Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 16:15 - ಪರಿಶುದ್ದ ಬೈಬಲ್‌

15 ಹಾಗರಳು ಅಬ್ರಾಮನ ಮಗನಿಗೆ ಜನ್ಮಕೊಟ್ಟಳು. ಅಬ್ರಾಮನು ಆ ಮಗನಿಗೆ ಇಷ್ಮಾಯೇಲ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹಾಗರಳು ಅಬ್ರಾಮನಿಂದ ಒಬ್ಬ ಮಗನನ್ನು ಹೆತ್ತಳು. ಅಬ್ರಾಮನು ಅವನಿಗೆ ಇಷ್ಮಾಯೇಲ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಹಾಗರಳು ಅಬ್ರಾಮನಿಗೆ ಒಬ್ಬ ಮಗನನ್ನು ಹೆತ್ತಳು. ಅಬ್ರಾಮನು ಅವನಿಗೆ ಇಷ್ಮಾಯೇಲ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಹಾಗರಳು ಅಬ್ರಾಮನಿಂದ ಮಗನನ್ನು ಹೆತ್ತಳು; ಅಬ್ರಾಮನು ಅವನಿಗೆ ಇಷ್ಮಾಯೇಲ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ತರುವಾಯ ಹಾಗರಳು ಅಬ್ರಾಮನಿಗೆ ಮಗನನ್ನು ಹೆತ್ತಳು. ಹಾಗರಳ ಮಗನಿಗೆ ಅಬ್ರಾಮನು ಇಷ್ಮಾಯೇಲ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 16:15
13 ತಿಳಿವುಗಳ ಹೋಲಿಕೆ  

ಇದು ಇಷ್ಮಾಯೇಲನ ವಂಶಾವಳಿ: ಇಷ್ಮಾಯೇಲನು ಅಬ್ರಹಾಮನ ಮತ್ತು ಹಾಗರಳ ಮಗನು. (ಈಜಿಪ್ಟಿನವಳಾದ ಹಾಗರಳು ಸಾರಳ ಸೇವಕಿ.)


ಅಬ್ರಹಾಮನ ಗಂಡುಮಕ್ಕಳು: ಇಸಾಕ್ ಮತ್ತು ಇಷ್ಮಾಯೇಲ್,


ಈ ವ್ಯಾಪಾರಿಗಳಿಗೆ ನಾವು ಅವನನ್ನು ಮಾರಿದರೆ ನಮಗೆ ಹೆಚ್ಚು ಲಾಭವಾಗುವುದು; ಆಮೇಲೆ ನಮ್ಮ ತಮ್ಮನನ್ನು ಕೊಂದ ಅಪರಾಧವೂ ನಮ್ಮ ಮೇಲಿರುವುದಿಲ್ಲ” ಎಂದು ಹೇಳಿದನು. ಅದಕ್ಕೆ ಉಳಿದ ಸಹೋದರರೆಲ್ಲ ಒಪ್ಪಿಕೊಂಡರು.


ಏಸಾವನಿಗೆ ಈಗಾಗಲೇ ಇಬ್ಬರು ಹೆಂಡತಿಯರಿದ್ದರು. ಆದರೂ ಅವನು ಇಷ್ಮಾಯೇಲನ ಬಳಿಗೆ ಹೋಗಿ ಅವನ ಮಗಳಾದ ಮಹಲತ್ ಎಂಬಾಕೆಯನ್ನು ಮದುವೆ ಮಾಡಿಕೊಂಡನು. ಇಷ್ಮಾಯೇಲನು ಅಬ್ರಹಾಮನ ಮಗನು. ಮಹಲತಳು ನೆಬಾಯೋತನ ತಂಗಿ.


ಅವನ ಗಂಡುಮಕ್ಕಳಾದ ಇಸಾಕ ಮತ್ತು ಇಷ್ಮಾಯೇಲರು ಅವನನ್ನು ಮಕ್ಪೇಲದ ಗವಿಯಲ್ಲಿ ಸಮಾಧಿಮಾಡಿದರು. ಈ ಗವಿಯು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಜಮೀನಿನಲ್ಲಿದೆ. ಅದು ಮಮ್ರೆಗೆ ಪೂರ್ವದಿಕ್ಕಿನಲ್ಲಿದೆ.


“ನೀನು ಇಷ್ಮಾಯೇಲನ ಬಗ್ಗೆ ಮಾಡಿದ ಬಿನ್ನಹವನ್ನು ಕೇಳಿದ್ದೇನೆ. ನಾನು ಅವನನ್ನು ಆಶೀರ್ವದಿಸುವೆನು. ಅವನು ಅನೇಕ ಮಕ್ಕಳನ್ನು ಪಡೆದುಕೊಳ್ಳುವನು. ಹನ್ನೆರಡು ಮಹಾನಾಯಕರುಗಳಿಗೆ ಅವನು ತಂದೆಯಾಗುವನು. ಅವನ ಸಂತತಿಯು ಮಹಾಜನಾಂಗವಾಗುವುದು.


ಆಮೇಲೆ ಅಬ್ರಹಾಮನು ದೇವರಿಗೆ, “ಇಷ್ಮಾಯೇಲನೇ ನಿನ್ನ ಆಶೀರ್ವಾದವನ್ನು ಹೊಂದಿಕೊಂಡು ಜೀವಿಸಬಾರದೇಕೆ?” ಎಂದು ಕೇಳಿದನು.


ಇದಲ್ಲದೆ ದೇವದೂತನು ಆಕೆಗೆ, “ಹಾಗರಳೇ, ಈಗ ನೀನು ಗರ್ಭಿಣಿಯಾಗಿರುವೆ; ನಿನಗೆ ಒಬ್ಬ ಮಗನು ಹುಟ್ಟುವನು. ನೀನು ಅವನಿಗೆ ಇಷ್ಮಾಯೇಲ್ ಎಂದು ಹೆಸರಿಡಬೇಕು; ಯಾಕೆಂದರೆ ಯೆಹೋವನು ನಿನ್ನ ಕಷ್ಟಗಳನ್ನು ಕೇಳಿದ್ದಾನೆ; ಆತನು ನಿನಗೆ ಸಹಾಯ ಮಾಡುವನು.


ಆದ್ದರಿಂದ ಆ ಬಾವಿಗೆ ಬೀರ್‌ಲಹೈರೋಯಿ (ಬೀರ್‌ಲಹೈರೋಯಿ. ಇದರರ್ಥ: “ನನ್ನನ್ನು ನೋಡುವ ಜೀವಸ್ವರೂಪನ ಬಾವಿ.”) ಎಂದು ಹೆಸರಾಯಿತು. ಈ ಬಾವಿಯು ಕಾದೇಶಿಗೂ ಬೆರೆದಿಗೂ ನಡುವೆ ಇದೆ.


ಅಬ್ರಾಮನಿಗೆ ಎಂಭತ್ತಾರು ವರ್ಷವಾಗಿದ್ದಾಗ ಹಾಗರಳಲ್ಲಿ ಇಷ್ಮಾಯೇಲನು ಜನಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು