ದೇವರು ತನ್ನನ್ನು ಸ್ವೀಕರಿಸಿಕೊಂಡಿದ್ದಾನೆಂಬುದನ್ನು ತೋರಿಸುವುದಕ್ಕಾಗಿ ಅಬ್ರಹಾಮನು ಅನಂತರ ಸುನ್ನತಿ ಮಾಡಿಸಿಕೊಂಡನು. ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವುದಕ್ಕಿಂತ ಮೊದಲೇ ನಂಬಿಕೆಯ ಮೂಲಕ ನೀತಿವಂತನಾಗಿದ್ದನು ಎಂಬುದಕ್ಕೆ ಅವನ ಸುನ್ನತಿಯೇ ಆಧಾರವಾಗಿದೆ. ಆದಕಾರಣ ನಂಬುವ ಎಲ್ಲಾ ಜನರಿಗೆ, ಅವರು ಸುನ್ನತಿ ಮಾಡಿಸಿಕೊಂಡಿಲ್ಲದಿದ್ದರೂ ಅಬ್ರಹಾಮನು ತಂದೆಯಾಗಿದ್ದಾನೆ. ಏಕೆಂದರೆ ಅವರು ತಮ್ಮ ನಂಬಿಕೆಯ ಮೂಲಕ ನೀತಿವಂತರೆಂದು ಎಣಿಸಲ್ಪಡುವರು.