ಆದಿಕಾಂಡ 18:19 - ಪರಿಶುದ್ದ ಬೈಬಲ್19 ನಾನು ಅವನೊಡನೆ ವಿಶೇಷವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ. ಅವನು ತನ್ನ ಮಕ್ಕಳಿಗೂ ಸಂತತಿಯವರಿಗೂ ನನಗೆ ವಿಧೇಯರಾಗುವಂತೆ ಮತ್ತು ನ್ಯಾಯನೀತಿಗಳಿಂದ ಜೀವಿಸುವಂತೆ ಆಜ್ಞಾಪಿಸಲೆಂದು ನಾನು ಅವನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ಅವರು ಹೀಗೆ ಜೀವಿಸಿದರೆ, ನನ್ನ ವಾಗ್ದಾನಗಳನ್ನೆಲ್ಲಾ ನೆರವೇರಿಸುವೆನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅವನು ತನ್ನ ಪುತ್ರಪೌತ್ರರಿಗೆ, ‘ನೀವು ನ್ಯಾಯನೀತಿಯನ್ನು ಪಾಲಿಸುತ್ತಾ ಸರ್ವೇಶ್ವರ ಸ್ವಾಮಿಯ ಮಾರ್ಗದಲ್ಲೇ ನಡೆಯಬೇಕು; ಹಾಗೆ ಮಾಡಿದರೆ ವಾಗ್ದಾನ ಮಾಡಿದುದನ್ನೆಲ್ಲ ಈಡೇರಿಸುವರು,’ ಎಂದು ಬೋಧಿಸಲೆಂದೇ ನಾನು ಅವನನ್ನು ಆರಿಸಿಕೊಂಡಿದ್ದೇನೆ". ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವನು ತನ್ನ ಪುತ್ರಪೌತ್ರರಿಗೆ - ನೀವು ನ್ಯಾಯನೀತಿಗಳನ್ನು ನಡಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆದುಕೊಂಡೆನಲ್ಲಾ; ಅವನು ಹೀಗೆ ಮಾಡುವದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವದು ಅಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಏಕೆಂದರೆ, ಅವನು ತನ್ನ ಮಕ್ಕಳಿಗೂ ಅವನ ತರುವಾಯ ಅವನ ಮನೆಯವರಿಗೂ ಯೆಹೋವ ದೇವರ ಮಾರ್ಗವನ್ನು ಕೈಗೊಂಡು, ನೀತಿ ನ್ಯಾಯಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸುವನು. ಆಗ ಯೆಹೋವ ದೇವರಾದ ನಾನು ಅಬ್ರಹಾಮನಿಗೆ ಹೇಳಿದ್ದು ನೆರವೇರುವದು,” ಎಂದುಕೊಂಡರು. ಅಧ್ಯಾಯವನ್ನು ನೋಡಿ |
“ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆಮಾಡುವಿರೋ ಅಥವಾ ಈ ಪ್ರದೇಶದಲ್ಲಿದ್ದ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟಿದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು.
ಪ್ರತಿಯೊಂದು ಔತಣಕೂಟದ ದಿನಗಳು ಮುಗಿದ ಮೇಲೆ ಯೋಬನು ಅವರನ್ನು ಶುದ್ಧೀಕರಿಸುತ್ತಿದ್ದನು. ಅದಕ್ಕಾಗಿ ಅವನು ಮುಂಜಾನೆಯಲ್ಲಿಯೇ ಎದ್ದು ತನ್ನ ಪ್ರತಿಯೊಬ್ಬ ಮಕ್ಕಳ ಹೆಸರಿನಲ್ಲಿ ಒಂದೊಂದು ಸರ್ವಾಂಗಹೋಮವನ್ನು ಅರ್ಪಿಸುತ್ತಿದ್ದನು. ಯಾಕೆಂದರೆ, “ಒಂದುವೇಳೆ ನನ್ನ ಮಕ್ಕಳು ಹೃದಯದಲ್ಲಿ ದೇವರನ್ನು ದೂಷಿಸಿ ಪಾಪಮಾಡಿರಬಹುದು” ಎಂಬುದು ಯೋಬನ ಆಲೋಚನೆಯಾಗಿತ್ತು. ತನ್ನ ಮಕ್ಕಳ ಪಾಪಕ್ಷಮೆಗಾಗಿ ಯೋಬನು ಯಾವಾಗಲೂ ಹೀಗೆ ಮಾಡುತ್ತಿದ್ದನು.
ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಯೇಸು, “ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಮೂರು ಸಾರಿ ಕೇಳಿದ್ದರಿಂದ ಪೇತ್ರನಿಗೆ ದುಃಖವಾಯಿತು. ಪೇತ್ರನು, “ಪ್ರಭುವೇ, ನಿನಗೆ ಪ್ರತಿಯೊಂದೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು.