Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:11 - ಪರಿಶುದ್ದ ಬೈಬಲ್‌

11 ಅಬ್ರಹಾಮನೂ ಮತ್ತು ಸಾರಳೂ ತುಂಬ ವೃದ್ಧರಾಗಿದ್ದರು. ಸಾರಳಿಗೂ ಮಕ್ಕಳು ಹುಟ್ಟುವ ಕಾಲ ಆಗಿಹೋಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅಬ್ರಹಾಮನೂ ಸಾರಳೂ ಬಹುವೃದ್ಧರಾಗಿದ್ದರು; ಸಾರಳಿಗೆ ಮುಟ್ಟು ನಿಂತು ಹೋಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅಬ್ರಹಾಮನು ಮತ್ತು ಸಾರಳು ಬಹು ವೃದ್ಧರಾಗಿದ್ದರು; ಸಾರಳಿಗೆ ಮುಟ್ಟುನಿಂತುಹೋಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅಬ್ರಹಾಮನೂ ಸಾರಳೂ ಬಹು ವೃದ್ಧರಾಗಿದ್ದರು; ಸಾರಳಿಗೆ ಮುಟ್ಟು ನಿಂತು ಹೋಗಿತ್ತು. ಹೀಗಿರಲಾಗಿ ಆಕೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅಬ್ರಹಾಮನೂ ಸಾರಳೂ ವಯಸ್ಸಾಗಿ, ಮುದುಕರಾಗಿದ್ದರು. ಸಾರಳಿಗೆ ಮಗುವನ್ನು ಹೆರುವ ಕಾಲ ಮುಗಿದು ಹೋಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:11
14 ತಿಳಿವುಗಳ ಹೋಲಿಕೆ  

ಅಬ್ರಹಾಮನು ದೇವರಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಆದರೆ ಅವನು ಮನಸ್ಸಿನಲ್ಲಿ ನಗುತ್ತಾ, “ನನಗೆ ನೂರು ವರ್ಷ ವಯಸ್ಸಾಗಿರುವುದರಿಂದ ಮಗನನ್ನು ಪಡೆಯಲು ನನಗೂ ಸಾಧ್ಯವಿಲ್ಲ. ಸಾರಳಿಗೆ ತೊಂಭತ್ತು ವರ್ಷ ವಯಸ್ಸಾಗಿರುವುದರಿಂದ ಮಗನನ್ನು ಪಡೆಯಲು ಆಕೆಗೂ ಸಾಧ್ಯವಿಲ್ಲ” ಅಂದುಕೊಂಡನು.


ದೇವರು ಸತ್ತವರನ್ನು ಜೀವಂತವಾಗಿ ಎಬ್ಬಿಸಬಲ್ಲನೆಂದು ಅವನು ನಂಬಿದ್ದನು. ಇಸಾಕನನ್ನು ಕೊಲ್ಲದಂತೆ ದೇವರು ಅವನನ್ನು ತಡೆದಾಗ, ಅವನಿಗೆ ನಿಜವಾಗಿಯೂ ಇಸಾಕನನ್ನು ಸಾವಿನಿಂದ ಮರಳಿ ಪಡೆದಂತಾಯಿತು.


ಇದಲ್ಲದೆ, ನಿನ್ನ ಬಂಧುವಾದ ಎಲಿಜಬೇತಳು ಗರ್ಭಿಣಿಯಾಗಿದ್ದಾಳೆ. ಆಕೆಯು ಬಹಳ ಮುಪ್ಪಿನವಳಾಗಿದ್ದರೂ ಆಕೆಗೊಬ್ಬ ಮಗ ಹುಟ್ಟುವನು. ಜನರಿಂದ ಬಂಜೆ ಎನಿಸಿಕೊಂಡಿದ್ದ ಆಕೆ ಈಗ ಆರು ತಿಂಗಳ ಗರ್ಭಿಣಿಯಾಗಿದ್ದಾಳೆ.


ಜಕರೀಯನು ದೇವದೂತನಿಗೆ, “ನೀನು ಹೇಳುತ್ತಿರುವುದು ಸತ್ಯವೆಂಬುದಕ್ಕೆ ಆಧಾರವೇನು? ನಾನು ಮುದುಕನಾಗಿದ್ದೇನೆ ಮತ್ತು ನನ್ನ ಹೆಂಡತಿ ಸಹ ಮುಪ್ಪಿನವಳಾಗಿದ್ದಾಳೆ” ಎಂದು ಹೇಳಿದನು.


ಅವರಿಗೆ ಮಕ್ಕಳಿರಲಿಲ್ಲ. ಎಲಿಜಬೇತಳು ಬಂಜೆಯಾಗಿದ್ದಳು; ಮತ್ತು ಅವರಿಬ್ಬರೂ ಬಹಳ ಮುಪ್ಪಿನವರಾಗಿದ್ದರು.


“ಸ್ತ್ರೀಗೆ ಅವಳ ತಿಂಗಳ ಮುಟ್ಟಿನಿಂದ ಸ್ರಾವವಿದ್ದರೆ, ಅವಳು ಏಳು ದಿನಗಳವರೆಗೆ ಅಶುದ್ಧಳಾಗಿರುವಳು. ಯಾವನಾದರೂ ಆಕೆಯನ್ನು ಮುಟ್ಟಿದರೆ, ಆ ವ್ಯಕ್ತಿಯೂ ಸಾಯಂಕಾಲದವರೆಗೆ ಆಶುದ್ಧನಾಗಿರುವನು.


ಆಗ ರಾಹೇಲಳು ತನ್ನ ತಂದೆಗೆ, “ಅಪ್ಪಾ, ನನ್ನ ಮೇಲೆ ಕೋಪಗೊಳ್ಳಬೇಡ. ನಿನ್ನ ಮುಂದೆ ನಿಂತುಕೊಳ್ಳಲು ನನಗೆ ಸಾಧ್ಯವಿಲ್ಲ. ಯಾಕೆಂದರೆ ನಾನು ಮುಟ್ಟಾಗಿದ್ದೇನೆ” ಎಂದು ಹೇಳಿದಳು. ಲಾಬಾನನು ಪಾಳೆಯದಲ್ಲೆಲ್ಲಾ ಹುಡುಕಿದರೂ ತನ್ನ ವಿಗ್ರಹಗಳನ್ನು ಕಂಡುಕೊಳ್ಳಲಾಗಲಿಲ್ಲ.


ಅಬ್ರಹಾಮನು ಸುನ್ನತಿ ಮಾಡಿಸಿಕೊಂಡಾಗ ತೊಂಭತ್ತೊಂಭತ್ತು ವರ್ಷದವನಾಗಿದ್ದನು.


ಅಬ್ರಹಾಮನಿಗೆ ಸಾರಳಲ್ಲಿ ಮಗನು ಹುಟ್ಟುತ್ತಾನೆಂದು ಯಾರೂ ಯೋಚಿಸಿರಲಿಲ್ಲ. ಅಬ್ರಹಾಮನು ವೃದ್ಧನಾಗಿದ್ದರೂ ಈಗ ನಾನು ಅವನಿಗೆ ಒಬ್ಬ ಮಗನನ್ನು ಕೊಟ್ಟಿದ್ದೇನೆ” ಅಂದಳು.


ಅಬ್ರಹಾಮನು ಬಹಳ ವೃದ್ಧನಾದನು. ಯೆಹೋವನು ಅಬ್ರಹಾಮನನ್ನೂ ಅವನು ಮಾಡಿದ ಪ್ರತಿಯೊಂದನ್ನೂ ಆಶೀರ್ವದಿಸಿದನು.


ಸಾರಳು ನನ್ನ ಒಡೆಯನ ಹೆಂಡತಿ. ಆಕೆ ತುಂಬಾ ವಯಸ್ಸಾಗಿರುವಾಗ ಒಬ್ಬ ಗಂಡುಮಗನನ್ನು ಹೆತ್ತಳು. ನನ್ನ ಒಡೆಯನು ತನ್ನ ಆಸ್ತಿಯನ್ನೆಲ್ಲ ಆ ಮಗನಿಗೇ ಕೊಟ್ಟಿದ್ದಾನೆ.


ಯೆಹೋಶುವನು ತುಂಬಾ ಮುದುಕನಾದಾಗ ಯೆಹೋವನು ಅವನಿಗೆ, “ಯೆಹೋಶುವನೆ, ನೀನು ವೃದ್ಧನಾದೆ. ಆದರೆ ನೀನು ಇನ್ನೂ ಸ್ವಾಧೀನಪಡಿಸಿಕೊಳ್ಳಬೇಕಾದ ಪ್ರದೇಶ ಬಹಳಷ್ಟಿದೆ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು