Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:10 - ಪರಿಶುದ್ದ ಬೈಬಲ್‌

10 ಆಗ ಯೆಹೋವನು ಅವನಿಗೆ, “ನಾನು ಮತ್ತೆ ವಸಂತಕಾಲದಲ್ಲಿ ಬರುತ್ತೇನೆ. ಆ ಸಮಯದಲ್ಲಿ ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನಿರುವನು” ಎಂದು ಹೇಳಿದನು. ಸಾರಳು ಗುಡಾರದಲ್ಲಿದ್ದುಕೊಂಡು ಇದನ್ನೆಲ್ಲಾ ಕೇಳಿಸಿಕೊಳ್ಳುತ್ತಿದ್ದಳು. ಅವಳಿಗೆ ಈ ಸಂಗತಿಯೂ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದಕ್ಕೆ ಆತನು, “ಬರುವ ವರ್ಷ ಇದೇ ವೇಳೆಗೆ ನಾನು ತಪ್ಪದೆ ತಿರುಗಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಪತ್ನಿಯಾದ ಸಾರಳಿಗೆ ಮಗನಿರುವನು” ಎಂದನು. ಆ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ಸರ್ವೇಶ್ವರ ಸ್ವಾಮಿ, “ಬರುವ ವರ್ಷ ಇದೇ ಕಾಲದಲ್ಲಿ ನಾನು ತಪ್ಪದೆ ಮರಳಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಹೆಂಡತಿ ಸಾರಳಿಗೆ ಮಗನಿರುತ್ತಾನೆ,” ಎಂದರು. ಈ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದಕ್ಕಾತನು - ಬರುವ ವರುಷದ ಇದೇ ಕಾಲದಲ್ಲಿ ನಾನು ತಪ್ಪದೆ ತಿರಿಗಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಪತ್ನಿಯಾದ ಸಾರಳಿಗೆ ಮಗನಿರುವನು ಅಂದನು. ಆ ಮಾತು ಹಿಂದೆ ಗುಡಾರದ ಬಾಗಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಆ ಮೂವರಲ್ಲಿ ಒಬ್ಬರು, “ಬರುವ ವರ್ಷ ಇದೇ ಸಮಯದಲ್ಲಿ ನಾನು ನಿಶ್ಚಯವಾಗಿ ತಿರುಗಿ ನಿನ್ನ ಬಳಿಗೆ ಬರುವೆನು. ಆಗ ನಿನ್ನ ಹೆಂಡತಿ ಸಾರಳಿಗೆ ಒಬ್ಬ ಮಗನಿರುವನು,” ಎಂದನು. ಸಾರಳು ಅವರ ಹಿಂದೆ ಇದ್ದ ಡೇರೆಯ ಬಾಗಿಲಲ್ಲಿದ್ದು ಅದನ್ನು ಕೇಳಿಸಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:10
15 ತಿಳಿವುಗಳ ಹೋಲಿಕೆ  

ಸಾರಳು ವೃದ್ಧನಾಗಿದ್ದ ಅಬ್ರಹಾಮನಿಂದ ಗರ್ಭಿಣಿಯಾಗಿ, ಒಂದು ಗಂಡುಮಗುವನ್ನು ಹೆತ್ತಳು. ದೇವರು ವಾಗ್ದಾನ ಮಾಡಿದಂತೆಯೇ ಈ ಸಂಗತಿಗಳೆಲ್ಲ ತಕ್ಕಕಾಲದಲ್ಲಿ ನಡೆದವು.


ಆದರೆ ನಾನು ನನ್ನ ಒಡಂಬಡಿಕೆಯನ್ನು ಇಸಾಕನೊಡನೆ ಮಾಡಿಕೊಳ್ಳುವೆನು. ಸಾರಳಲ್ಲಿ ಹುಟ್ಟುವ ಮಗನೇ ಇಸಾಕನು. ಮುಂದಿನ ವರ್ಷ ಇದೇ ಸಮಯದಲ್ಲಿ ಇಸಾಕನು ಹುಟ್ಟುವನು” ಎಂದು ಹೇಳಿದನು.


ಅದಕ್ಕೆ ದೇವರು ಅವನಿಗೆ, “ಇಲ್ಲ! ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನು ಹುಟ್ಟುವನು. ನೀನು ಅವನಿಗೆ, ‘ಇಸಾಕ’ ಎಂದು ಹೆಸರಿಡಬೇಕು. ನಾನು ಒಂದು ಒಡಂಬಡಿಕೆಯನ್ನು ಅವನೊಡನೆ ಮಾಡಿಕೊಳ್ಳುವೆನು. ಆ ಒಡಂಬಡಿಕೆಯು ಅವನ ಎಲ್ಲಾ ಸಂತತಿಯವರಲ್ಲಿಯೂ ಶಾಶ್ವತವಾಗಿರುವುದು.


ನಾನು ಆಕೆಯನ್ನು ಆಶೀರ್ವದಿಸಿ ಆಕೆಗೆ ಒಬ್ಬ ಮಗನನ್ನು ದಯಪಾಲಿಸುವೆನು; ನೀನೇ ಅವನ ತಂದೆ. ಅನೇಕ ಜನಾಂಗಗಳಿಗೂ ರಾಜರುಗಳಿಗೂ ಆಕೆಯು ಮೂಲಮಾತೆಯಾಗಿರುವಳು” ಎಂದು ಹೇಳಿದನು.


ಅಬ್ರಹಾಮನ ಒಬ್ಬ ಮಗನು ಮಾನವ ಸಹಜವಾದ ರೀತಿಯಲ್ಲಿ ಜನಿಸಿದನು. ಅಬ್ರಹಾಮನ ಮತ್ತೊಬ್ಬ ಮಗನು ದೇವರ ವಾಗ್ದಾನದ ಫಲವಾಗಿ ದೇವರಾತ್ಮನ ಶಕ್ತಿಯಿಂದ ಜನಿಸಿದನು. ನನ್ನ ಸಹೋದರ ಸಹೋದರಿಯರೇ, ನೀವು ಸಹ ಇಸಾಕನಂತೆ ವಾಗ್ದಾನದ ಮಕ್ಕಳಾಗಿದ್ದೀರಿ. ಮಾನವ ಸಹಜವಾದ ರೀತಿಯಲ್ಲಿ ಜನಿಸಿದ್ದ ಮಗನು ಮತ್ತೊಬ್ಬ ಮಗನನ್ನು ಹಿಂಸೆಪಡಿಸಿದನು. ಇದೇ ಈಗಲೂ ನಡೆಯುತ್ತಿದೆ.


ಮಾನವ ಸಹಜವಾದ ರೀತಿಯಲ್ಲಿ ಅಬ್ರಹಾಮನ ಮಗನು ಆ ದಾಸಿಯಲ್ಲಿ ಹುಟ್ಟಿದನು. ಸ್ವತಂತ್ರಳಾಗಿದ್ದ ಸ್ತ್ರೀಯಲ್ಲಿ ಹುಟ್ಟಿದ ಮಗನಾದರೋ ದೇವರು ಅಬ್ರಹಾಮನಿಗೆ ಮಾಡಿದ ವಾಗ್ದಾನದ ಫಲವಾಗಿದ್ದನು.


ಆದರೆ ದೇವದೂತನು ಅವನಿಗೆ, “ಜಕರೀಯನೇ, ಹೆದರಬೇಡ. ನಿನ್ನ ಪ್ರಾರ್ಥನೆ ದೇವರಿಗೆ ಕೇಳಿಸಿತು. ನಿನ್ನ ಹೆಂಡತಿಯಾದ ಎಲಿಜಬೇತಳು ಒಂದು ಗಂಡುಮಗುವನ್ನು ಹೆರುವಳು. ನೀನು ಅವನಿಗೆ ಯೋಹಾನ ಎಂದು ಹೆಸರಿಡಬೇಕು.


ಇದಲ್ಲದೆ ಯೆಹೋವನ ದೂತನು ಹಾಗರಳಿಗೆ, “ನಾನು ನಿನ್ನ ಸಂತತಿಯವರನ್ನು ಅಸಂಖ್ಯಾತರನ್ನಾಗಿ ಮಾಡುವೆನು” ಅಂದನು.


ಆ ಪುರುಷರು ಅಬ್ರಹಾಮನಿಗೆ, “ನಿನ್ನ ಹೆಂಡತಿಯಾದ ಸಾರಳು ಎಲ್ಲಿ?” ಎಂದು ಕೇಳಿದರು. ಅಬ್ರಹಾಮನು ಅವರಿಗೆ, “ಆಕೆ ಗುಡಾರದಲ್ಲಿ ಇದ್ದಾಳೆ” ಅಂದನು.


ಯೆಹೋವನು ಸಾರಳಿಗೆ ಮಾಡಿದ ವಾಗ್ದಾನವನ್ನು ಮರೆಯದೆ ಈಡೇರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು