Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 17:17 - ಪರಿಶುದ್ದ ಬೈಬಲ್‌

17 ಅಬ್ರಹಾಮನು ದೇವರಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಆದರೆ ಅವನು ಮನಸ್ಸಿನಲ್ಲಿ ನಗುತ್ತಾ, “ನನಗೆ ನೂರು ವರ್ಷ ವಯಸ್ಸಾಗಿರುವುದರಿಂದ ಮಗನನ್ನು ಪಡೆಯಲು ನನಗೂ ಸಾಧ್ಯವಿಲ್ಲ. ಸಾರಳಿಗೆ ತೊಂಭತ್ತು ವರ್ಷ ವಯಸ್ಸಾಗಿರುವುದರಿಂದ ಮಗನನ್ನು ಪಡೆಯಲು ಆಕೆಗೂ ಸಾಧ್ಯವಿಲ್ಲ” ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅಬ್ರಹಾಮನು ಅಡ್ಡ ಬಿದ್ದು ನಕ್ಕು, “ನೂರು ವರ್ಷದವನಿಗೆ ಮಗ ಹುಟ್ಟುವುದುಂಟೇ? ತೊಂಭತ್ತು ವರ್ಷದವಳಾದ ಸಾರಳು ಹೆರಲು ಸಾಧ್ಯವೇ?” ಎಂದು ಮನಸ್ಸಿನಲ್ಲಿ ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅಬ್ರಹಾಮನು ಅಡ್ಡಬಿದ್ದು ಸಾಷ್ಟಾಂಗ ಪ್ರಣಾಮ ಮಾಡಿದನು. ಆದರೆ, "ನೂರು ವರ್ಷದವನಿಗೆ ಮಗ ಹುಟ್ಟುವುದುಂಟೆ? ತೊಂಬತ್ತು ವರ್ಷದವಳಾದ ಸಾರಳು ಹೆತ್ತಾಳೆ?” ಎಂದು ಅಬ್ರಹಾಮನು ಮನಸ್ಸಿನಲ್ಲೇ ನೆನೆದು ನಕ್ಕು ದೇವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನೂರು ವರುಷದವನಿಗೆ ಮಗ ಹುಟ್ಟುವದುಂಟೇ? ತೊಂಭತ್ತು ವರುಷದವಳಾದ ಸಾರಳು ಹೆತ್ತಾಳೇ ಎಂದು ಮನಸ್ಸಿನಲ್ಲಿ ಅಂದುಕೊಂಡು ದೇವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅಬ್ರಹಾಮನು ಅಡ್ಡಬಿದ್ದು ನಕ್ಕು, “ನೂರು ವರ್ಷದವನಿಗೆ ಮಗುವು ಹುಟ್ಟುವುದುಂಟೇ? ತೊಂಬತ್ತು ವರ್ಷದವಳಾದ ಸಾರಳು ಹೆರುವುದುಂಟೋ?” ಎಂದು ತನ್ನ ಹೃದಯದಲ್ಲಿ ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 17:17
26 ತಿಳಿವುಗಳ ಹೋಲಿಕೆ  

ನಂತರ ಇಪ್ಪತ್ನಾಲ್ಕು ಮಂದಿ ಹಿರಿಯರು ಮೊಣಕಾಲೂರಿ ದೇವರನ್ನು ಆರಾಧಿಸಿದರು. ದೇವರ ಸನ್ನಿಧಿಯಲ್ಲಿ ತಮ್ಮ ಸಿಂಹಾಸನಗಳ ಮೇಲೆ ಕುಳಿತಿರುವ ಹಿರಿಯರೇ ಇವರು.


ನಾನು ಬರುವ ದಿನವನ್ನು ತಾನು ನೋಡುವುದಾಗಿ ನಿಮ್ಮ ತಂದೆಯಾದ ಅಬ್ರಹಾಮನು ಬಹು ಸಂತೋಷಪಟ್ಟನು. ಅವನು ಆ ದಿನವನ್ನು ಕಂಡು ಬಹು ಸಂತೋಷಗೊಂಡನು” ಎಂದು ಉತ್ತರಕೊಟ್ಟನು.


ಸಾರಳು, “ದೇವರು, ನನ್ನನ್ನು ನಗುವಂತೆ ಮಾಡಿದ್ದಾನೆ, ಇದನ್ನು ಕೇಳಿದ ಪ್ರತಿಯೊಬ್ಬರು ನನ್ನೊಡನೆ ನಗುವರು.


ಆದ್ದರಿಂದ ಸಾರಳಿಗೆ ನಂಬಲಾಗಲಿಲ್ಲ. ಆಕೆ ತನ್ನೊಳಗೆ, “ಈಗಾಗಲೇ ನನಗೆ ವಯಸ್ಸಾಗಿದೆ; ನನ್ನ ಗಂಡನಿಗೂ ವಯಸ್ಸಾಗಿದೆ” ಅಂದುಕೊಂಡಳು.


ಆ ಕೂಡಲೇ ಅಬ್ರಾಮನು ದೇವರಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಆಗ ದೇವರು ಅವನಿಗೆ,


ಆತನ ಸುತ್ತಲೂ ಇದ್ದ ಪ್ರಕಾಶವು ಮೇಘಬಿಲ್ಲಿನಂತೆಯೂ ಯೆಹೋವನ ಮಹಿಮೆಯಂತೆಯೂ ಕಾಣುತ್ತಿತ್ತು. ನಾನು ಅದನ್ನು ನೋಡಿದ ಕೂಡಲೇ ನೆಲಕ್ಕೆ ಬಿದ್ದೆನು. ಮುಖವನ್ನು ನೆಲದ ಮೇಲಿಟ್ಟು ಅಡ್ಡಬಿದ್ದೆನು. ಆಗ ನನ್ನೊಂದಿಗೆ ಮಾತನಾಡುತ್ತಿದ್ದ ಸ್ವರವನ್ನು ಕೇಳಿದೆನು.


ಆಗ ನಾಲ್ಕು ಜೀವಿಗಳು ಮತ್ತು ಇಪ್ಪತ್ನಾಲ್ಕು ಮಂದಿ ಹಿರಿಯರು ಆ ಕುರಿಮರಿಯ ಮುಂದೆ ಮೊಣಕಾಲೂರಿ ನಮಸ್ಕರಿಸಿದರು. ಪ್ರತಿಯೊಬ್ಬರ ಕೈಯಲ್ಲೂ ಒಂದೊಂದು ತಂತಿವಾದ್ಯವಿತ್ತು. ಧೂಪವು ತುಂಬಿದ್ದ ಚಿನ್ನದ ಪಾತ್ರೆಗಳನ್ನು ಅವರು ಹಿಡಿದುಕೊಂಡಿದ್ದರು. ಪಾತ್ರೆಗಳು ದೇವರ ಪರಿಶುದ್ಧ ಜನರ ಪ್ರಾರ್ಥನೆಗಳಾಗಿದ್ದವು.


ಆಗ ಯೋಬನು ತನ್ನ ಮೇಲಂಗಿಯನ್ನು ಹರಿದುಕೊಂಡು, ತಲೆಯನ್ನು ಬೋಳಿಸಿಕೊಂಡು, ನೆಲದ ಮೇಲೆ ಮೊಣಕಾಲೂರಿ ದೇವರಿಗೆ ಸ್ತೋತ್ರಸಲ್ಲಿಸುತ್ತಾ,


ಆಗ ಮನುಷ್ಯನಂತಿದ್ದ ಗಬ್ರಿಯೇಲನು ನಾನು ನಿಂತಲ್ಲಿಗೆ ಬಂದನು. ಅವನು ತೀರ ನನ್ನ ಹತ್ತಿರಕ್ಕೆ ಬಂದಾಗ ನನಗೆ ಬಹಳ ಭಯವಾಯಿತು. ನಾನು ನೆಲಕ್ಕೆ ಬಿದ್ದೆ. ಆದರೆ ಗಬ್ರಿಯೇಲನು ನನಗೆ, “ಮನುಷ್ಯನೇ, ಈ ದರ್ಶನ ಅಂತ್ಯಕಾಲದ ಕುರಿತಾಗಿದೆ ಎಂಬುದು ನಿನಗೆ ತಿಳಿದಿರಲಿ” ಎಂದು ಹೇಳಿದನು.


ದಾವೀದನು ಮೇಲಕ್ಕೆ ನೋಡಿದಾಗ ಯೆಹೋವನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನು ಕಂಡನು. ದೇವದೂತನು ತನ್ನ ಖಡ್ಗವನ್ನು ಜೆರುಸಲೇಮಿನ ಮೇಲೆ ಚಾಚಿದ್ದನು. ಆಗ ದಾವೀದನೂ ಅವನೊಂದಿಗಿದ್ದ ಹಿರಿಯರೂ ಬಗ್ಗಿ ನೆಲದ ಮೇಲೆ ಮುಖಗಳನ್ನಿಟ್ಟು ನಮಸ್ಕರಿಸಿದರು. ಅವರು ಶೋಕವಸ್ತ್ರಗಳನ್ನು ಧರಿಸಿದ್ದರು.


ಮಾನೋಹ ಮತ್ತು ಅವನ ಹೆಂಡತಿಯ ಕಣ್ಣೆದುರಿನಲ್ಲಿಯೇ ಯಜ್ಞವೇದಿಕೆಯಿಂದ ಆಕಾಶಕ್ಕೆ ಹೋಗುತ್ತಿರುವ ಅಗ್ನಿಜ್ವಾಲೆಯಲ್ಲಿ ಆ ಯೆಹೋವನ ದೂತನು ಆಕಾಶಕ್ಕೆ ಏರಿ ಹೋದನು. ಮಾನೋಹ ಮತ್ತು ಅವನ ಹೆಂಡತಿ ಅದನ್ನು ಕಂಡು ನೆಲದ ಮೇಲೆ ಅಡ್ಡಬಿದ್ದರು.


ಇದನ್ನು ಕೇಳಿ ಯೆಹೋಶುವನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಪವಿತ್ರ ಪೆಟ್ಟಿಗೆಯ ಮುಂದೆ ನೆಲದ ಮೇಲೆ ಬೋರಲಾಗಿ ಬಿದ್ದುಕೊಂಡನು. ಸಾಯಂಕಾಲದವರೆಗೂ ಯೆಹೋಶುವನು ಹಾಗೆಯೇ ಇದ್ದನು. ಇಸ್ರೇಲಿನ ಹಿರಿಯರೂ ಹಾಗೆಯೇ ಮಾಡಿದರು. ಅವರು ದುಃಖದಿಂದ ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡರು.


ಆ ಮನುಷ್ಯನು, “ನಾನು ಶತ್ರುವಲ್ಲ, ನಾನು ಯೆಹೋವನ ಸೇನಾಧಿಪತಿ. ನಾನು ಈಗಲೇ ನಿನ್ನಲ್ಲಿಗೆ ಬಂದಿದ್ದೇನೆ” ಎಂದು ಉತ್ತರಿಸಿದನು. ಆಗ ಯೆಹೋಶುವನು ನೆಲದವರೆಗೂ ತಲೆಬಾಗಿ ನಮಸ್ಕರಿಸಿ ಅವನಿಗೆ, “ನಾನು ನಿನ್ನ ಸೇವಕ. ನನ್ನ ಒಡೆಯನು ನನಗೆ ಯಾವುದಾದರೂ ಆಜ್ಞೆಯನ್ನು ವಿಧಿಸಬೇಕಾಗಿದೆಯೇ?” ಎಂದು ಕೇಳಿದನು.


“ನಾನು ಯೆಹೋವನ ಮುಂದೆ ನಲವತ್ತು ದಿನ ಹಗಲಿರುಳು ಬೋರಲಬಿದ್ದು ಆತನು ನಾಶಮಾಡಬೇಕೆಂದಿದ್ದ ನಿಮಗಾಗಿ ಪ್ರಾರ್ಥಿಸಿದೆನು.


ಆಮೇಲೆ ನಾನು ನಲವತ್ತು ದಿನ ಹಗಲಿರುಳು ಯೆಹೋವನ ಮುಂದೆ ಬೋರಲ ಬಿದ್ದಿದ್ದೆನು. ನಾನು ಊಟ ಮಾಡಲಿಲ್ಲ, ನೀರನ್ನು ಕುಡಿಯಲಿಲ್ಲ ಯಾಕೆಂದರೆ ನೀವು ಪಾಪಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದ ಆತನು ಕೋಪಗೊಂಡಿದ್ದನು.


“ಆ ಜನರಿಂದ ನೀವಿಬ್ಬರೂ ದೂರಹೋಗಿರಿ. ನಾನು ಈಗ ಅವರನ್ನು ನಾಶಮಾಡುತ್ತೇನೆ” ಎಂದು ಹೇಳಿದನು. ಆಗ ಮೋಶೆ ಆರೋನರು ಅಡ್ಡಬಿದ್ದರು.


ಆದರೆ ಮೋಶೆ ಆರೋನರು ನೆಲದವರೆಗೆ ಬಾಗಿ, “ದೇವರೇ, ಎಲ್ಲಾ ಜನರ ಆಲೋಚನೆ ನಿನಗೆ ಗೊತ್ತಿದೆ. ದಯಮಾಡಿ ಎಲ್ಲಾ ಜನರ ಮೇಲೆ ಕೋಪಗೊಳ್ಳಬೇಡ. ನಿಜವಾಗಿ ಪಾಪಮಾಡಿದವನು ಕೇವಲ ಒಬ್ಬನಲ್ಲವೇ?” ಎಂದು ಮೊರೆಯಿಟ್ಟರು.


ಆಗ ಮೋಶೆ ಆರೋನರು ಇಸ್ರೇಲರ ಸರ್ವ ಸಮೂಹದವರ ಮುಂದೆ ಬೋರಲಬಿದ್ದರು.


ಯೆಹೋವನ ಬಳಿಯಿಂದ ಬೆಂಕಿಯು ಬಂದು ವೇದಿಕೆಯ ಮೇಲಿದ್ದ ಸರ್ವಾಂಗಹೋಮವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿದಾಗ, ಅವರು ಆನಂದದಿಂದ ಆರ್ಭಟಿಸಿ ಅಡ್ಡಬಿದ್ದು ನಮಸ್ಕರಿಸಿದರು.


ಅವರು ಆ ಮನೆಗೆ ಬಂದಾಗ, ಮಗುವನ್ನು ತಾಯಿ ಮರಿಯಳ ಬಳಿ ಕಂಡು, ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ಅಲ್ಲದೆ ತಾವು ಮಗುವಿಗಾಗಿ ತಂದಿದ್ದ ಕಾಣಿಕೆಗಳನ್ನು ತೆರೆದು ಚಿನ್ನ, ಧೂಪ ಮತ್ತು ಸುಗಂಧ ದ್ರವ್ಯಗಳನ್ನು ನೀಡಿದರು.


ಜಕರೀಯನು ದೇವದೂತನಿಗೆ, “ನೀನು ಹೇಳುತ್ತಿರುವುದು ಸತ್ಯವೆಂಬುದಕ್ಕೆ ಆಧಾರವೇನು? ನಾನು ಮುದುಕನಾಗಿದ್ದೇನೆ ಮತ್ತು ನನ್ನ ಹೆಂಡತಿ ಸಹ ಮುಪ್ಪಿನವಳಾಗಿದ್ದಾಳೆ” ಎಂದು ಹೇಳಿದನು.


ಆಮೇಲೆ ಅಬ್ರಹಾಮನು ದೇವರಿಗೆ, “ಇಷ್ಮಾಯೇಲನೇ ನಿನ್ನ ಆಶೀರ್ವಾದವನ್ನು ಹೊಂದಿಕೊಂಡು ಜೀವಿಸಬಾರದೇಕೆ?” ಎಂದು ಕೇಳಿದನು.


ಅಬ್ರಹಾಮನೂ ಮತ್ತು ಸಾರಳೂ ತುಂಬ ವೃದ್ಧರಾಗಿದ್ದರು. ಸಾರಳಿಗೂ ಮಕ್ಕಳು ಹುಟ್ಟುವ ಕಾಲ ಆಗಿಹೋಗಿತ್ತು.


ಅಬ್ರಹಾಮನಿಗೆ ನೂರು ವರ್ಷಗಳಾಗಿದ್ದಾಗ, ಅವನ ಮಗನಾದ ಇಸಾಕನು ಹುಟ್ಟಿದನು.


ಅಬ್ರಹಾಮನಿಗೆ ಸಾರಳಲ್ಲಿ ಮಗನು ಹುಟ್ಟುತ್ತಾನೆಂದು ಯಾರೂ ಯೋಚಿಸಿರಲಿಲ್ಲ. ಅಬ್ರಹಾಮನು ವೃದ್ಧನಾಗಿದ್ದರೂ ಈಗ ನಾನು ಅವನಿಗೆ ಒಬ್ಬ ಮಗನನ್ನು ಕೊಟ್ಟಿದ್ದೇನೆ” ಅಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು