Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:14 - ಪರಿಶುದ್ದ ಬೈಬಲ್‌

14 ಯೆಹೋವನಿಗೆ ಅಸಾಧ್ಯವಾದುದುಂಟೇ? ನಾನು ಮತ್ತೆ ವಸಂತಕಾಲದಲ್ಲಿ ಬರುವೆನು. ಆಗ ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನಿದ್ದೇ ಇರುವನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸರ್ವೇಶ್ವರನಿಗೆ ಅಸಾಧ್ಯವಾದುದು ಯಾವುದು? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುತ್ತಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರುಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರಿಗೆ ಅಸಾಧ್ಯವಾದದ್ದು ಯಾವುದಾದರೂ ಇದೆಯೋ? ಬರುವ ವರ್ಷ ಇದೇ ಸಮಯದಲ್ಲಿ ನಾನು ತಿರುಗಿ ನಿನ್ನ ಬಳಿಗೆ ಬರುವೆನು. ಆಗ ಸಾರಳಿಗೆ ಒಬ್ಬ ಮಗನಿರುವನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:14
38 ತಿಳಿವುಗಳ ಹೋಲಿಕೆ  

ದೇವರಿಗೆ ಯಾವುದೂ ಅಸಾಧ್ಯವಲ್ಲ,” ಎಂದು ಹೇಳಿದನು.


ಯೇಸು ತನ್ನ ಶಿಷ್ಯರ ಕಡೆಗೆ ದೃಷ್ಟಿಸಿ, “ಇದು ಮನುಷ್ಯರಿಗೆ ಅಸಾಧ್ಯವಾದ ಕಾರ್ಯ. ಆದರೆ ದೇವರಿಗೆ ಎಲ್ಲವೂ ಸಾಧ್ಯ” ಎಂದು ಹೇಳಿದನು.


ಯೇಸು ಶಿಷ್ಯರ ಕಡೆಗೆ ನೋಡಿ, “ಇದು ಮನುಷ್ಯರಿಗಷ್ಟೇ ಅಸಾಧ್ಯ, ದೇವರಿಗಲ್ಲ” ಎಂದನು.


“ಯೆರೆಮೀಯನೇ, ನಾನೇ ಯೆಹೋವನು, ನಾನು ಈ ಭೂಮಂಡಲದ ಪ್ರತಿಯೊಬ್ಬನ ದೇವರು. ಯೆರೆಮೀಯನೆ, ನನಗೆ ಯಾವುದೂ ಅಸಾಧ್ಯವಲ್ಲವೆಂಬುದನ್ನು ನೀನು ಬಲ್ಲೆ.”


ನಮ್ಮಲ್ಲಿ ಕಾರ್ಯಮಾಡುತ್ತಿರುವ ತನ್ನ ಶಕ್ತಿಯಿಂದ ನಾವು ಕೇಳುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಎಷ್ಟೋ ಹೆಚ್ಚೆಚ್ಚಾಗಿ ದೇವರು ಮಾಡಬಲ್ಲನು.


“ಯೆಹೋವನೇ, ನೀನು ಪ್ರತಿಯೊಂದನ್ನೂ ಮಾಡಬಲ್ಲೆ ಎಂದು ನನಗೆ ಗೊತ್ತಿದೆ. ನೀನು ಮಾಡಿದ ಆಲೋಚನೆಗಳನ್ನು ಯಾವುದೂ ಬದಲಿಸಲಾರದು; ಯಾವುದೂ ನಿಲ್ಲಿಸಲಾರದು.


ಕ್ರಿಸ್ತನ ಮೂಲಕ ನಾನು ಎಲ್ಲಾ ಕಾರ್ಯಗಳನ್ನು ಮಾಡಬಲ್ಲೆನು. ಏಕೆಂದರೆ ಆತನು ನನ್ನನ್ನು ಬಲಪಡಿಸುತ್ತಾನೆ.


“ದೇವರಾದ ಯೆಹೋವನೇ, ನೀನು ಭೂಮ್ಯಾಕಾಶಗಳನ್ನು ಸೃಷ್ಟಿಸಿದೆ. ಅವುಗಳನ್ನು ನೀನು ನಿನ್ನ ಅಪಾರವಾದ ಶಕ್ತಿಯಿಂದ ಸೃಷ್ಟಿಸಿದೆ. ನಿನಗೆ ಅಸಾಧ್ಯವಾದುದು ಯಾವುದೂ ಇಲ್ಲ.


ದೇವರು ತಾನು ಮಾಡಿದ ವಾಗ್ದಾನವನ್ನು ಖಂಡಿತವಾಗಿ ನೆರವೇರಿಸಬಲ್ಲನೆಂದು ಅಬ್ರಹಾಮನು ದೃಢವಾಗಿ ನಂಬಿದನು.


ಆದರೆ ಯೆಹೋವನು ಮೋಶೆಗೆ, “ಯೆಹೋವನ ಶಕ್ತಿಗೆ ಮಿತಿಯಿಲ್ಲ. ನಾನು ಹೇಳುತ್ತಿರುವ ಸಂಗತಿಗಳು ನಡೆಯುವುದನ್ನು ನೀನು ನೋಡುವೆ” ಎಂದು ಹೇಳಿದನು.


ಎಲೀಷನು ಆ ಸ್ತ್ರೀಗೆ, “ಮುಂದಿನ ವಸಂತಮಾಸದ ಈ ಕಾಲಕ್ಕೆ ನೀನು ನಿನ್ನ ಗಂಡುಮಗುವನ್ನು ಅಪ್ಪಿಕೊಂಡಿರುವೆ” ಎಂದು ಹೇಳಿದನು. ಆ ಸ್ತ್ರೀಯು, “ದೇವಮನುಷ್ಯನೇ, ಹೀಗೆ ಹೇಳಿ ನಿನ್ನ ಸೇವಕಿಯನ್ನು ವಂಚಿಸಬೇಡ” ಎಂದು ಹೇಳಿದಳು.


ಅವರಿಗೆ ನೀವು ಭಯಪಡಬೇಡಿರಿ; ಯಾಕೆಂದರೆ ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗಿದ್ದಾನೆ. ಆತನು ಭಯಂಕರನೂ ಮಹಾ ದೇವರೂ ಆಗಿದ್ದಾನೆ.


ಯೇಸು ತನ್ನ ಕೈ ಚಾಚಿ ಪೇತ್ರನನ್ನು ಹಿಡಿದುಕೊಂಡನು. ಯೇಸು, “ಅಲ್ಪವಿಶ್ವಾಸಿಯೇ, ಏಕೆ ಸಂದೇಹಪಟ್ಟೆ?” ಎಂದನು.


ಅಳಿದುಳಿದುವರು “ಇದು ಆಶ್ಚರ್ಯಕರ” ಎಂದು ಹೇಳುವರು. ನಾನೂ ಇದು ಆಶ್ಚರ್ಯಕರವೆಂದು ತಿಳಿಯುತ್ತೇನೆ.


ನಿನ್ನ ಹಾಗೆ ಬೇರೆ ಯಾವ ದೇವರೂ ಇಲ್ಲ. ಪಾಪದಲ್ಲಿ ಬಿದ್ದವರನ್ನು ನೀನು ಕ್ಷಮಿಸುವೆ. ನಿನ್ನ ಜನಶೇಷವನ್ನು ಮನ್ನಿಸುವೆ. ನೀನು ನಿತ್ಯಕ್ಕೂ ಕೋಪಿಸುವದಿಲ್ಲ. ಯಾಕೆಂದರೆ ದಯೆತೋರಿಸುವದರಲ್ಲಿ ನೀನು ಸಂತೋಷಿಸುವೆ.


ಯಾಕೆಂದರೆ ಯೆಹೋವನು ಮಹಾದೇವರಾಗಿದ್ದಾನೆ! ಆತನು ದೇವರುಗಳಿಗೆಲ್ಲಾ ಮಹಾರಾಜನಾಗಿದ್ದಾನೆ.


ಆಗ ದೇವರಾದ ಯೆಹೋವನು ನಿಮ್ಮ ಮೇಲೆ ದಯೆ ತೋರಿಸುವನು. ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿ ಎಲ್ಲಿ ಚದರಿಸಲ್ಪಟ್ಟಿದ್ದೀರೋ ಅಲ್ಲಿಂದ ತಿರುಗಿ ಹಿಂದಕ್ಕೆ ತರುವನು.


ಆಗ ಯೆಹೋವನು ಅವನಿಗೆ, “ನಾನು ಮತ್ತೆ ವಸಂತಕಾಲದಲ್ಲಿ ಬರುತ್ತೇನೆ. ಆ ಸಮಯದಲ್ಲಿ ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನಿರುವನು” ಎಂದು ಹೇಳಿದನು. ಸಾರಳು ಗುಡಾರದಲ್ಲಿದ್ದುಕೊಂಡು ಇದನ್ನೆಲ್ಲಾ ಕೇಳಿಸಿಕೊಳ್ಳುತ್ತಿದ್ದಳು. ಅವಳಿಗೆ ಈ ಸಂಗತಿಯೂ ಕೇಳಿಸಿತು.


ಆದರೆ ದೇವದೂತನು ಅವನಿಗೆ, “ಜಕರೀಯನೇ, ಹೆದರಬೇಡ. ನಿನ್ನ ಪ್ರಾರ್ಥನೆ ದೇವರಿಗೆ ಕೇಳಿಸಿತು. ನಿನ್ನ ಹೆಂಡತಿಯಾದ ಎಲಿಜಬೇತಳು ಒಂದು ಗಂಡುಮಗುವನ್ನು ಹೆರುವಳು. ನೀನು ಅವನಿಗೆ ಯೋಹಾನ ಎಂದು ಹೆಸರಿಡಬೇಕು.


“ದೇವರು ಮಹಾ ಶಕ್ತಿಶಾಲಿಯಾಗಿದ್ದರೂ ಜನರನ್ನು ತಿರಸ್ಕರಿಸುವುದಿಲ್ಲ. ದೇವರು ಮಹಾ ಬಲಶಾಲಿಯೂ ಹೌದು, ಮಹಾ ಜ್ಞಾನಿಯೂ ಹೌದು!


ಆದರೆ ನಾನು ನನ್ನ ಒಡಂಬಡಿಕೆಯನ್ನು ಇಸಾಕನೊಡನೆ ಮಾಡಿಕೊಳ್ಳುವೆನು. ಸಾರಳಲ್ಲಿ ಹುಟ್ಟುವ ಮಗನೇ ಇಸಾಕನು. ಮುಂದಿನ ವರ್ಷ ಇದೇ ಸಮಯದಲ್ಲಿ ಇಸಾಕನು ಹುಟ್ಟುವನು” ಎಂದು ಹೇಳಿದನು.


ದೇವರು ಸತ್ತವರನ್ನು ಜೀವಂತವಾಗಿ ಎಬ್ಬಿಸಬಲ್ಲನೆಂದು ಅವನು ನಂಬಿದ್ದನು. ಇಸಾಕನನ್ನು ಕೊಲ್ಲದಂತೆ ದೇವರು ಅವನನ್ನು ತಡೆದಾಗ, ಅವನಿಗೆ ನಿಜವಾಗಿಯೂ ಇಸಾಕನನ್ನು ಸಾವಿನಿಂದ ಮರಳಿ ಪಡೆದಂತಾಯಿತು.


ಯೇಸು ಇದನ್ನು ಕೇಳಿ ಯಾಯಿರನಿಗೆ, “ಭಯಪಡಬೇಡ. ನಂಬಿಕೆಯೊಂದಿರಲಿ. ನಿನ್ನ ಮಗಳಿಗೆ ಗುಣವಾಗುವುದು” ಎಂದು ಹೇಳಿದನು.


ಯೋನಾತಾನನು ತನ್ನ ಆಯುಧಗಳನ್ನು ಹೊತ್ತುಕೊಂಡು ಬರುತ್ತಿದ್ದ ಯುವಸಹಾಯಕನಿಗೆ, “ಆ ಹೊರದೇಶಿಯರ ಪಾಳೆಯಕ್ಕೆ ಹೋಗೋಣ ಬಾ. ಈ ಜನರನ್ನು ಸೋಲಿಸಲು ಯೆಹೋವನು ಬಹುಶಃ ನಮ್ಮನ್ನು ಬಳಸಬಹುದು. ಯೆಹೋವನನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ನಮ್ಮಲ್ಲಿ ಅನೇಕ ಸೈನಿಕರಿದ್ದರೂ ಇಲ್ಲವೆ ಕೆಲವೇ ಸೈನಿಕರಿದ್ದರೂ ಅದು ಲೆಕ್ಕಕ್ಕೆ ಬರುವುದಿಲ್ಲ” ಎಂದು ಹೇಳಿದನು.


ಆತನು ತನ್ನ ಶಕ್ತಿಯಿಂದ ಸಮಸ್ತವನ್ನು ಆಳುತ್ತಾನೆ ಮತ್ತು ನಮ್ಮ ದೀನಾವಸ್ಥೆಯ ಈ ಶರೀರವನ್ನು ರೂಪಾಂತರಪಡಿಸಿ ತನ್ನ ಸ್ವಂತ ಮಹಿಮಾಶರೀರದಂತೆ ಮಾಡುತ್ತಾನೆ.


ಜಕರೀಯನು ದೇವದೂತನಿಗೆ, “ನೀನು ಹೇಳುತ್ತಿರುವುದು ಸತ್ಯವೆಂಬುದಕ್ಕೆ ಆಧಾರವೇನು? ನಾನು ಮುದುಕನಾಗಿದ್ದೇನೆ ಮತ್ತು ನನ್ನ ಹೆಂಡತಿ ಸಹ ಮುಪ್ಪಿನವಳಾಗಿದ್ದಾಳೆ” ಎಂದು ಹೇಳಿದನು.


‘ಅಬ್ರಹಾಮನು ನಮ್ಮ ತಂದೆ’ ಎಂದು ನೀವು ಜಂಬಪಡುವುದೇಕೆ? ದೇವರು ಅಬ್ರಹಾಮನಿಗಾಗಿ ಇಲ್ಲಿರುವ ಬಂಡೆಗಳಿಂದಲೂ ಮಕ್ಕಳನ್ನು ಸೃಷ್ಟಿಸಬಲ್ಲನು ಎಂದು ನಾನು ನಿಮಗೆ ಹೇಳುತ್ತೇನೆ.


ಯೆಹೋವನೇ ರಾಜನು. ಆತನು ವೈಭವವನ್ನೂ ಬಲವನ್ನೂ ವಸ್ತ್ರದಂತೆ ಧರಿಸಿಕೊಂಡಿದ್ದಾನೆ. ಆತನು ಸಿದ್ಧನಾಗಿರುವುದರಿಂದ ಇಡೀ ಪ್ರಂಪಚವೇ ಸುರಕ್ಷಿತವಾಗಿರುವುದು. ಅದು ಕದಲುವುದೇ ಇಲ್ಲ.


ಯೆಹೋವನೇ, ನಮ್ಮ ಬಳಿಗೆ ಹಿಂತಿರುಗಿ ಬಾ. ನಿನ್ನ ಸೇವಕರ ಮೇಲೆ ಅಂತಃಕರಣವಿರಲಿ.


ಆಗ ಯೆಹೋವನು ಅಬ್ರಹಾಮನಿಗೆ, “ನಾನು ಹೇಳುವುದನ್ನು ಸಾರಳು ನಂಬುತ್ತಿಲ್ಲ. ಆಕೆಯು ನಗುತ್ತಾ ತನ್ನೊಳಗೆ, ‘ನನಗೆ ಮಕ್ಕಳಾಗದಷ್ಟು ವಯಸ್ಸಾಗಿದೆ’ ಎಂದು ಹೇಳಿದ್ದೇಕೆ?


ಆದರೆ ಸಾರಳು ಭಯಪಟ್ಟು, “ನಾನು ನಗಲಿಲ್ಲ” ಅಂದಳು. ಅದಕ್ಕೆ ಯೆಹೋವನು, “ಇಲ್ಲ, ನೀನು ನಕ್ಕಿದ್ದು ನಿಜ!” ಅಂದನು.


ಯೆಹೋವನು ಸಾರಳಿಗೆ ಮಾಡಿದ ವಾಗ್ದಾನವನ್ನು ಮರೆಯದೆ ಈಡೇರಿಸಿದನು.


ಸಾರಳು ವೃದ್ಧನಾಗಿದ್ದ ಅಬ್ರಹಾಮನಿಂದ ಗರ್ಭಿಣಿಯಾಗಿ, ಒಂದು ಗಂಡುಮಗುವನ್ನು ಹೆತ್ತಳು. ದೇವರು ವಾಗ್ದಾನ ಮಾಡಿದಂತೆಯೇ ಈ ಸಂಗತಿಗಳೆಲ್ಲ ತಕ್ಕಕಾಲದಲ್ಲಿ ನಡೆದವು.


ನಾನು ಮನೆಗೆ ಬಂದಾಗ ಅಲ್ಲಿ ಯಾರೂ ಇರಲಿಲ್ಲ. ನಾನು ಎಷ್ಟು ಕರೆದರೂ ಯಾರೂ ಉತ್ತರ ಕೊಡಲಿಲ್ಲ. ನಿಮ್ಮನ್ನು ರಕ್ಷಿಸಲು ನನ್ನಿಂದ ಸಾಧ್ಯವಿಲ್ಲವೆಂದು ನೀವು ನೆನಸುತ್ತೀರಾ? ನಿಮ್ಮ ಎಲ್ಲಾ ಕಷ್ಟಗಳಿಂದ ನಿಮ್ಮನ್ನು ಪಾರುಮಾಡಲು ನನಗೆ ಸಾಮರ್ಥ್ಯವಿದೆ. ಇಗೋ, ನಾನು ಸಮುದ್ರಕ್ಕೆ ಒಣಗಿಹೋಗು ಎಂದು ಹೇಳಿದರೆ ಹಾಗೆಯೇ ಆಗುವದು. ಮೀನುಗಳು ನೀರಿಲ್ಲದೆ ಸತ್ತು ನಾರುವವು.


ರಾಜನಿಗೆ ಬಹಳ ಚಿಂತೆಯಾಗಿತ್ತು. ರಾಜನು ಸಿಂಹಗಳ ಗುಹೆಗೆ ಹೋಗಿ, “ದಾನಿಯೇಲನೇ, ಜೀವಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಸೇವೆ ಮಾಡುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉಳಿಸಲು ಶಕ್ತನಾದನೇ?” ಎಂದು ಕೂಗಿ ಕೇಳಿದನು.


ನಾನು ಆಕೆಯನ್ನು ಆಶೀರ್ವದಿಸಿ ಆಕೆಗೆ ಒಬ್ಬ ಮಗನನ್ನು ದಯಪಾಲಿಸುವೆನು; ನೀನೇ ಅವನ ತಂದೆ. ಅನೇಕ ಜನಾಂಗಗಳಿಗೂ ರಾಜರುಗಳಿಗೂ ಆಕೆಯು ಮೂಲಮಾತೆಯಾಗಿರುವಳು” ಎಂದು ಹೇಳಿದನು.


ಒಮ್ಮೆ ಯೆಹೋವನ ದೂತನು ಮಾನೋಹನ ಹೆಂಡತಿಗೆ ಪ್ರತ್ಯಕ್ಷನಾಗಿ, “ನೀನು ಮಕ್ಕಳನ್ನು ಪಡೆಯಲು ಸಾಧ್ಯವಾಗಿಲ್ಲ; ಆದರೆ ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು