ಆದಿಕಾಂಡ 18:17 - ಪರಿಶುದ್ದ ಬೈಬಲ್17 ಯೆಹೋವನು ತನ್ನೊಳಗೆ ಹೀಗೆಂದುಕೊಂಡನು: “ನಾನು ಈಗ ಮಾಡುವ ಕಾರ್ಯವನ್ನು ಅಬ್ರಹಾಮನಿಗೆ ತಿಳಿಸಲೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆಗ ಯೆಹೋವನು ತನ್ನೊಳಗೆ, “ನಾನು ಮಾಡಬೇಕೆಂದಿರುವ ಕಾರ್ಯವನ್ನು ಅಬ್ರಹಾಮನಿಗೆ ಮರೆಮಾಡುವುದು ಸರಿಯೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆಗ ಸರ್ವೇಶ್ವರ ತಮ್ಮೊಳಗೆ ಇಂತೆಂದುಕೊಂಡರು: “ನಾನು ಮಾಡಬೇಕು ಎಂದಿರುವ ಕಾರ್ಯವನ್ನು ಅಬ್ರಹಾಮನಿಂದ ಮರೆಮಾಡುವುದು ಸರಿಯಲ್ಲ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆಗ ಯೆಹೋವನು ತನ್ನೊಳಗೆ - ನಾನು ಮಾಡಬೇಕೆಂದಿರುವ ಕಾರ್ಯವನ್ನು ಅಬ್ರಹಾಮನಿಗೆ ಮರೆಮಾಡುವದು ಸರಿಯೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಗ ಯೆಹೋವ ದೇವರು, “ನಾನು ಮಾಡುವುದನ್ನು ಅಬ್ರಹಾಮನಿಗೆ ಮರೆಮಾಡಲೋ? ಅಧ್ಯಾಯವನ್ನು ನೋಡಿ |
ಆದರೆ ಶೂನೇಮಿನ ಈ ಸ್ತ್ರೀಯು ದೇವಮನುಷ್ಯನಿದ್ದ ಬೆಟ್ಟದವರೆಗೆ ಹೋದಳು. ಅವಳು ನೆಲಕ್ಕೆ ಬಾಗಿ, ಎಲೀಷನ ಪಾದಗಳನ್ನು ಹಿಡಿದುಕೊಂಡಳು. ಶೂನೇಮಿನ ಆ ಸ್ತ್ರೀಯನ್ನು ತಳ್ಳಿಬಿಡಲು ಗೇಹಜಿಯು ಹತ್ತಿರಕ್ಕೆ ಬಂದನು. ಆದರೆ ದೇವಮನುಷ್ಯನು ಗೇಹಜಿಗೆ, “ಅವಳನ್ನು ತಡೆಯಬೇಡ! ಅವಳು ಬಹಳ ತಳಮಳಗೊಂಡಿದ್ದಾಳೆ. ಯೆಹೋವನು ನನಗೆ ಆಕೆಯ ದುಃಖವನ್ನು ಪ್ರಕಟಿಸಲಿಲ್ಲ; ನನಗೆ ಮರೆಮಾಡಿದ್ದಾನೆ” ಎಂದು ಹೇಳಿದನು.