ಆದಿಕಾಂಡ 16:5 - ಪರಿಶುದ್ದ ಬೈಬಲ್5 ಆಗ ಸಾರಯಳು ಅಬ್ರಾಮನಿಗೆ, “ನನ್ನ ಸಂಕಟಕ್ಕೆ ನೀನೇ ಕಾರಣ. ನಾನು ಅವಳನ್ನು ನಿನಗೆ ಕೊಟ್ಟೆನು. ಈಗ ಅವಳು ಗರ್ಭಿಣಿಯಾಗಿದ್ದಾಳೆ ಮತ್ತು ನನ್ನನ್ನೇ ಕಡೆಗಣಿಸುತ್ತಿದ್ದಾಳೆ. ಯೆಹೋವನೇ ನನಗೂ ನಿನಗೂ ನ್ಯಾಯ ತೀರಿಸಲಿ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ಸಾರಯಳು ಅಬ್ರಾಮನಿಗೆ, “ನನ್ನ ಗೋಳು ನಿನಗೆ ತಟ್ಟಲಿ; ನನ್ನ ದಾಸಿಯನ್ನು ನಿನಗೆ ಹೆಂಡತಿಯಾಗಿ ಒಪ್ಪಿಸಿದೆನಷ್ಟೆ; ಅವಳು ತಾನು ಬಸುರಾದೆನೆಂದು ತಿಳಿದು ನನ್ನನ್ನು ತಾತ್ಸಾರಮಾಡುತ್ತಿದ್ದಾಳೆ; ನಿನಗೂ ನನಗೂ ನಡುವೆ ಯೆಹೋವನೇ ನ್ಯಾಯತೀರಿಸಲಿ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆಗ ಸಾರಯಳು ಅಬ್ರಾಮನಿಗೆ, “ನನಗೆ ಅನ್ಯಾಯವಾಗುತ್ತಿದೆ; ಇದಕ್ಕೆ ನೀವೇ ಹೊಣೆ, ನನ್ನ ದಾಸಿಯನ್ನು ನಿಮಗೆ ಉಪಪತ್ನಿಯಾಗಿ ಕೊಟ್ಟೆನಷ್ಟೆ; ಇವಳೋ, ತಾನು ಗರ್ಭಿಣಿಯಾದೆನೆಂದು ತಿಳಿದದ್ದೆ, ನನ್ನನ್ನು ತಾತ್ಸಾರ ಮಾಡುತ್ತಿದ್ದಾಳೆ; ಈಗ ಸರ್ವೇಶ್ವರ ಸ್ವಾಮಿಯೇ ನಿಮಗೂ ನನಗೂ ನ್ಯಾಯ ತೀರಿಸಬೇಕು,” ಎಂದು ದೂರಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಗ ಸಾರಯಳು ಅಬ್ರಾಮನಿಗೆ - ನನ್ನ ಗೋಳು ನಿನಗೆ ತಗಲಲಿ; ನನ್ನ ದಾಸಿಯನ್ನು ನಿನಗೆ ಹೆಂಡತಿಯಾಗಿ ಒಪ್ಪಿಸಿದೆನಷ್ಟೆ; ಅವಳು ತಾನು ಬಸುರಾದೆನೆಂದು ತಿಳಿದು ನನ್ನನ್ನು ತಾತ್ಸಾರಮಾಡುತ್ತಾಳೆ; ನಿನಗೂ ನನಗೂ ಯೆಹೋವನೇ ನ್ಯಾಯತೀರಿಸಲಿ ಎಂದು ಹೇಳಲು ಅಬ್ರಾಮನು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಸಾರಯಳು ಅಬ್ರಾಮನಿಗೆ, “ನನಗೆ ಆದ ಅನ್ಯಾಯಕ್ಕೆ ನೀನೇ ಹೊಣೆ. ನಾನು ನನ್ನ ದಾಸಿಯನ್ನು ನಿನಗೆ ಹೆಂಡತಿಯಾಗಿ ಕೊಟ್ಟೆನು. ಈಗ ಅವಳು ಗರ್ಭಿಣಿಯಾದ್ದರಿಂದ ನಾನು ಅವಳ ಕಣ್ಣಿಗೆ ತಿರಸ್ಕಾರಕ್ಕೆ ಯೋಗ್ಯಳಾದೆನು. ಯೆಹೋವ ದೇವರು ನಿನಗೂ ನನಗೂ ನ್ಯಾಯತೀರಿಸಲಿ,” ಎಂದಳು. ಅಧ್ಯಾಯವನ್ನು ನೋಡಿ |