Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 17:13 - ಪರಿಶುದ್ದ ಬೈಬಲ್‌

13-14 ಹೀಗೆ ಪ್ರತಿಯೊಬ್ಬನಿಗೂ ಸುನ್ನತಿಯಾಗಲೇಬೇಕು. ನಾನು ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯು ಶಾಶ್ವತವಾದದ್ದು ಎಂಬುದಕ್ಕೆ ಈ ಸುನ್ನತಿಯೇ ದೈಹಿಕ ಗುರುತಾಗಿದೆ. ಸುನ್ನತಿಯಾಗಿಲ್ಲದ ಪುರುಷನು ನನ್ನ ಒಡಂಬಡಿಕೆಗೆ ವಿಧೇಯನಾಗದ ಕಾರಣ ಅವನನ್ನು ಕುಲದಿಂದ ತೆಗೆದುಹಾಕಲ್ಪಡಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿನ್ನ ಮನೆಯಲ್ಲಿ ಹುಟ್ಟಿದವನಿಗೂ, ನೀನು ಕ್ರಯಕ್ಕೆ ತೆಗೆದುಕೊಂಡವನಿಗೂ ತಪ್ಪದೆ ಸುನ್ನತಿಯಾಗಬೇಕು. ಹೀಗೆ ನಾನು ಮಾಡುವ ಒಡಂಬಡಿಕೆಯ ಗುರುತು ನಿಮ್ಮ ಶರೀರದಲ್ಲೇ ಇದ್ದು, ಶಾಶ್ವತವಾದ ಒಡಂಬಡಿಕೆಯನ್ನು ಸೂಚಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಮನೆಯಲ್ಲಿ ಹುಟ್ಟಿದವನೇ ಆಗಿರಲಿ, ಕ್ರಯಕ್ಕೆ ಕೊಂಡುಕೊಂಡವನೇ ಆಗಿರಲಿ, ಪ್ರತಿ ಒಬ್ಬನಿಗೂ ತಪ್ಪದೆ ಸುನ್ನತಿಯಾಗಬೇಕು. ನಾನು ಮಾಡುವ ಒಡಂಬಡಿಕೆಯ ಗುರುತು ಹೀಗೆ ನಿಮ್ಮ ದೇಹದಲ್ಲಿ ಇದ್ದು ಶಾಶ್ವತವಾದ ಒಡಂಬಡಿಕೆಯನ್ನು ಸೂಚಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿನ್ನ ಮನೆಯಲ್ಲಿ ಹುಟ್ಟಿದವರಿಗೂ ನೀನು ಕ್ರಯಕ್ಕೆ ತೆಗೆದುಕೊಂಡವರಿಗೂ ತಪ್ಪದೆ ಸುನ್ನತಿಯಾಗಬೇಕು. ಹೀಗೆ ನಾನು ಮಾಡುವ ನಿಬಂಧನೆಯ ಗುರುತು ನಿಮ್ಮ ಶರೀರದಲ್ಲೇ ಇದ್ದು ಶಾಶ್ವತವಾದ ಒಡಂಬಡಿಕೆಯನ್ನು ಸೂಚಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹೀಗೆ ನಿನ್ನ ಮನೆಯಲ್ಲಿ ಹುಟ್ಟಿದವನಿಗೂ ಕ್ರಯಕ್ಕೆ ತೆಗೆದುಕೊಂಡವನಿಗೂ ಸುನ್ನತಿಯಾಗಬೇಕು. ಈ ನನ್ನ ಒಡಂಬಡಿಕೆಯು ನಿಮ್ಮ ಶರೀರದಲ್ಲಿ ನಿತ್ಯವಾದ ಒಡಂಬಡಿಕೆಯಾಗಿರುವುದನ್ನು ಸೂಚಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 17:13
15 ತಿಳಿವುಗಳ ಹೋಲಿಕೆ  

ಆದರೆ ಸುನ್ನತಿ ಮಾಡಿಸಿಕೊಂಡಿರುವ ಗುಲಾಮನು ಪಸ್ಕಹಬ್ಬದ ಊಟವನ್ನು ಮಾಡಬಹುದು.


“ನಮ್ಮ ಯೆಹೂದಿ ಜನರನ್ನು ಪರದೇಶಗಳಲ್ಲಿ ಗುಲಾಮರನ್ನಾಗಿ ಮಾರಿದ್ದರು. ಅಂಥವರನ್ನು ನಾವು ಕ್ರಯಕೊಟ್ಟು ಕೊಂಡುಕೊಂಡು ಅವರನ್ನು ಗುಲಾಮತನದಿಂದ ಬಿಡುಗಡೆ ಮಾಡಿಸಿದೆವು. ಆದರೆ ನೀವು ಈಗ ಮತ್ತೆ ಗುಲಾಮರನ್ನಾಗಿ ಮಾಡುತ್ತಿದ್ದೀರಿ” ಎಂದೆನು. ಸೇರಿಬಂದಿದ್ದ ಶ್ರೀಮಂತರೂ ಅಧಿಕಾರಿಗಳೂ ಸುಮ್ಮನೆ ಬಾಯಿ ಮುಚ್ಚಿಕೊಂಡರು. ಅವರಿಗೆ ಏನೂ ಹೇಳಲಿಕ್ಕೂ ಆಗಲಿಲ್ಲ.


ಮಿದ್ಯಾನಿನ ವ್ಯಾಪಾರಿಗಳು ಯೋಸೇಫನನ್ನು ಈಜಿಪ್ಟಿನಲ್ಲಿ ಮಾರಿದರು. ಅವರು ಅವನನ್ನು ಫರೋಹನ ಕಾವಲುಗಾರರಿಗೆ ನಾಯಕನಾಗಿದ್ದ ಪೋಟೀಫರನಿಗೆ ಮಾರಿದರು.


ಆ ಸೇವಕನು ತನ್ನ ಯಜಮಾನನಾದ ರಾಜನಿಗೆ ಹಣವನ್ನು ಕೊಡಲು ಸಮರ್ಥನಾಗಿರಲಿಲ್ಲ. ಆದ್ದರಿಂದ ಆ ಸೇವಕನನ್ನು ಮತ್ತು ಅವನಲ್ಲಿದ್ದ ಪ್ರತಿಯೊಂದನ್ನೂ ಅವನ ಹೆಂಡತಿ ಮತ್ತು ಮಕ್ಕಳ ಸಮೇತವಾಗಿ ಮಾರಿ, ಬಂದ ಹಣವನ್ನೆಲ್ಲಾ ಕೊಡಬೇಕಾದ ಸಾಲಕ್ಕೆ ವಜಾ ಮಾಡಬೇಕೆಂದು ರಾಜನು ಆಜ್ಞಾಪಿಸಿದನು.


“ಆ ಧನಿಕರನ್ನು ನೋಡಿರಿ. ನಾವೂ ಅವರಂತೆಯೇ ಇದ್ದೇವೆ. ನಮ್ಮ ಮಕ್ಕಳು ಅವರ ಮಕ್ಕಳಂತೆಯೇ ಇದ್ದಾರೆ. ಆದರೆ ನಾವು ಮಾತ್ರ ನಮ್ಮ ಗಂಡುಹೆಣ್ಣು ಮಕ್ಕಳನ್ನು ಗುಲಾಮರಾಗಿ ಮಾರುವ ಸ್ಥಿತಿಯಲ್ಲಿದ್ದೇವೆ. ನಮ್ಮಲ್ಲಿ ಕೆಲವರು ಆಗಲೇ ತಮ್ಮ ಹೆಣ್ಣುಮಕ್ಕಳನ್ನು ಗುಲಾಮರನ್ನಾಗಿ ಮಾರಿದ್ದಾರೆ. ನಮಗೆ ಬೇರೆ ಮಾರ್ಗವೇ ಇಲ್ಲ. ನಮ್ಮ ಹೊಲಗದ್ದೆಗಳನ್ನು ಯಾವಾಗಲೋ ಕಳೆದುಕೊಂಡಿದ್ದೇವೆ.”


“ಯಾವನಾದರೂ ಮತ್ತೊಬ್ಬನನ್ನು ಕದ್ದು ಗುಲಾಮನನ್ನಾಗಿ ಮಾರಿದರೆ ಅಥವಾ ತನ್ನ ಗುಲಾಮನನ್ನಾಗಿ ಮಾಡಿಕೊಂಡರೆ ಅವನಿಗೆ ಮರಣಶಿಕ್ಷೆಯಾಗಬೇಕು.


ಗುಲಾಮನು ಮದುವೆಯಾಗಿಲ್ಲದಿದ್ದರೆ, ಅವನ ಯಜಮಾನನು ಅವನಿಗೆ ಮದುವೆ ಮಾಡಿಸಬಹುದು. ಆ ಸ್ತ್ರೀಯು ಮಕ್ಕಳನ್ನು ಹೆತ್ತರೆ, ಆಕೆಯೂ ಆಕೆಯ ಮಕ್ಕಳೂ ಯಜಮಾನನ ಸ್ವತ್ತಾಗುವರು. ಗುಲಾಮನು ತನ್ನ ಸೇವಾ ವರ್ಷಗಳನ್ನು ಮುಗಿಸಿದ ತರುವಾಯ ಬಿಡುಗಡೆ ಹೊಂದುವನು.


“ನೀವು ಇಬ್ರಿಯ ಗುಲಾಮನನ್ನು ಕೊಂಡುಕೊಂಡರೆ, ಆ ಗುಲಾಮನು ಆರು ವರ್ಷಗಳವರೆಗೆ ಮಾತ್ರ ನಿಮ್ಮ ಸೇವೆಮಾಡುವನು. ಆರು ವರ್ಷಗಳ ನಂತರ, ಅವನು ಬಿಡುಗಡೆಯಾಗುವನು, ಅವನು ಏನೂ ಕೊಡಬೇಕಾಗಿರುವುದಿಲ್ಲ.


ಯೋಸೇಫನನ್ನು ಖರೀದಿಮಾಡಿದ ವ್ಯಾಪಾರಿಗಳು ಅವನನ್ನು ಈಜಿಪ್ಟಿಗೆ ತೆಗೆದುಕೊಂಡು ಬಂದು ಫರೋಹನ ಕಾವಲುಗಾರರ ನಾಯಕನಾದ ಪೋಟೀಫರನಿಗೆ ಮಾರಿದರು.


ಈ ವ್ಯಾಪಾರಿಗಳಿಗೆ ನಾವು ಅವನನ್ನು ಮಾರಿದರೆ ನಮಗೆ ಹೆಚ್ಚು ಲಾಭವಾಗುವುದು; ಆಮೇಲೆ ನಮ್ಮ ತಮ್ಮನನ್ನು ಕೊಂದ ಅಪರಾಧವೂ ನಮ್ಮ ಮೇಲಿರುವುದಿಲ್ಲ” ಎಂದು ಹೇಳಿದನು. ಅದಕ್ಕೆ ಉಳಿದ ಸಹೋದರರೆಲ್ಲ ಒಪ್ಪಿಕೊಂಡರು.


ಮತ್ತೆ ಅಬ್ರಾಮನು, “ನೀನು ನನಗೆ ಮಗನನ್ನೇ ಕೊಟ್ಟಿಲ್ಲ. ಆದ್ದರಿಂದ ನನ್ನ ಮನೆಯಲ್ಲಿ ಹುಟ್ಟಿದ ಸೇವಕನೊಬ್ಬನು ನನಗಿರುವುದನ್ನೆಲ್ಲ ಪಡೆದುಕೊಳ್ಳುವನು” ಎಂದು ಹೇಳಿದನು.


ಲೋಟನು ಸೆರೆಯಾಳಾಗಿರುವುದು ಅಬ್ರಾಮನಿಗೆ ತಿಳಿಯಿತು. ಆದ್ದರಿಂದ ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿದ ಗಂಡಾಳುಗಳನ್ನೆಲ್ಲ ಒಟ್ಟಾಗಿ ಸೇರಿಸಿದನು. ಅವರಲ್ಲಿ ಮುನ್ನೂರ ಹದಿನೆಂಟು ಮಂದಿ ತರಬೇತಿ ಹೊಂದಿದ್ದ ಸೈನಿಕರಾಗಿದ್ದರು. ಅಬ್ರಾಮನು ಅವರೊಡನೆ ಹೊರಟು ಶತ್ರುಗಳನ್ನು ದಾನ್ ಊರಿನವರೆಗೂ ಹಿಂದಟ್ಟಿದನು.


ನಾನು ಮೋಡಗಳಲ್ಲಿರುವ ಮುಗಿಲುಬಿಲ್ಲನ್ನು ನೋಡುವಾಗ, ಶಾಶ್ವತವಾದ ಈ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಳ್ಳುವೆನು. ನನಗೂ ಮತ್ತು ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಗಳಿಗೂ ಆದ ಒಡಂಬಡಿಕೆಯನ್ನು ನೆನಸಿಕೊಳ್ಳುವೆನು” ಎಂದು ಹೇಳಿದನು.


ನಾನು ನಿನ್ನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಬಡಿಕೆಯು ನಿನ್ನ ಎಲ್ಲಾ ಸಂತತಿಯವರಿಗೆ ಶಾಶ್ವತವಾಗಿ ಅನ್ವಯಿಸುವುದು. ನಾನೇ ನಿನಗೂ ನಿನ್ನ ಎಲ್ಲಾ ಸಂತತಿಯವರಿಗೂ ದೇವರಾಗಿರುವೆನು.


ಆದರೆ ಯಾಜಕನು ತನ್ನ ಸ್ವಂತ ಹಣದಿಂದ ಒಬ್ಬನನ್ನು ಗುಲಾಮನನ್ನಾಗಿ ಕೊಂಡುಕೊಂಡರೆ, ಆ ಗುಲಾಮನು ನೈವೇದ್ಯ ಪದಾರ್ಥಗಳಲ್ಲಿ ಕೆಲವನ್ನು ತಿನ್ನಬಹುದು. ಯಾಜಕನ ಮನೆಯಲ್ಲಿ ಹುಟ್ಟಿದ ಗುಲಾಮರು ಸಹ ಯಾಜಕನ ಆಹಾರದಲ್ಲಿ ಕೆಲವನ್ನು ತಿನ್ನಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು