ಆದಿಕಾಂಡ 17:16 - ಪರಿಶುದ್ದ ಬೈಬಲ್16 ನಾನು ಆಕೆಯನ್ನು ಆಶೀರ್ವದಿಸಿ ಆಕೆಗೆ ಒಬ್ಬ ಮಗನನ್ನು ದಯಪಾಲಿಸುವೆನು; ನೀನೇ ಅವನ ತಂದೆ. ಅನೇಕ ಜನಾಂಗಗಳಿಗೂ ರಾಜರುಗಳಿಗೂ ಆಕೆಯು ಮೂಲಮಾತೆಯಾಗಿರುವಳು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಾನು ಆಕೆಯನ್ನು ಆಶೀರ್ವದಿಸಿ, ಆಕೆಯಿಂದ ನಿನಗೆ ಒಬ್ಬ ಮಗನನ್ನು ಕೊಡುವೆನು. ನಾನು ಆಕೆಯನ್ನು ಆಶೀರ್ವದಿಸಿದ್ದರಿಂದ ಆಕೆಯಿಂದ ಅನೇಕ ಜನಾಂಗಗಳೂ ಅರಸರೂ ಉತ್ಪತ್ತಿಯಾಗುವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಾನು ಆಕೆಯನ್ನು ಆಶೀರ್ವದಿಸಿದ್ದೇನೆ. ಆಕೆ ನಿನಗೊಬ್ಬ ಮಗನನ್ನು ಹೆರುವಳು. ನನ್ನ ಆಶೀರ್ವಾದ ಪಡೆದ ಆಕೆ ರಾಷ್ಟ್ರಗಳಿಗೆ ಮಾತೆಯಾಗುವಳು; ಆಕೆಯಿಂದ ರಾಷ್ಟ್ರಗಳೂ, ರಾಜರುಗಳೂ ಉತ್ಪತ್ತಿಯಾಗುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಾನು ಆಕೆಯನ್ನು ಆಶೀರ್ವದಿಸಿ ಆಕೆಯಲ್ಲಿ ನಿನಗೆ ಮಗನನ್ನು ಕೊಡುವೆನು. ನಾನು ಆಕೆಯನ್ನು ಆಶೀರ್ವದಿಸಿದ್ದರಿಂದ ಆಕೆಯಿಂದ ಅನೇಕ ಜನಾಂಗಗಳೂ ಅರಸರೂ ಉತ್ಪತ್ತಿಯಾಗುವರು ಎಂದು ಹೇಳಲು ಅಬ್ರಹಾಮನು ಅಡ್ಡಬಿದ್ದು ನಕ್ಕು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಕೆಯನ್ನು ನಾನು ಆಶೀರ್ವದಿಸುತ್ತೇನೆ. ಆಕೆಯಿಂದ ನಿನಗೆ ಒಬ್ಬ ಮಗನನ್ನು ಸಹ ಕೊಡುತ್ತೇನೆ. ಆಕೆಯು ಜನಾಂಗಗಳ ತಾಯಿಯಾಗುವಂತೆ ಆಕೆಯನ್ನು ಆಶೀರ್ವದಿಸುತ್ತೇನೆ. ಆಕೆಯಿಂದ ರಾಷ್ಟ್ರಗಳೂ ಅರಸರೂ ಹುಟ್ಟುವರು,” ಎಂದರು. ಅಧ್ಯಾಯವನ್ನು ನೋಡಿ |