Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 15:9 - ಪರಿಶುದ್ದ ಬೈಬಲ್‌

9 ದೇವರು ಅಬ್ರಾಮನಿಗೆ, “ನಾವು ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳೋಣ. ಮೂರು ವರ್ಷದ ಒಂದು ಹಸುವನ್ನೂ ಮೂರು ವರ್ಷದ ಒಂದು ಆಡನ್ನೂ ಮತ್ತು ಮೂರು ವರ್ಷದ ಒಂದು ಟಗರನ್ನೂ ತೆಗೆದುಕೊಂಡು ಬಾ. ಇದಲ್ಲದೆ ಒಂದು ಬೆಳವಕ್ಕಿಯನ್ನೂ ಒಂದು ಪಾರಿವಾಳವನ್ನೂ ತೆಗೆದುಕೊಂಡು ಬಾ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅದಕ್ಕೆ ಆತನು ಯೆಹೋವನಿಗೆ, “ನೀನು ಮೂರು ವರ್ಷದ ಮಣಕ, ಒಂದು ಆಡು, ಒಂದು ಟಗರು, ಒಂದು ಬೆಳವಕ್ಕಿ, ಒಂದು ಪಾರಿವಾಳದ ಮರಿಯನ್ನೂ ತೆಗೆದುಕೊಂಡು ಬಾ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸರ್ವೇಶ್ವರ ಪ್ರತ್ಯುತ್ತರವಾಗಿ, “ನೀನು ಮೂರು ಮೂರು ವರ್ಷದ ಒಂದು ಕಡಸನ್ನು, ಒಂದು ಆಡನ್ನು, ಒಂದು ಟಗರನ್ನು, ಒಂದು ಬೆಳವಕ್ಕಿಯನ್ನು ಹಾಗು ಒಂದು ಮರಿಪಾರಿವಾಳವನ್ನು ತೆಗೆದುಕೊಂಡು ಬಾ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅದಕ್ಕೆ ಆತನು - ನೀನು ಮೂರು ಮೂರು ವರುಷಗಳ ಮಣಕ, ಆಡು, ಟಗರು ಇವುಗಳನ್ನೂ ಬೆಳವಕ್ಕಿಯನ್ನೂ ಪಾರಿವಾಳದ ಮರಿಯನ್ನೂ ತೆಗೆದುಕೊಂಡು ಬಾ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅದಕ್ಕೆ ಯೆಹೋವ ದೇವರು ಅಬ್ರಾಮನಿಗೆ, “ಮೂರು ವರ್ಷದ ಕಡಸನ್ನು, ಮೂರು ವರ್ಷದ ಮೇಕೆಯನ್ನು, ಮೂರು ವರ್ಷದ ಟಗರನ್ನು, ಒಂದು ಬೆಳವಕ್ಕಿಯನ್ನು, ಒಂದು ಪಾರಿವಾಳವನ್ನು ನನಗಾಗಿ ತೆಗೆದುಕೊಂಡು ಬಾ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 15:9
18 ತಿಳಿವುಗಳ ಹೋಲಿಕೆ  

“ಎರಡು ಪಾರಿವಾಳಗಳನ್ನು ಅಥವಾ ಎರಡು ಬೆಳವಕ್ಕಿಗಳನ್ನು ಯಜ್ಞವಾಗಿ ಸಮರ್ಪಿಸಬೇಕು” ಎಂದು ಸಹ ಪ್ರಭುವಿನ ಧರ್ಮಶಾಸ್ತ್ರವು ಹೇಳುತ್ತದೆ. ಆದ್ದರಿಂದ ಯೋಸೇಫನು ಮತ್ತು ಮರಿಯಳು ಜೆರುಸಲೇಮಿಗೆ ಹೋದರು.


“ಬಳಿಕ ಯಾಜಕನು ಬೆಳವಕ್ಕಿಗಳಲ್ಲಿ ಅಥವಾ ಪಾರಿವಾಳ ಮರಿಗಳಲ್ಲಿ ಒಂದನ್ನು ಸಮರ್ಪಿಸಬೇಕು (ಆ ವ್ಯಕ್ತಿಯು ಯಾವುದನ್ನು ಕೊಡಲು ಶಕ್ತನಾಗಿದ್ದಾನೊ ಅದನ್ನು ಅವನು ಸಮರ್ಪಿಸಬೇಕು.)


ಎರಡು ಬೆಳವಕ್ಕಿಗಳನ್ನು ಮತ್ತು ಎರಡು ಪಾರಿವಾಳ ಮರಿಗಳನ್ನು ತೆಗೆದುಕೊಳ್ಳಬೇಕು. ಬಡವರು ಸಹ ಅವುಗಳನ್ನು ಕೊಡಲು ಶಕ್ತರಾಗಿರುವರು. ಒಂದು ಪಕ್ಷಿಯು ಪಾಪಪರಿಹಾರಕ ಯಜ್ಞಕ್ಕಾಗಿಯೂ ಇನ್ನೊಂದು ಪಕ್ಷಿಯು ಸರ್ವಾಂಗಹೋಮಕ್ಕಾಗಿಯೂ ಇರುತ್ತದೆ.


ಮೋಶೆಯು ಆರೋನನಿಗೆ ಹೀಗೆಂದನು; “ಒಂದು ಎಳೆಹೋರಿಯನ್ನೂ ಒಂದು ಟಗರನ್ನೂ ತೆಗೆದುಕೊ. ಆ ಪಶುಗಳಲ್ಲಿ ಏನೂ ದೋಷವಿರಬಾರದು. ಹೋರಿಯನ್ನು ಪಾಪಪರಿಹಾರಕ ಯಜ್ಞವಾಗಿಯೂ ಟಗರನ್ನು ಸರ್ವಾಂಗಹೋಮವಾಗಿಯೂ ಯೆಹೋವನಿಗೆ ಸಮರ್ಪಿಸು.


“ಒಬ್ಬನು ಕುರಿಯನ್ನಾಗಲಿ ಆಡನ್ನಾಗಲಿ ಯೆಹೋವನಿಗೆ ಸಮಾಧಾನಯಜ್ಞವಾಗಿ ಕೊಡುವಾಗ, ಆ ಪಶುವಿನಲ್ಲಿ ಯಾವ ದೋಷವೂ ಇರಬಾರದು. ಅದು ಗಂಡು ಅಥವಾ ಹೆಣ್ಣಾಗಿರಬಹುದು.


“ಯಾವನಾದರೂ ಸಮಾಧಾನಯಜ್ಞ ಮಾಡಬೇಕಾದರೆ ಅವನು ತನ್ನ ಪಶುಮಂದೆಯಿಂದ ಗಂಡುಪಶುವನ್ನಾಗಲಿ ಹೆಣ್ಣುಪಶುವನ್ನಾಗಲಿ ಅರ್ಪಿಸಬಹುದು. ಯೆಹೋವನ ಎದುರಿನಲ್ಲಿ ಅರ್ಪಿಸಲ್ಪಡುವ ಅದು ಅಂಗದೋಷವಿಲ್ಲದ್ದಾಗಿರಬೇಕು.


“ಒಬ್ಬನು ಪಕ್ಷಿಯನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸುವಾಗ ಆ ಪಕ್ಷಿಯು ಬೆಳೆವಕ್ಕಿಯಾಗಲಿ ಪಾರಿವಾಳದ ಮರಿಯಾಗಲಿ ಆಗಿರಬೇಕು.


ಮೋವಾಬಿನ ಬಗ್ಗೆ ನನ್ನ ಹೃದಯವು ಮರುಗುತ್ತಿದೆ. ಜನರು ಸುರಕ್ಷತೆಗಾಗಿ ಅತ್ತಿತ್ತ ಓಡಾಡುತ್ತಿದ್ದಾರೆ. ಅವರು ಬಹುದೂರವಿರುವ ಚೋಯರಿಗೆ ಓಡುತ್ತಿದ್ದಾರೆ. ಎಗ್ಲತ್ ಶೆಲಿಶೀಯಕ್ಕೂ ಓಡುತ್ತಾರೆ. ಪರ್ವತಮಾರ್ಗವಾಗಿ ಲೂಹೀಥ್ ಗೆ ಹೋಗುತ್ತಿರುವಾಗ ಜನರು ಅಳುತ್ತಾ ಹೋಗುತ್ತಾರೆ. ಹೊರೊನಯಿಮಿಗೆ ಹೋಗುವ ಮಾರ್ಗದಲ್ಲಿ ಜನರು ಜೋರಾಗಿ ಅಳುತ್ತಾ ಹೋಗುತ್ತಿದ್ದಾರೆ.


ದೇವರು, “ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆ ಮಾಡಿಕೊಂಡ ನನ್ನ ಪವಿತ್ರ ಪ್ರಜೆಗಳೇ, ನನ್ನ ಸುತ್ತಲೂ ಸೇರಿಬನ್ನಿರಿ” ಎಂದು ಆಜ್ಞಾಪಿಸುವನು.


ಸಮಾಧಾನಯಜ್ಞಕ್ಕಾಗಿ ಒಂದು ಹೋರಿಯನ್ನೂ ಒಂದು ಟಗರನ್ನೂ ತೆಗೆದುಕೊಂಡು ಎಣ್ಣೆ ಬೆರೆಸಿದ ಧಾನ್ಯಸಮರ್ಪಣೆಗಳೊಡನೆ ಅವುಗಳನ್ನು ಯೆಹೋವನ ಮುಂದೆ ಅರ್ಪಿಸಿರಿ. ಯಾಕೆಂದರೆ ಈ ದಿನ ಯೆಹೋವನು ನಿಮಗೆ ಪ್ರತ್ಯಕ್ಷವಾಗುವನು.’”


“ಒಬ್ಬನು ಕುರಿಯನ್ನಾಗಲಿ ಆಡನ್ನಾಗಲಿ ಸರ್ವಾಂಗಹೋಮವಾಗಿ ಅರ್ಪಿಸುವಾಗ, ಆ ಪ್ರಾಣಿಯು ಯಾವ ದೋಷವಿಲ್ಲದ ಗಂಡಾಗಿರಬೇಕು.


“ಒಬ್ಬನು ತನ್ನ ದನಗಳಲ್ಲಿ ಒಂದನ್ನು ಸರ್ವಾಂಗಹೋಮವಾಗಿ ಅರ್ಪಿಸಬಯಸಿದರೆ ಆ ಪಶುವು ಯಾವ ದೋಷವಿಲ್ಲದ ಹೋರಿಯಾಗಿರಬೇಕು. ಅವನು ಆ ಪಶುವನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಆಗ ಯೆಹೋವನು ಆ ಸಮರ್ಪಣೆಯನ್ನು ಮೆಚ್ಚಿಕೊಳ್ಳುವನು.


ಅಬ್ರಹಾಮನು ಕಣ್ಣೆತ್ತಿ ನೋಡಿದಾಗ ಒಂದು ಟಗರನ್ನು ಕಂಡನು. ಆ ಟಗರಿನ ಕೊಂಬುಗಳು ಒಂದು ಪೊದೆಗೆ ಸಿಕ್ಕಿಕೊಂಡಿದ್ದವು. ಕೂಡಲೇ ಅವನು ಹೋಗಿ, ಆ ಟಗರನ್ನು ಎಳೆದುಕೊಂಡು ಬಂದು ದೇವರಿಗೆ ತನ್ನ ಮಗನ ಬದಲಾಗಿ ಯಜ್ಞವಾಗಿ ಅರ್ಪಿಸಿದನು.


ಅದಕ್ಕೆ ಅಬ್ರಾಮನು, “ಯೆಹೋವನೇ, ನನ್ನ ಒಡೆಯನೇ, ನನಗೆ ಈ ದೇಶವು ದೊರೆಯುತ್ತದೆಯೆಂದು ಖಚಿತಪಡಿಸಿಕೊಳ್ಳುವುದು ಹೇಗೆ?” ಎಂದು ಕೇಳಿದನು.


ಅಬ್ರಾಮನು ದೇವರಿಗೋಸ್ಕರ ಅವುಗಳನ್ನೆಲ್ಲ ತೆಗೆದುಕೊಂಡು ಬಂದನು. ಅಬ್ರಾಮನು ಅವುಗಳನ್ನು ಕತ್ತರಿಸಿ ಎರಡೆರಡು ಹೋಳು ಮಾಡಿದನು. ಆಮೇಲೆ ಅಬ್ರಾಮನು ತುಂಡಿಗೆ ತುಂಡನ್ನು ಎದುರಾಗಿಟ್ಟನು. ಅಬ್ರಾಮನು ಪಕ್ಷಿಗಳನ್ನು ಮಾತ್ರ ಎರಡೆರಡು ಹೋಳು ಮಾಡಲಿಲ್ಲ.


“ಶುದ್ಧೀಕರಣ ಸಮಯ ಪೂರ್ತಿಯಾದ ನಂತರ ಹೆಣ್ಣುಮಗುವಿನ ಅಥವಾ ಗಂಡುಮಗುವಿನ ತಾಯಿಯು ವಿಶೇಷ ಯಜ್ಞಗಳನ್ನು ದೇವದರ್ಶನಗುಡಾರದ ಬಾಗಿಲ ಬಳಿಗೆ ತಂದು ಅವುಗಳನ್ನು ಯಾಜಕನಿಗೆ ಕೊಡಬೇಕು. ಆಕೆಯು ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಕುರಿಮರಿಯನ್ನೂ ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಬೆಳವಕ್ಕಿಯನ್ನಾಗಲಿ ಅಥವಾ ಪಾರಿವಾಳದ ಮರಿಯನ್ನಾಗಲಿ ತರಬೇಕು.


ಭೂಮಿಯ ಮೇಲೆ ಹೂವುಗಳು ಕಾಣುತ್ತವೆ; ಪಕ್ಷಿಗಳು ಹಾಡುವ ಸಮಯವು ಬಂದಿದೆ. ದೇಶದಲ್ಲಿ ಪಾರಿವಾಳದ ಸ್ವರವು ಕೇಳಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು