ಆದಿಕಾಂಡ 16:13 - ಪರಿಶುದ್ದ ಬೈಬಲ್13 ಯೆಹೋವನು ತನ್ನೊಡನೆ ಮಾತಾಡಿದ್ದರಿಂದ ಹಾಗರಳು, “ಈ ಸ್ಥಳದಲ್ಲಿಯೂ ದೇವರು ನನ್ನನ್ನು ನೋಡಿ ನನಗಾಗಿ ಚಿಂತಿಸುತ್ತಾನೆ ಎಂದುಕೊಂಡು ಆತನಿಗೆ ‘ನನ್ನನ್ನು ನೋಡುವ ದೇವರು’” ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಮೇಲೆ ಆಕೆಯು ತನ್ನ ಸಂಗಡ ಮಾತನಾಡಿದ ಯೆಹೋವನಿಗೆ, “ನೀನು ನನ್ನನ್ನು ನೋಡುವ ದೇವರು” ಎಂದು ಹೆಸರಿಟ್ಟಳು: ಏಕೆಂದರೆ, “ನನ್ನನ್ನು ನೋಡುವಾತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ” ಎಂದುಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಹಾಗರಳು, “ನನ್ನನ್ನು ನೋಡುವಾತ ದೇವರನ್ನು ನಾನಿಲ್ಲೇ ನೋಡಿಬಿಟ್ಟೆನಲ್ಲಾ!” ಎಂದುಕೊಂಡು ತನ್ನ ಸಂಗಡ ಮಾತನಾಡಿದ ಸರ್ವೇಶ್ವರ ಸ್ವಾಮಿಗೆ, “ಎಲ್ಲವನ್ನು ನೋಡುವಾತ ದೇವರು" ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅವಳು - ನನ್ನನ್ನು ನೋಡುವಾತನನ್ನು ನಾನು ಇಲ್ಲಿಯೂ ನೋಡಿದ್ದೇನಲ್ಲಾ ಅಂದುಕೊಂಡು ತನ್ನ ಸಂಗಡ ಮಾತಾಡಿದ್ದ ಯೆಹೋವನಿಗೆ [ಎಲ್ಲವನ್ನೂ] ನೋಡುವ ದೇವರೆಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಮೇಲೆ ಆಕೆಯು ತನ್ನ ಸಂಗಡ ಮಾತನಾಡಿದ ಯೆಹೋವ ದೇವರಿಗೆ, “ನೀವು ನನ್ನನ್ನು ನೋಡುವ ದೇವರು,” ಎಂದು ಹೆಸರಿಟ್ಟಳು. ಏಕೆಂದರೆ, “ನನ್ನನ್ನು ನೋಡುವ ದೇವರನ್ನು ನಾನು ಇಲ್ಲಿ ನೋಡಿದೆ,” ಎಂದುಕೊಂಡಳು. ಅಧ್ಯಾಯವನ್ನು ನೋಡಿ |