ನಿನ್ನ ಸಂತಾನವು ಅಷ್ಟಾಗುವದು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೆಹೋವ ದೇವರು ಅವನನ್ನು ಹೊರಗೆ ಕರೆದುಕೊಂಡು ಬಂದು, “ಈಗ ನೀನು ಆಕಾಶವನ್ನು ದೃಷ್ಟಿಸಿ, ನಕ್ಷತ್ರಗಳನ್ನು ಲೆಕ್ಕಿಸಲು ನಿನ್ನಿಂದಾದರೆ, ಲೆಕ್ಕಿಸು. ಅದರಂತೆಯೇ ನಿನ್ನ ಸಂತತಿಯು ಆಗುವುದು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |
ನಿನ್ನ ಸೇವೆಮಾಡಿದ ಅಬ್ರಹಾಮನನ್ನು, ಇಸಾಕನನ್ನು, ಯಾಕೋಬನನ್ನು ಜ್ಞಾಪಿಸಿಕೊ. ನೀನು ನಿನ್ನ ಹೆಸರನ್ನು ಉಪಯೋಗಿಸಿ ಆ ಜನರಿಗೆ ವಾಗ್ದಾನವನ್ನು ಮಾಡಿದೆ. ‘ನಾನು ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಷ್ಟು ಮಾಡುವೆನು. ನಾನು ವಾಗ್ದಾನ ಮಾಡಿದಂತೆ ಈ ದೇಶವನ್ನೆಲ್ಲಾ ನಿನ್ನ ಸಂತತಿಗಳವರಿಗೆ ಕೊಡುವೆನು. ಈ ದೇಶ ಎಂದೆಂದಿಗೂ ಅವರದಾಗಿರುವುದು’ ಎಂದು ನೀನು ನಿನ್ನ ಹೆಸರಿನಲ್ಲಿ ವಾಗ್ದಾನ ಮಾಡಿದೆಯಲ್ಲಾ” ಅಂದನು.