Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 17:7 - ಪರಿಶುದ್ದ ಬೈಬಲ್‌

7 ನಾನು ನಿನ್ನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಬಡಿಕೆಯು ನಿನ್ನ ಎಲ್ಲಾ ಸಂತತಿಯವರಿಗೆ ಶಾಶ್ವತವಾಗಿ ಅನ್ವಯಿಸುವುದು. ನಾನೇ ನಿನಗೂ ನಿನ್ನ ಎಲ್ಲಾ ಸಂತತಿಯವರಿಗೂ ದೇವರಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದೂ ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಿನಗೂ ನಿನ್ನ ಸಂತತಿಗೂ ನಾನು ದೇವರಾಗಿರುತ್ತೇನೆ. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ಚಿರಒಡಂಬಡಿಕೆಯಾಗಿ ಸ್ಥಿರಪಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದು ನಾನು ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನು. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ತರುವಾಯ ಬರುವ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 17:7
40 ತಿಳಿವುಗಳ ಹೋಲಿಕೆ  

ಆ ರಾತ್ರಿ ಯೆಹೋವನು ಇಸಾಕನಿಗೆ ಪ್ರತ್ಯಕ್ಷನಾಗಿ, “ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು. ಭಯಪಡಬೇಡ, ನಾನು ನಿನ್ನ ಸಂಗಡವಿದ್ದೇನೆ. ನಾನು ನಿನ್ನನ್ನು ಆಶೀರ್ವದಿಸುವೆನು. ನಾನು ನಿನ್ನ ಕುಟುಂಬವನ್ನು ಉನ್ನತ ಸ್ಥಿತಿಗೆ ತರುವೆನು. ನನ್ನ ಸೇವಕನಾದ ಅಬ್ರಹಾಮನಿಗಾಗಿಯೇ ಇದನ್ನು ಮಾಡುತ್ತೇನೆ” ಎಂದು ಹೇಳಿದನು.


ಈ ವಾಗ್ದಾನವನ್ನು ನಿಮಗೂ ನಿಮ್ಮ ಮಕ್ಕಳಿಗೂ ಬಹು ದೂರದಲ್ಲಿರುವ ಜನರಿಗೂ ಕೊಡಲಾಗಿದೆ. ನಮ್ಮ ದೇವರಾದ ಪ್ರಭುವು ತನ್ನ ಬಳಿಗೆ ಕರೆಯುವ ಪ್ರತಿಯೊಬ್ಬರಿಗೂ ಈ ವಾಗ್ದಾನವನ್ನು ಕೊಟ್ಟಿದ್ದಾನೆ” ಎಂದು ಹೇಳಿದನು.


ಆದ್ದರಿಂದ ಅಂದು ಯೆಹೋವನು ಒಂದು ವಾಗ್ದಾನವನ್ನು ಮಾಡಿ ಅಬ್ರಾಮನೊಡನೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಯೆಹೋವನು ಅವನಿಗೆ, “ನಾನು ನಿನ್ನ ಸಂತತಿಯವರಿಗೆ ಈ ನಾಡನ್ನು ಕೊಡುವೆನು. ನಾನು ಅವರಿಗೆ ಈಜಿಪ್ಟ್ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಇರುವ ನಾಡನ್ನು ಕೊಡುವೆನು.


ನಾನು ಇಸ್ರೇಲರೊಡನೆ ಮುಂದಿನ ದಿನಗಳಲ್ಲಿ ಮಾಡಿಕೊಳ್ಳುವ ಹೊಸ ಒಡಂಬಡಿಕೆಯು ಇಂತಿದೆ: ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇರಿಸುವೆನು; ಅವರ ಹೃದಯದ ಮೇಲೆ ಬರೆಯುವೆನು; ನಾನು ಅವರ ದೇವರಾಗಿರುವೆನು; ಅವರು ನನ್ನ ಜನರಾಗಿರುವರು.


ಆದರೆ ಆ ಜನರು ಉತ್ತಮ ದೇಶವಾದ ಪರಲೋಕಕ್ಕಾಗಿ ಕಾದಿದ್ದರು. ಆದ್ದರಿಂದ ದೇವರು ತನ್ನನ್ನು ಅವರ ದೇವರೆಂದು ಹೇಳಿಕೊಳ್ಳಲು ನಾಚಿಕೆಪಡದೆ ಅವರಿಗಾಗಿ ಒಂದು ನಗರವನ್ನು ಸಿದ್ಧಪಡಿಸಿದನು.


ನಾನು ನಿಮ್ಮೊಂದಿಗೆ ನಡೆಯುತ್ತಾ ನಿಮ್ಮ ದೇವರಾಗಿರುವೆನು ಮತ್ತು ನೀವು ನನ್ನ ಜನರಾಗಿರುವಿರಿ.


ಯೆಹೋವನು ಏಣಿಯ ತುದಿಯಲ್ಲಿ ನಿಂತಿರುವುದನ್ನು ಯಾಕೋಬನು ಕಂಡನು. ಯೆಹೋವನು ಅವನಿಗೆ, “ನಿನ್ನ ತಾತನಾದ ಅಬ್ರಹಾಮನ ದೇವರಾಗಿರುವ ಯೆಹೋವನೇ ನಾನು. ನಾನು ಇಸಾಕನ ದೇವರು. ಈಗ ನೀನು ಮಲಗಿಕೊಂಡಿರುವ ದೇಶವನ್ನು ನಾನು ನಿನಗೆ ಕೊಡುವೆನು. ನಾನು ಈ ದೇಶವನ್ನು ನಿನಗೂ ನಿನ್ನ ಮಕ್ಕಳಿಗೂ ಕೊಡುವೆನು.


ಅವರು ಇಸ್ರೇಲಿನ ಜನರು. ಅವರು ದೇವರಿಂದ ಆರಿಸಲ್ಪಟ್ಟ ಮಕ್ಕಳು. ಅವರು ದೇವರ ಮಹಿಮೆಯನ್ನು ಮತ್ತು ದೇವರು ಅವರೊಂದಿಗೆ ಮಾಡಿಕೊಂಡ ಒಡಂಬಡಿಕೆಗಳನ್ನು ಹೊಂದಿದ್ದಾರೆ. ದೇವರು ಅವರಿಗೆ ಮೋಶೆಯ ಧರ್ಮಶಾಸ್ತ್ರವನ್ನೂ ಸರಿಯಾದ ಆರಾಧನೆಯ ಕ್ರಮವನ್ನೂ ತನ್ನ ವಾಗ್ದಾನಗಳನ್ನೂ ಕೊಟ್ಟನು.


ಇದನ್ನು ಕಂಡ ಯೇಸು ಕೋಪಗೊಂಡು ಅವರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಗೊಡಿಸಿರಿ. ಅವರನ್ನು ತಡೆಯಬೇಡಿ, ಏಕೆಂದರೆ ದೇವರ ರಾಜ್ಯವು ಇಂಥವರದೇ.


‘ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿರುವುದನ್ನು ನೀವು ಓದಿಲ್ಲವೇ? ಹೀಗಿರುವಲ್ಲಿ, ದೇವರು ಜೀವಿತರಿಗೆ ಮಾತ್ರ ದೇವರೇ ಹೊರತು ಸತ್ತವರಿಗಲ್ಲಾ” ಅಂದನು.


ನೀನು ಯಾಕೋಬನಿಗೆ ನಂಬಿಗಸ್ತನಾಗುವೆ. ನೀನು ಅಬ್ರಹಾಮನ ಮೇಲೆ ದಯೆತೋರಿಸಿ ನಂಬಿಗಸ್ತನಾಗುವೆ. ಇದನ್ನು ನೀನು ಬಹಳ ಕಾಲದ ಹಿಂದೆಯೇ ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿರುವೆ.


ಆ ದೇಶದಲ್ಲಿ ಅವರು ಸುರಕ್ಷಿತವಾಗಿ ವಾಸಿಸುವರು; ಮನೆಗಳನ್ನು ಕಟ್ಟಿ ದ್ರಾಕ್ಷಿತೋಟಗಳನ್ನು ಮಾಡುವರು. ಅವರನ್ನು ದ್ವೇಷಿಸಿದ ರಾಜ್ಯಗಳನ್ನು ದಂಡಿಸುವೆನು. ಆಗ ಇಸ್ರೇಲ್ ಜನರು ಸುರಕ್ಷಿತವಾಗಿ ಜೀವಿಸುವರು; ನಾನೇ ದೇವರಾದ ಯೆಹೋವನು ಎಂದು ತಿಳಿದುಕೊಳ್ಳುವರು.”


ನಾನು ಅವರೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡೆನು. ಕಾನಾನ್ ದೇಶವನ್ನು ಅವರಿಗೆ ಕೊಡುವುದಾಗಿ ನಾನು ವಾಗ್ದಾನ ಮಾಡಿದೆನು. ಅವರು ಆ ದೇಶದಲ್ಲಿ ಜೀವಿಸಿದರೂ ಅದು ಅವರ ಸ್ವಂತ ದೇಶವಾಗಿರಲಿಲ್ಲ.


ಇದಲ್ಲದೆ ದೇವರು ಮೋಶೆಗೆ, “ನೀನು ಇಸ್ರೇಲರಿಗೆ, ‘ನಿಮ್ಮ ಪೂರ್ವಿಕರ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಯೆಹೋವನು ನಿಮ್ಮಲ್ಲಿಗೆ ನನ್ನನ್ನು ಕಳುಹಿಸಿದ್ದಾನೆ. ಇದೇ ನನ್ನ ಶಾಶ್ವತವಾದ ಹೆಸರು; ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ಹೆಸರು ಇದೇ ಎಂದು ಹೇಳಬೇಕು’” ಅಂದನು.


ನಾನು ನಿನ್ನ ಪೂರ್ವಿಕರ ದೇವರು, ನಾನು ಅಬ್ರಹಾಮನ ದೇವರು, ನಾನು ಇಸಾಕನ ದೇವರು, ನಾನು ಯಾಕೋಬನ ದೇವರು” ಎಂದು ಹೇಳಿದನು. ದೇವರನ್ನು ನೋಡುವುದಕ್ಕೆ ಭಯಪಟ್ಟು ಮೋಶೆ ತನ್ನ ಮುಖವನ್ನು ಮುಚ್ಚಿಕೊಂಡನು.


ಹೌದು, ಮೊದಲು ನೀವು ಆ ಪಾಪಗಳನ್ನೇ ಮಾಡುತ್ತಿದ್ದಿರಿ. ಈ ಲೋಕದ ಮಾರ್ಗಗಳಿಗನುಸಾರವಾಗಿ ನೀವು ಜೀವಿಸಿದಿರಿ. ವಾಯುಮಂಡಲದಲ್ಲಿರುವ ದುಷ್ಟಶಕ್ತಿಗಳ ಅಧಿಪತಿಯನ್ನು ನೀವು ಅನುಸರಿಸಿದಿರಿ. ದೇವರಿಗೆ ಅವಿಧೇಯರಾದ ಜನರಲ್ಲಿ ಈಗ ಕಾರ್ಯಮಾಡುತ್ತಿರುವುದು ಅದೇ ಆತ್ಮ.


ಯೆಹೋವನಾದ ನಾನೇ ನಿನ್ನ ದೇವರು. ನಿನ್ನನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರು ನಾನೇ. ಇಸ್ರೇಲೇ, ನಿನ್ನ ಬಾಯನ್ನು ತೆರೆ, ಆಗ ನಾನು ನಿನಗೆ ತಿನ್ನಿಸುವೆನು.


ನಾನು ನಿನ್ನೊಂದಿಗೆ ವಿಶೇಷ ಒಡಂಬಡಿಕೆಯನ್ನು ಮಾಡಿಕೊಳ್ಳುವೆ. ಅದೇನೆಂದರೆ, ನೀನು ಮತ್ತು ನಿನ್ನ ಹೆಂಡತಿ, ನಿನ್ನ ಗಂಡುಮಕ್ಕಳು ಮತ್ತು ಸೊಸೆಯಂದಿರು ನಾವೆಯೊಳಗೆ ಹೋಗುವಿರಿ.


ಹೀಗೆ ಪ್ರತಿಯೊಬ್ಬನಿಗೂ ಸುನ್ನತಿಯಾಗಲೇಬೇಕು. ನಾನು ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯು ಶಾಶ್ವತವಾದದ್ದು ಎಂಬುದಕ್ಕೆ ಈ ಸುನ್ನತಿಯೇ ದೈಹಿಕ ಗುರುತಾಗಿದೆ. ಸುನ್ನತಿಯಾಗಿಲ್ಲದ ಪುರುಷನು ನನ್ನ ಒಡಂಬಡಿಕೆಗೆ ವಿಧೇಯನಾಗದ ಕಾರಣ ಅವನನ್ನು ಕುಲದಿಂದ ತೆಗೆದುಹಾಕಲ್ಪಡಬೇಕು” ಎಂದು ಹೇಳಿದನು.


ಅದಕ್ಕೆ ದೇವರು ಅವನಿಗೆ, “ಇಲ್ಲ! ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನು ಹುಟ್ಟುವನು. ನೀನು ಅವನಿಗೆ, ‘ಇಸಾಕ’ ಎಂದು ಹೆಸರಿಡಬೇಕು. ನಾನು ಒಂದು ಒಡಂಬಡಿಕೆಯನ್ನು ಅವನೊಡನೆ ಮಾಡಿಕೊಳ್ಳುವೆನು. ಆ ಒಡಂಬಡಿಕೆಯು ಅವನ ಎಲ್ಲಾ ಸಂತತಿಯವರಲ್ಲಿಯೂ ಶಾಶ್ವತವಾಗಿರುವುದು.


ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು. ನಿಮ್ಮ ದೇವರಾಗಿರುವ ಯೆಹೋವನಾದ ನಾನೇ ನಿಮ್ಮನ್ನು ಈಜಿಪ್ಟಿನವರ ಬಿಟ್ಟೀಕೆಲಸದಿಂದ ಬಿಡುಗಡೆಗೊಳಿಸಿದೆನೆಂದು ಆಗ ನೀವು ತಿಳಿದುಕೊಳ್ಳುವಿರಿ.


ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ಯೆಹೋವನೇ ನಾನು. ನೀವು ನನ್ನ ವಿಶೇಷ ಜನರಾಗಿರಬೇಕೆಂದು ಮತ್ತು ನಾನು ನಿಮ್ಮ ದೇವರಾಗಿರಬೇಕೆಂದು ನಿಮ್ಮನ್ನು ಕರೆದುಕೊಂಡು ಬಂದೆನು. ನಾನು ಪರಿಶುದ್ಧನಾಗಿರುವಂತೆಯೇ ನೀವೂ ಪರಿಶುದ್ಧರಾಗಿರಬೇಕು.”


ನಾನೇ ನಿಮ್ಮ ದೇವರಾದ ಯೆಹೋವನು! ನಾನು ನಿಮಗೆ ಕಾನಾನ್ ದೇಶವನ್ನು ಕೊಟ್ಟು ನಿಮ್ಮ ದೇವರಾಗಿರಲು ನಿಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದೆನು.


“ಬಳಿಕ ನಾನು ನಿಮ್ಮ ಮೇಲೆ ಕಟಾಕ್ಷವಿಟ್ಟು ನಿಮಗೆ ಅನೇಕ ಮಕ್ಕಳನ್ನು ಅನುಗ್ರಹಿಸುವೆನು. ನಾನು ನಿಮ್ಮೊಡನೆ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ನೆರವೇರಿಸುವೆನು.


ಅವರಿಗೋಸ್ಕರ ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನು ಮಾಡುವೆ. ನಾನು ಅವರ ದೇವರಾಗಿರಬೇಕೆಂದು ಅವರ ಪೂರ್ವಿಕರನ್ನು ಈಜಿಪ್ಟ್ ದೇಶದಿಂದ ಹೊರಗೆ ಕರೆದುಕೊಂಡು ಬಂದೆನು. ಬೇರೆ ಜನಾಂಗಗಳವರು ಆ ಸಂಗತಿಗಳನ್ನು ನೋಡಿದರು. ನಾನೇ ಯೆಹೋವನು!”


ಈ ಒಡಂಬಡಿಕೆಯ ಮೂಲಕ ದೇವರು ನಿಮ್ಮನ್ನು ತನ್ನ ಸ್ವಕೀಯ ಜನರನ್ನಾಗಿ ಮಾಡುತ್ತಾನೆ. ಆತನು ನಿಮಗೆ ದೇವರಾಗಿದ್ದಾನೆ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಹೇಳಿದಂತೆ ನಿಮಗೂ ಹೇಳುತ್ತಾನೆ.


ಯೆಹೋವನ ದೂತನು ಗಿಲ್ಗಾಲ್ ನಗರದಿಂದ ಬೋಕೀಮ್ ನಗರದವರೆಗೆ ಹೋದನು. ಆ ದೂತನು ಇಸ್ರೇಲರಿಗೆ ಯೆಹೋವನ ಒಂದು ಸಂದೇಶವನ್ನು ತಿಳಿಸಿದನು. ಆ ಸಂದೇಶವು ಹೀಗೆದೆ: “ನಾನು ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿ ಹೊರಗೆತಂದೆ. ನಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಪ್ರದೇಶಕ್ಕೆ ನಿಮ್ಮನ್ನು ಕರೆದುಕೊಂಡು ಬಂದೆನು. ‘ನಾನು ನಿಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದಿಗೂ ಮುರಿಯುವುದಿಲ್ಲ.


ಯಾಕೆಂದರೆ ನಾನೇ ಯೆಹೋವನು. ನಾನು ನ್ಯಾಯದಲ್ಲಿ ಸಂತೋಷಿಸುವೆನು. ನಾನು ಕದಿಯುವದನ್ನೂ ಎಲ್ಲಾ ದುಷ್ಟತ್ವಗಳನ್ನೂ ದ್ವೇಷಿಸುತ್ತೇನೆ. ಅದಕ್ಕಾಗಿ ನಾನು ಅಂಥಾ ಜನರಿಗೆ ದೊರಕಬೇಕಾದ ಶಿಕ್ಷೆಯನ್ನು ಕೊಡುವೆನು. ನನ್ನ ಜನರೊಂದಿಗೆ ನಿತ್ಯಕಾಲದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.


ಯೆಹೋವನು ಈ ವಿಷಯಗಳನ್ನು ಹೇಳಿದನು: “ಆ ಸಮಯದಲ್ಲಿ ನಾನು ಇಸ್ರೇಲಿನ ಎಲ್ಲಾ ಗೋತ್ರಗಳ ದೇವರಾಗಿರುವೆನು; ಅವರು ನನ್ನ ಪ್ರಜೆಗಳಾಗಿರುವರು.”


ನಾನು ಮೋಡಗಳಲ್ಲಿರುವ ಮುಗಿಲುಬಿಲ್ಲನ್ನು ನೋಡುವಾಗ, ಶಾಶ್ವತವಾದ ಈ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಳ್ಳುವೆನು. ನನಗೂ ಮತ್ತು ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಗಳಿಗೂ ಆದ ಒಡಂಬಡಿಕೆಯನ್ನು ನೆನಸಿಕೊಳ್ಳುವೆನು” ಎಂದು ಹೇಳಿದನು.


ಅವರು ನಿಜವಾಗಿ ಪಾಪಮಾಡಿದ್ದರೂ ಸಹಾಯಕ್ಕಾಗಿ ಅವರು ನನ್ನ ಬಳಿಗೆ ಬಂದರೆ ನಾನು ಅವರಿಗೆ ವಿಮುಖನಾಗುವುದಿಲ್ಲ. ಅವರು ತಮ್ಮ ಶತ್ರುಗಳ ದೇಶದಲ್ಲಿದ್ದರೂ ನಾನು ಅವರಿಗೆ ಕಿವಿಗೊಡುವೆನು. ಅವರನ್ನು ಸಂಪೂರ್ಣವಾಗಿ ನಾಶಮಾಡುವುದಿಲ್ಲ. ಅವರೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಮರೆಯುವುದಿಲ್ಲ. ಯಾಕೆಂದರೆ ನಾನೇ ಅವರ ದೇವರಾದ ಯೆಹೋವನು!


ಇಸ್ರೇಲಿನ ಜನರನ್ನು ಎಂದೆಂದಿಗೂ ನಿನ್ನ ಸ್ವಂತ ಜನರನ್ನಾಗಿ ಮಾಡಿಕೊಂಡೆ. ಯೆಹೋವನೇ, ನೀನು ಅವರಿಗಾಗಿ ದೇವರಾದೆ.


ಆತನ ಅದ್ಭುತಕಾರ್ಯಗಳನ್ನೂ ಮಹತ್ಕಾರ್ಯಗಳನ್ನೂ ನ್ಯಾಯನಿರ್ಣಯಗಳನ್ನೂ ಜ್ಞಾಪಿಸಿಕೊಳ್ಳಿರಿ.


ಯೆಹೋವನೇ ನಮ್ಮ ದೇವರು. ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು