Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 17:9 - ಪರಿಶುದ್ದ ಬೈಬಲ್‌

9 ಇದಲ್ಲದೆ ದೇವರು ಅಬ್ರಹಾಮನಿಗೆ, “ನಮ್ಮ ಒಡಂಬಡಿಕೆಯ ಪ್ರಕಾರ ನೀನು ಮತ್ತು ನಿನ್ನ ಸಂತತಿಯವರೆಲ್ಲರೂ ನನ್ನ ಒಡಂಬಡಿಕೆಗೆ ವಿಧೇಯರಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇದಲ್ಲದೆ ದೇವರು ಅಬ್ರಹಾಮನಿಗೆ, “ನೀನಂತೂ ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಬೇಕು. ನೀನು ಮಾತ್ರವಲ್ಲದೆ ನಿನ್ನ ಸಂತತಿಯವರು ತಲತಲಾಂತರಗಳಲ್ಲಿ ಅದನ್ನು ಕೈಕೊಂಡು ನಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇದಲ್ಲದೆ ದೇವರು ಅಬ್ರಹಾಮನಿಗೆ ಹೀಗೆಂದು ಹೇಳಿದರು: “ನೀನು ಕೂಡ ನನ್ನ ಒಡಂಬಡಿಕೆಯನ್ನು ಕೈಗೊಂಡು ನಡೆಯಬೇಕು ನೀನು ಮಾತ್ರವಲ್ಲ, ನಿನ್ನ ಸಂತತಿಯವರು ತಲತಲಾಂತರಕ್ಕೂ ಅದನ್ನು ಕೈಗೊಂಡು ನಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇದಲ್ಲದೆ ದೇವರು ಅಬ್ರಹಾಮನಿಗೆ - ನೀನಂತೂ ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಬೇಕು. ನೀನು ಮಾತ್ರವಲ್ಲದೆ ನಿನ್ನ ಸಂತತಿಯವರೂ ಎಲ್ಲಾ ತಲಾಂತರಗಳಲ್ಲಿ ಅದನ್ನು ಕೈಕೊಂಡು ನಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇದಲ್ಲದೆ ದೇವರು ಅಬ್ರಹಾಮನಿಗೆ, “ನೀನೂ, ನಿನ್ನ ತರುವಾಯ ಬರುವ ನಿನ್ನ ಸಂತತಿಯವರೂ ತಲತಲಾಂತರಕ್ಕೂ ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 17:9
6 ತಿಳಿವುಗಳ ಹೋಲಿಕೆ  

ಆತನ ಒಡಂಬಡಿಕೆಗೆ ವಿಧೇಯರಾಗುವ ಜನರಿಗೆ ಆತನು ಒಳ್ಳೆಯವನಾಗಿದ್ದಾನೆ. ಆತನ ಆಜ್ಞೆಗಳಿಗೆ ವಿಧೇಯರಾಗುವ ಜನರಿಗೆ ಆತನು ಒಳ್ಳೆಯವನಾಗಿದ್ದಾನೆ.


ಯೆಹೋವನ ಒಡಂಬಡಿಕೆಯನ್ನೂ ವಾಗ್ದಾನಗಳನ್ನೂ ಅನುಸರಿಸುವ ಜನರಿಗೆ ಆತನ ಮಾರ್ಗಗಳೆಲ್ಲ ಕರುಣೆಯುಳ್ಳವೂ ಸತ್ಯವೂ ಆಗಿವೆ.


ಅದೇ ದಿನದಲ್ಲಿ ಅಬ್ರಹಾಮನು ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಸೇವಕರಿಗೆ ಹುಟ್ಟಿದ ಗಂಡುಮಕ್ಕಳಿಗೂ ಪರದೇಶಿಯರಿಂದ ಕೊಂಡುತಂದಿದ್ದ ಸೇವಕರಿಗೂ ದೇವರು ಹೇಳಿದಂತೆಯೇ ಸುನ್ನತಿ ಮಾಡಿಸಿದನು.


ನಾನು ಅವನೊಡನೆ ವಿಶೇಷವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ. ಅವನು ತನ್ನ ಮಕ್ಕಳಿಗೂ ಸಂತತಿಯವರಿಗೂ ನನಗೆ ವಿಧೇಯರಾಗುವಂತೆ ಮತ್ತು ನ್ಯಾಯನೀತಿಗಳಿಂದ ಜೀವಿಸುವಂತೆ ಆಜ್ಞಾಪಿಸಲೆಂದು ನಾನು ಅವನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ಅವರು ಹೀಗೆ ಜೀವಿಸಿದರೆ, ನನ್ನ ವಾಗ್ದಾನಗಳನ್ನೆಲ್ಲಾ ನೆರವೇರಿಸುವೆನು.”


ಆದ್ದರಿಂದ ನನ್ನ ಆಜ್ಞೆಗಳಿಗೆ ವಿಧೇಯರಾಗಬೇಕೆಂದು ನಾನು ನಿಮಗೆ ಹೇಳುತ್ತೇನೆ. ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಿರಿ. ಆಗ ನೀವು ನನಗೆ ವಿಶೇಷವಾದ ಜನರಾಗುವಿರಿ. ಈ ಲೋಕವೆಲ್ಲಾ ನನ್ನದೇ. ಆದರೆ ನಾನು ನಿಮ್ಮನ್ನು ನನ್ನ ಸ್ವಂತ ಜನಾಂಗವನ್ನಾಗಿ ಆರಿಸಿಕೊಳ್ಳುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು