Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 17:20 - ಪರಿಶುದ್ದ ಬೈಬಲ್‌

20 “ನೀನು ಇಷ್ಮಾಯೇಲನ ಬಗ್ಗೆ ಮಾಡಿದ ಬಿನ್ನಹವನ್ನು ಕೇಳಿದ್ದೇನೆ. ನಾನು ಅವನನ್ನು ಆಶೀರ್ವದಿಸುವೆನು. ಅವನು ಅನೇಕ ಮಕ್ಕಳನ್ನು ಪಡೆದುಕೊಳ್ಳುವನು. ಹನ್ನೆರಡು ಮಹಾನಾಯಕರುಗಳಿಗೆ ಅವನು ತಂದೆಯಾಗುವನು. ಅವನ ಸಂತತಿಯು ಮಹಾಜನಾಂಗವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕಿವಿಗೊಟ್ಟು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ; ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು. ಅವನು ಹನ್ನೆರಡು ಮಂದಿ ಅರಸರನ್ನು ಪಡೆಯುವನು, ಅವನಿಂದ ಮಹಾ ಜನಾಂಗವಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ. ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತತಿಯನ್ನು ಕೊಡುತ್ತೇನೆ. ಅವನು ಹನ್ನೆರಡು ಮಂದಿ ಅಧಿಪತಿಗಳಿಗೆ ಮೂಲಪಿತನಾಗುವನು. ಅವನ ಸಂತತಿಯನ್ನು ದೊಡ್ಡ ರಾಷ್ಟ್ರವನ್ನಾಗಿ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕಿವಿಗೊಟ್ಟು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ; ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು. ಅವನು ಹನ್ನೆರಡು ಮಂದಿ ಅರಸರನ್ನು ಪಡೆಯುವನು; ಅವನಿಂದ ದೊಡ್ಡ ಜನಾಂಗವಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇಷ್ಮಾಯೇಲನ ವಿಷಯದಲ್ಲಿ ನೀನು ಬೇಡಿದ್ದನ್ನು ಕೇಳಿದ್ದೇನೆ. ನಾನು ಅವನನ್ನು ಸಹ ಆಶೀರ್ವದಿಸುವೆನು. ಅವನನ್ನು ಅಭಿವೃದ್ಧಿ ಮಾಡಿ, ಅತ್ಯಧಿಕವಾಗಿ ಹೆಚ್ಚಿಸುವೆನು. ಅವನಿಂದ ಹನ್ನೆರಡು ಪ್ರಭುಗಳು ಹುಟ್ಟುವರು. ನಾನು ಅವನಿಂದ ದೊಡ್ಡ ಜನಾಂಗವಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 17:20
7 ತಿಳಿವುಗಳ ಹೋಲಿಕೆ  

ಹೋಗಿ ಮಗುವನ್ನು ಎತ್ತಿಕೊ. ಅವನಿಂದ ದೊಡ್ಡ ಜನಾಂಗವಾಗುವಂತೆ ಮಾಡುವೆನು” ಎಂದು ಹೇಳಿದನು.


ಆದರೆ ನಿನ್ನ ಸೇವಕಿಯ ಮಗನನ್ನು ಸಹ ನಾನು ಆಶೀರ್ವದಿಸುವೆನು. ಅವನು ನಿನ್ನ ಮಗನು. ಆದ್ದರಿಂದ ಅವನಿಂದಲೂ ನಾನು ದೊಡ್ಡ ಜನಾಂಗವನ್ನು ಉಂಟುಮಾಡುವೆನು” ಎಂದು ಹೇಳಿದನು.


ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ, ನಿನಗೆ ಅನೇಕ ಮಕ್ಕಳನ್ನು ಕೊಡುವಂತೆಯೂ ನೀನು ಮಹಾಜನಾಂಗದ ತಂದೆಯಾಗುವಂತೆಯೂ ನಾನು ಪ್ರಾರ್ಥಿಸುವೆನು.


ಆತನ ಆಶೀರ್ವಾದದಿಂದ ಅವರ ಕುಟುಂಬಗಳು ವೃದ್ಧಿಯಾದವು. ಅವರ ಪಶುಗಳು ಅಸಂಖ್ಯಾತಗೊಂಡವು.


ನಾನು ನಿನ್ನನ್ನು ಆಶೀರ್ವದಿಸುವೆನು; ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡಿ ನಿನ್ನ ಹೆಸರನ್ನು ಪ್ರಖ್ಯಾತಿಪಡಿಸುವೆನು; ನೀನು ಆಶೀರ್ವಾದದಾಯಕನಾಗುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು