ಆದಿಕಾಂಡ 16:8 - ಪರಿಶುದ್ದ ಬೈಬಲ್8 ದೇವದೂತನು ಅವಳಿಗೆ, “ಹಾಗರಳೇ, ನೀನು ಸಾರಯಳ ಸೇವಕಿಯಾಗಿದ್ದರೂ ಯಾಕೆ ಇಲ್ಲಿರುವೆ? ನೀನು ಎಲ್ಲಿಗೆ ಹೋಗುತ್ತಿರುವೆ?” ಎಂದು ಕೇಳಿದನು. ಹಾಗರಳು, “ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಿರುವೆ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 “ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದಿ? ಎಲ್ಲಿಗೆ ಹೋಗುತ್ತೀ?” ಎಂದು ಕೇಳಲು ಅವಳು, “ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಾ ಇದ್ದೇನೆ” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದೆ? ಎಲ್ಲಿಗೆ ಹೋಗುತ್ತಿರುವೆ?” ಎಂದು ವಿಚಾರಿಸಿದನು. “ನನ್ನ ಯಜಮಾನಿ ಸಾರಯಳ ಬಳಿಯಿಂದ ಓಡಿಹೋಗುತ್ತಿದ್ದೇನೆ,” ಎಂದು ಉತ್ತರಕೊಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದಿ? ಎಲ್ಲಿಗೆ ಹೋಗುತ್ತೀ ಎಂದು ಕೇಳಲು ಅವಳು - ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಾ ಇದ್ದೇನೆ ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ಸಾರಯಳ ದಾಸಿ ಹಾಗರಳೇ, ನೀನು ಎಲ್ಲಿಂದ ಬಂದೆ? ನೀನು ಎಲ್ಲಿಗೆ ಹೋಗುತ್ತೀ?” ಎಂದು ವಿಚಾರಿಸಿದನು. ಅವಳು, “ನನ್ನ ಯಜಮಾನಿ ಸಾರಯಳನ್ನು ಬಿಟ್ಟು ಓಡಿ ಹೋಗುತ್ತಿದ್ದೇನೆ,” ಎಂದಳು. ಅಧ್ಯಾಯವನ್ನು ನೋಡಿ |
ನನ್ನ ಒಡೆಯನೇ, ನನ್ನ ರಾಜನೇ, ನನ್ನ ಮಾತುಗಳನ್ನು ಆಲಿಸು! ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಯೆಹೋವನು ಮಾಡಿರುವುದಾದರೆ ಆತನಿಗೆ ನೈವೇದ್ಯವನ್ನು ಅರ್ಪಿಸೋಣ. ಆದರೆ ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಜನರು ಮಾಡಿದ್ದರೆ, ಅವರಿಗೆ ಯೆಹೋವನು ಕೇಡಾಗುವಂತೆ ಮಾಡಲಿ. ನನಗೆ ಯೆಹೋವನು ನೀಡಿದ ಭೂಮಿಯನ್ನು ನಾನು ಬಿಡುವಂತೆ ಜನರು ಬಲವಂತಪಡಿಸಿದರು. ‘ಹೋಗು, ಹೊರದೇಶೀಯರೊಂದಿಗೆ ನೆಲೆಸು. ಹೋಗು, ಇತರ ದೇವರುಗಳನ್ನು ಆರಾಧಿಸು’ ಎಂದು ಜನರು ನನಗೆ ಹೇಳಿದರು.