“ದೇವರು ಅಬ್ರಹಾಮನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಆ ಒಡಂಬಡಿಕೆಯ ಗುರುತೇ ಸುನ್ನತಿ. ಹೀಗಿರಲು ಅಬ್ರಹಾಮನು ಒಬ್ಬ ಮಗನನ್ನು ಪಡೆದಾಗ, ಆ ಮಗನಿಗೆ ಎಂಟನೆಯ ದಿನದಲ್ಲಿ ಸುನ್ನತಿ ಮಾಡಿದನು. ಅವನ ಮಗನ ಹೆಸರು ಇಸಾಕ. ಇಸಾಕನು ಸಹ ತನ್ನ ಮಗನಾದ ಯಾಕೋಬನಿಗೆ ಸುನ್ನತಿ ಮಾಡಿದನು. ಮತ್ತು ಯಾಕೋಬನು ತನ್ನ ಗಂಡುಮಕ್ಕಳಿಗೆಲ್ಲಾ ಸುನ್ನತಿ ಮಾಡಿದನು. ಈ ಗಂಡುಮಕ್ಕಳೇ ಮುಂದೆ ಹನ್ನೆರಡು ಮಂದಿ ಪಿತೃಗಳಾದರು.
ನಾವಾದರೋ ನಿಜವಾದ ಸುನ್ನತಿಯನ್ನು ಹೊಂದಿದವರಾಗಿದ್ದೇವೆ; ದೇವರನ್ನು ಆತ್ಮನ ಮೂಲಕ ಆರಾಧಿಸುವವರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನಲ್ಲಿರಲು ಹೆಮ್ಮೆಪಡುತ್ತೇವೆ. ನಾವು ನಮ್ಮ ಮೇಲಾಗಲಿ ನಾವು ಮಾಡಬಲ್ಲವುಗಳ ಮೇಲಾಗಲಿ ಭರವಸೆ ಇಡುವುದಿಲ್ಲ.
ಇಂದಿನಿಂದ ನಿಮ್ಮಲ್ಲಿ ಗಂಡುಮಗು ಹುಟ್ಟಿ ಎಂಟು ದಿನಗಳಾದ ಮೇಲೆ ಆ ಮಗುವಿಗೆ ಸುನ್ನತಿ ಮಾಡಿಸಬೇಕು; ಈ ನಿಯಮವು ನಿಮ್ಮ ಮನೆಯಲ್ಲಿ ಹುಟ್ಟಿದ ಸೇವಕರಿಗೂ, ಪರದೇಶದಿಂದ ಕೊಂಡುತಂದ ಸೇವಕರಿಗೂ ಸಹ ಅನ್ವಯಿಸುತ್ತದೆ. ನನಗೂ ನಿನಗೂ ಆದ ಒಡಂಬಡಿಕೆಗೆ ಇದು ಗುರುತಾಗಿರುವುದು.
ನೀವು ಹುಟ್ಟಿದಂದಿನಿಂದ ಅನ್ಯಜನರಾಗಿದ್ದೀರಿ. ನಿಮ್ಮನ್ನು “ಸುನ್ನತಿಯಿಲ್ಲದವರು” ಎಂದು ಯೆಹೂದ್ಯರು ಕರೆಯುತ್ತಾರೆ. ನಿಮ್ಮನ್ನು “ಸುನ್ನತಿಯಿಲ್ಲದವರು” ಎಂದು ಕರೆಯುವ ಯೆಹೂದ್ಯರು ತಮ್ಮ ಬಗ್ಗೆ “ಸುನ್ನತಿಯವರು” ಎಂದು ಹೇಳಿಕೊಳ್ಳುತ್ತಾರೆ. (ಅವರ ಸುನ್ನತಿಯು ಶರೀರದಲ್ಲಿ ಕೈಯಿಂದ ಮಾಡಲ್ಪಡುತ್ತದೆ.)
ನೀವು ಸುನ್ನತಿ ಮಾಡಿಸಿಕೊಳ್ಳಬೇಕೆಂದು ಕೆಲವರು ನಿಮ್ಮನ್ನು ಒತ್ತಾಯಿಸುತ್ತಿದ್ದಾರೆ. ತಮ್ಮನ್ನು (ಯೆಹೂದ್ಯರು) ಸ್ವೀಕರಿಸಿಕೊಳ್ಳಲಿ ಎಂಬುದೇ ಅವರ ಉದ್ದೇಶ. ಕ್ರಿಸ್ತನ ಶಿಲುಬೆಯ ದೆಸೆಯಿಂದ ತಾವು ಹಿಂಸೆಗೆ ಒಳಗಾಗಬಹುದೆಂಬ ಭಯದಿಂದ ಅವರು ಹೀಗೆ ಮಾಡುತ್ತಾರೆ.
ಈಗ ಕ್ರಿಸ್ತನಲ್ಲಿ ಯೆಹೂದ್ಯನು, ಗ್ರೀಕನು ಎಂಬ ವ್ಯತ್ಯಾಸವಿಲ್ಲ; ಸ್ವತಂತ್ರರು ಮತ್ತು ಗುಲಾಮರು ಎಂಬ ವ್ಯತ್ಯಾಸವಿಲ್ಲ; ಸ್ತ್ರೀಯರು ಮತ್ತು ಪುರುಷರು ಎಂಬ ವ್ಯತ್ಯಾಸವಿಲ್ಲ. ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿದ್ದೀರಿ.
ದೇವರು ನಂಬಿಕೆಯ ಮೂಲಕ ಜನರ ಪಾಪಗಳನ್ನು ಕ್ಷಮಿಸುವ ಮಾರ್ಗವನ್ನು ಮಾಡಿದ್ದಾನೆ. ಆ ಮಾರ್ಗವೇ ಯೇಸು. ದೇವರು ಯೇಸುವಿನ ರಕ್ತದ ಮೂಲಕ ಪಾಪವನ್ನು ಕ್ಷಮಿಸುತ್ತಾನೆ. ದೇವರು ಮಾಡುವಂಥದ್ದು ಯಾವಾಗಲೂ ಸರಿಯಾಗಿರುತ್ತದೆ ಮತ್ತು ನ್ಯಾಯಬದ್ಧವಾಗಿರುತ್ತದೆ ಎಂಬುದನ್ನು ಇದು ತೋರಿಸುತ್ತದೆ. ದೇವರು ಹಿಂದಿನ ಕಾಲದಲ್ಲಿ ತಾಳ್ಮೆಯಿಂದಿದ್ದು ಜನರನ್ನು ಅವರ ಪಾಪಗಳಿಗಾಗಿ ದಂಡಿಸದೆ ಹೋದಾಗಲೂ ದೇವರು ನೀತಿವಂತನಾಗಿದ್ದನು.
ಮೋಶೆಯು ನಿಮಗೆ ಸುನ್ನತಿಯ ಬಗ್ಗೆ ಕಟ್ಟಳೆಯನ್ನು ಕೊಟ್ಟನು. (ಆದರೆ ನಿಜವಾಗಿಯೂ ಸುನ್ನತಿ ಎಂಬ ಸಂಸ್ಕಾರವನ್ನು ನಿಮಗೆ ಕೊಟ್ಟವನು ಮೋಶೆಯಲ್ಲ. ಅವನಿಗಿಂತ ಮೊದಲೇ ಜೀವಿಸಿದ್ದ ನಮ್ಮ ಜನರಿಂದ ಈ ಸಂಸ್ಕಾರವು ಬಂದಿದೆ.) ಆದ್ದರಿಂದ ಕೆಲವೊಮ್ಮೆ ನೀವು ಸಬ್ಬತ್‌ದಿನದಲ್ಲಿ ಮಗುವಿಗೆ ಸುನ್ನತಿಮಾಡುತ್ತೀರಿ.
ಯೆಹೋವನ ಮನುಷ್ಯರಾಗಿರಿ, ನಿಮ್ಮ ಹೃದಯ ಪರಿವರ್ತನೆ ಮಾಡಿಕೊಳ್ಳಿರಿ. ಯೆಹೂದದ ಜನಗಳೇ, ಜೆರುಸಲೇಮಿನ ಜನರೇ, ನೀವು ಬದಲಾಗದಿದ್ದರೆ ನನಗೆ ವಿಪರೀತ ಕೋಪ ಬರುವುದು. ನನ್ನ ಕೋಪವು ಬೆಂಕಿಯ ಜ್ವಾಲೆಯಂತೆ ಭರದಿಂದ ಹಬ್ಬುವದು. ನನ್ನ ಕೋಪವು ನಿಮ್ಮನ್ನು ಸುಟ್ಟು ಬೂದಿ ಮಾಡುವುದು. ಯಾರಿಂದಲೂ ಆ ಬೆಕಿಯನ್ನು ಆರಿಸುವುದು ಸಾಧ್ಯವಾಗುವದಿಲ್ಲ. ಇದೆಲ್ಲ ಏಕೆ ನಡೆಯುವುದು? ನೀವು ಮಾಡಿದ ದುಷ್ಕೃತ್ಯಗಳಿಂದಲೇ.”
ಯೆಹೋಶುವನು ಸುನ್ನತಿ ಮಾಡಲು ಕಾರಣವೇನೆಂದರೆ: ಈಜಿಪ್ಟನ್ನು ಬಿಟ್ಟುಹೊರಟಾಗ ಸೈನ್ಯಸೇರಲು ಯೋಗ್ಯರಾದ ಇಸ್ರೇಲಿನ ಗಂಡಸರಿಗೆ ಸುನ್ನತಿಯಾಗಿತ್ತು. ಅವರು ಮರುಭೂಮಿಯಲ್ಲಿದ್ದಾಗ ಅನೇಕ ಯುದ್ಧವೀರರು ಯೆಹೋವನಿಗೆ ಕಿವಿಗೂಡಲಿಲ್ಲ. ಆದಕಾರಣ, “ಹಾಲೂ ಜೇನೂ ಹರಿಯುವ ವಾಗ್ದತ್ತ ನಾಡನ್ನು” ಆ ಜನರು ಕಾಣುವುದಿಲ್ಲ ಎಂದು ಯೆಹೋವನು ಪ್ರಮಾಣ ಮಾಡಿದನು. ನಮ್ಮ ಪೂರ್ವಿಕರಿಗೆ ಆ ಭೂಮಿಯನ್ನು ಕೊಡುವುದಾಗಿ ಯೆಹೋವನು ವಾಗ್ದಾನ ಮಾಡಿದ್ದನು. ಆದರೆ ಆ ಜನರು ಯೆಹೋವನ ಮಾತನ್ನು ಕೇಳದೆ ಅವಿಧೇಯರಾದ ಕಾರಣ ಆತನು ಅವರನ್ನು ನಲವತ್ತು ವರ್ಷಗಳ ಕಾಲ ಅಂದರೆ ಆ ಯೋಧರು ಸಾಯುವವರೆಗೆ ಮರುಭೂಮಿಯಲ್ಲಿ ಅಲೆದಾಡುವಂತೆ ಮಾಡಿದನು. ಆ ಎಲ್ಲ ಯುದ್ಧವೀರರು ಸತ್ತುಹೋದರು ಮತ್ತು ಅವರ ಸ್ಥಾನಕ್ಕೆ ಅವರ ಗಂಡುಮಕ್ಕಳು ಬಂದರು. ಆದರೆ ಈಜಿಪ್ಟಿನಿಂದ ಹೊರಟು ಮರುಭೂಮಿಯಲ್ಲಿ ಪ್ರಯಾಣ ಮಾಡುತ್ತಿದ್ದಾಗ ಹುಟ್ಟಿದ ಯಾವ ಗಂಡುಮಕ್ಕಳಿಗೂ ಸುನ್ನತಿ ಆಗಿರಲಿಲ್ಲ. ಅದಕ್ಕಾಗಿ ಯೆಹೋಶುವನು ಅವರಿಗೆ ಸುನ್ನತಿ ಮಾಡಿಸಿದನು.
ನಿಮ್ಮ ಮಧ್ಯದಲ್ಲಿ ವಾಸವಾಗಿರುವ ಪರದೇಶದವನು ಯೆಹೋವನ ಪಸ್ಕ ಭೋಜನದಲ್ಲಿ ಪಾಲುಗಾರನಾಗಬೇಕೆಂದು ಬಯಸಿದರೆ ಅವನು ಸುನ್ನತಿ ಮಾಡಿಸಿಕೊಳ್ಳಬೇಕು. ಆಗ ಅವನು ಇಸ್ರೇಲಿನವನಾಗುವುದರಿಂದ ಭೋಜನದಲ್ಲಿ ಪಾಲುಗಾರನಾಗಬಹುದು. ಆದರೆ ಸುನ್ನತಿಯಾಗಿಲ್ಲದವನು ಪಸ್ಕದ ಊಟ ಮಾಡಕೂಡದು.
ಆದರೆ ಚಿಪ್ಪೋರಳು ಕಲ್ಲಿನ ಚೂರಿಯನ್ನು ತೆಗೆದುಕೊಂಡು ತನ್ನ ಮಗನಿಗೆ ಸುನ್ನತಿಮಾಡಿ ಚರ್ಮವನ್ನು ತೆಗೆದುಕೊಂಡು ಮೋಶೆಯ ಪಾದಗಳಿಗೆ ಮುಟ್ಟಿಸಿ, “ನೀನು ನನಗೆ ರಕ್ತಧಾರೆಯಿಂದಾದ ಮದುವಣಿಗನಾದೆ” ಅಂದಳು.
ಅದೇ ದಿನದಲ್ಲಿ ಅಬ್ರಹಾಮನು ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಸೇವಕರಿಗೆ ಹುಟ್ಟಿದ ಗಂಡುಮಕ್ಕಳಿಗೂ ಪರದೇಶಿಯರಿಂದ ಕೊಂಡುತಂದಿದ್ದ ಸೇವಕರಿಗೂ ದೇವರು ಹೇಳಿದಂತೆಯೇ ಸುನ್ನತಿ ಮಾಡಿಸಿದನು.