Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:25 - ಪರಿಶುದ್ದ ಬೈಬಲ್‌

25 ಖಂಡಿತವಾಗಿಯೂ ನೀನು ಆ ಪಟ್ಟಣವನ್ನು ನಾಶಮಾಡುವುದಿಲ್ಲ. ಕೆಟ್ಟವರನ್ನು ಕೊಲ್ಲುವುದಕ್ಕಾಗಿ ನೀನು ಐವತ್ತು ಮಂದಿ ನೀತಿವಂತರನ್ನು ಕೊಲ್ಲುವುದಿಲ್ಲ. ಒಂದುವೇಳೆ ನೀನು ಕೊಂದರೆ, ಒಳ್ಳೆಯವರೂ ಕೆಟ್ಟವರೂ ಸರಿಸಮಾನರಾಗುವರು. ಅವರಿಬ್ಬರೂ ದಂಡನೆಗೆ ಗುರಿಯಾಗುವರು. ನೀನು ಲೋಕದವರಿಗೆಲ್ಲ ನ್ಯಾಯಾಧಿಪತಿ. ನೀನು ನ್ಯಾಯವಾದದ್ದನ್ನೇ ಮಾಡುವೆ ಎಂದು ನನಗೆ ಗೊತ್ತಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ” ಎಂದು ಹೇಳಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?" ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ ಎಂದು ಹೇಳಲು ಯೆಹೋವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಈ ರೀತಿಯಾಗಿ ನೀತಿವಂತರಿಗೂ ದುಷ್ಟರಿಗೂ ಭೇದ ಮಾಡದೆ, ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವುದು ನಿಮ್ಮಿಂದ ಎಂದಿಗೂ ಆಗಬಾರದು. ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿರುವ ತಾವು ನ್ಯಾಯವಾದದ್ದನ್ನೇ ಮಾಡಬೇಕಲ್ಲವೇ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:25
35 ತಿಳಿವುಗಳ ಹೋಲಿಕೆ  

ದೇವರು ಅನ್ಯಾಯ ಮಾಡುವನೇ? ಸರ್ವಶಕ್ತನಾದ ದೇವರು ನೀತಿಯನ್ನು ಡೊಂಕು ಮಾಡುವನೇ?


ಆದರೆ ದೇವರು ಒಬ್ಬ ನಿರಪರಾಧಿಯನ್ನೂ ಕೈಬಿಡುವುದಿಲ್ಲ. ಆತನು ದುಷ್ಟರಿಗೆ ಸಹಾಯ ಮಾಡುವುದಿಲ್ಲ.


ಆಗ ಜನರೆಲ್ಲರು, “ನೀತಿವಂತರಿಗೆ ಪ್ರತಿಫಲ ಸಿಕ್ಕೇಸಿಕ್ಕುವುದು; ಲೋಕಕ್ಕೆ ತೀರ್ಪು ನೀಡುವ ದೇವರಿರುವುದು ಸತ್ಯವೇ ಸರಿ” ಎಂದು ಹೇಳುವರು.


“ಯೆಹೋವನ ಕಾರ್ಯವು ನಿಷ್ಕಳಂಕವಾದದ್ದು. ಯಾಕೆಂದರೆ ಆತನ ಮಾರ್ಗವೆಲ್ಲವೂ ಸರಿಯಾದದ್ದೇ. ದೇವರು ಸತ್ಯವಂತನೂ ನಂಬಿಗಸ್ತನೂ ಆಗಿದ್ದಾನೆ. ಆತನು ಒಳ್ಳೆಯವನೂ ಪ್ರಾಮಾಣಿಕನೂ ಆಗಿದ್ದಾನೆ.


ಇಡೀಲೋಕದ ನ್ಯಾಯಾಧಿಪತಿ ನೀನೇ. ಅಹಂಕಾರಿಗಳಿಗೆ ತಕ್ಕ ದಂಡನೆಯನ್ನು ಕೊಡು.


ನಾವೆಲ್ಲರೂ ನ್ಯಾಯ ವಿಚಾರಣೆಗಾಗಿ ಕ್ರಿಸ್ತನ ಮುಂದೆ ನಿಂತುಕೊಳ್ಳಲೇಬೇಕು. ಪ್ರತಿಯೊಬ್ಬನು ಇಹಲೋಕದ ದೇಹದಲ್ಲಿ ವಾಸವಾಗಿದ್ದಾಗ ಮಾಡಿದ ಒಳ್ಳೆಯದಕ್ಕಾಗಲಿ ಕೆಟ್ಟದಕ್ಕಾಗಲಿ ಪ್ರತಿಫಲವನ್ನು ಹೊಂದುವನು.


ನೀವು ನನ್ನ ಬಳಿಗೆ ಹಿಂತಿರುಗಿ ಬರುವಿರಿ. ಆಗ ನೀವು ಒಳ್ಳೆಯವರಿಗೂ ಕೆಟ್ಟವರಿಗೂ ಇರುವ ವ್ಯತ್ಯಾಸವನ್ನು ತಿಳಿದುಕೊಳ್ಳುವಿರಿ. ಆಗ ನೀವು ದೇವರನ್ನು ಹಿಂಬಾಲಿಸುವವರಿಗೂ ಹಿಂಬಾಲಿಸದೆ ಇರುವವರಿಗೂ ಇರುವ ವ್ಯತ್ಯಾಸವನ್ನು ನೋಡುವಿರಿ.


ಯೆಹೋವನ ಎದುರಿನಲ್ಲಿ ಹಾಡಿರಿ, ಯಾಕೆಂದರೆ ಆತನು ಭೂಲೋಕವನ್ನು ಆಳಲು ಬರುತ್ತಿದ್ದಾನೆ. ಆತನು ಪ್ರಪಂಚವನ್ನು ನ್ಯಾಯವಾಗಿ ಆಳುತ್ತಾನೆ. ಆತನು ಜನರನ್ನು ನೀತಿಯಿಂದ ಆಳುತ್ತಾನೆ.


ಯೆಹೋವನೇ, ನಾನು ನಿನ್ನ ಜೊತೆ ವಾದ ಮಾಡಿದರೆ, ನೀನು ಯಾವಾಗಲೂ ನ್ಯಾಯಪರನೆಂಬುದು ರುಜುವಾತಾಗುತ್ತದೆ. ಆದರೂ ನ್ಯಾಯಪೂರ್ಣವಲ್ಲದ ಕೆಲವು ವಿಷಯಗಳ ಬಗ್ಗೆ ನಾನು ನಿನ್ನನ್ನು ಕೇಳಬಯಸುತ್ತೇನೆ. ದುಷ್ಟರು ಏಕೆ ಅಭಿವೃದ್ಧಿ ಹೊಂದುತ್ತಾರೆ? ನಿನ್ನ ವಿಶ್ವಾಸಕ್ಕೆ ಪಾತ್ರರಾಗದವರು ನೆಮ್ಮದಿಯ ಜೀವನ ನಡೆಸಲು ಹೇಗೆ ಸಾಧ್ಯ?


ನನ್ನ ಅಲ್ಪಕಾಲದ ಜೀವನದಲ್ಲಿ ನಾನು ಪ್ರತಿಯೊಂದನ್ನೂ ನೋಡಿದ್ದೇನೆ. ನೀತಿವಂತರು ಯೌವನ ಪ್ರಾಯದಲ್ಲಿ ಸಾಯುವುದನ್ನೂ ನೋಡಿದ್ದೇನೆ. ದುಷ್ಟರು ಬಹುಕಾಲ ಬದುಕುವುದನ್ನೂ ನೋಡಿದ್ದೇನೆ.


ದೇವರ ಚೊಚ್ಚಲು ಮಕ್ಕಳ ಸಭೆಗೆ ನೀವು ಬಂದಿರುವಿರಿ. ಅವರ ಹೆಸರುಗಳನ್ನು ಪರಲೋಕದಲ್ಲಿ ಬರೆಯಲಾಗಿದೆ. ನೀವು ಜನರಿಗೆಲ್ಲ ತೀರ್ಪು ನೀಡುವ ದೇವರ ಬಳಿಗೂ ಪರಿಪೂರ್ಣರನ್ನಾಗಿ ಮಾಡಲ್ಪಟ್ಟ ಒಳ್ಳೆಯ ಜನರ ಆತ್ಮಗಳ ಬಳಿಗೂ ಬಂದಿರುವಿರಿ.


ಒಂದುವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ ಏನು ಮಾಡುವೆ? ನೀನು ಆ ಪಟ್ಟಣವನ್ನು ನಾಶಮಾಡುವಿಯೋ? ಖಂಡಿತವಾಗಿಯೂ ಇಲ್ಲ! ಅಲ್ಲಿ ಜೀವಿಸುತ್ತಿರುವ ಐವತ್ತು ಮಂದಿ ನೀತಿವಂತರಿಗಾಗಿ ನೀನು ಆ ಪಟ್ಟಣವನ್ನು ಉಳಿಸಿ ಕಾಪಾಡುವೆ.


“ನಿಮ್ಮ ನ್ಯಾಯಗಳನ್ನು ತೀರಿಸುವ, ಆ ನಾಯಕರುಗಳಿಗೆ ಹೇಳಿದ್ದೇನೆಂದರೆ: ‘ನಿಮ್ಮ ಅಧೀನದಲ್ಲಿರುವ ಜನರ ದೂರುಗಳನ್ನು ಚೆನ್ನಾಗಿ ಕೇಳಿಕೊಂಡು ಪಕ್ಷಪಾತವಿಲ್ಲದೆ ನ್ಯಾಯತೀರಿಸಬೇಕು. ಅವರಿಬ್ಬರೂ ಇಸ್ರೇಲರೇ ಆಗಿರಬಹುದು ಅಥವಾ ಒಬ್ಬನು ಇಸ್ರೇಲನೂ ಮತ್ತೊಬ್ಬನು ಪರದೇಶಿಯೂ ಆಗಿರಬಹುದು. ನೀವು ಪ್ರತಿಯೊಂದು ದೂರನ್ನು ನ್ಯಾಯವಾಗಿ ಬಗೆಹರಿಸಿ ತೀರ್ಪು ನೀಡಬೇಕು.


ನ್ಯಾಯತೀರಿಸುವಾಗ ಒಬ್ಬನು ಇನ್ನೊಬ್ಬನಿಗಿಂತ ವಿಶೇಷ ವ್ಯಕ್ತಿಯಾಗಿದ್ದಾನೆ ಎಂಬುದನ್ನು ಲೆಕ್ಕಿಸದೆ ಇಬ್ಬರೂ ಸಮಾನರೆಂದು ಪರಿಗಣಿಸಿ ಸರಿಯಾದ ತೀರ್ಪು ಕೊಡಬೇಕು. ನೀವು ಯಾರಿಗೂ ಭಯಪಡಬೇಡಿರಿ. ಯಾಕೆಂದರೆ ನಿಮ್ಮ ತೀರ್ಪು ದೇವರಿಂದ ಬಂದ ತೀರ್ಪಾಗಿರುತ್ತದೆ. ನಿಮಗೆ ಬಗೆಹರಿಸಲು ಕಷ್ಟವಾಗುವ ದೂರುಗಳಿದ್ದಲ್ಲಿ ಅವುಗಳನ್ನು ನನ್ನ ಬಳಿಗೆ ತನ್ನಿರಿ. ಅವುಗಳಿಗೆ ನಾನು ನ್ಯಾಯತೀರ್ಪು ನೀಡುವೆನು.’


ಇಸ್ರೇಲರು ನಿಮ್ಮ ವಿರುದ್ಧ ಯಾವ ಪಾಪವನ್ನೂ ಮಾಡಿಲ್ಲ. ಆದರೆ ನೀನು ಇಸ್ರೇಲರ ವಿರುದ್ಧ ಬಹಳ ಕೆಟ್ಟದ್ದನ್ನು ಮಾಡುತ್ತಿರುವೆ. ನ್ಯಾಯವು ಇಸ್ರೇಲರ ಪರವಾಗಿದೆಯೋ ಅಥವಾ ಅಮ್ಮೋನಿಯರ ಪರವಾಗಿದೆಯೋ ಎಂಬುದನ್ನು ನಿಜವಾದ ನ್ಯಾಯಾಧೀಶನಾದ ಯೆಹೋವನೇ ತೀರ್ಮಾನಿಸಬೇಕು.”


ನಿಮ್ಮಲ್ಲಿ ಪ್ರತಿಯೊಬ್ಬರೂ ಯೆಹೋವನಿಗೆ ಭಯಪಡುವವರಾಗಿರಬೇಕು. ಆತನು ನ್ಯಾಯವಂತನಾಗಿದ್ದಾನೆ. ಆತನಿಗೆ ಎಲ್ಲಾ ಜನರು ಸಮಾನರೇ. ಆತನು ಲಂಚ ಸ್ವೀಕರಿಸಿ ನ್ಯಾಯವನ್ನು ಬದಲಾಯಿಸುವದಿಲ್ಲ” ಎಂದು ಹೇಳಿದನು.


ಆದರೆ ದೇವರೇ, ನಮಗೆ ಸಂಭವಿಸುವ ಪ್ರತಿಯೊಂದರಲ್ಲೂ ನಿನ್ನದೇನೂ ತಪ್ಪಿಲ್ಲ. ನೀನು ನ್ಯಾಯವಂತನೇ ಸರಿ. ನಾವೇ ತಪ್ಪಿತಸ್ಥರು.


“ಆದ್ದರಿಂದ ಬುದ್ಧಿವಂತರೇ, ನನ್ನ ಮಾತುಗಳಿಗೆ ಕಿವಿಗೊಡಿ. ದೇವರು ಕೆಟ್ಟದ್ದನ್ನು ಎಂದಿಗೂ ಮಾಡುವುದಿಲ್ಲ. ಸರ್ವಶಕ್ತನಾದ ದೇವರು ಎಂದಿಗೂ ತಪ್ಪು ಮಾಡುವುದಿಲ್ಲ.


ಆಗ ನಾನು ಮನಸ್ಸಿನಲ್ಲಿ, “ದೇವರು ಪ್ರತಿಯೊಂದಕ್ಕೂ ಸಮಯವನ್ನು ಗೊತ್ತುಪಡಿಸಿದ್ದಾನೆ. ಜನರು ಮಾಡುವ ಪ್ರತಿಯೊಂದಕ್ಕೂ ನ್ಯಾಯತೀರಿಸಲು ಆತನು ಸಮಯವನ್ನು ಗೊತ್ತುಪಡಿಸಿದ್ದಾನೆ. ದೇವರು ನೀತಿವಂತರಿಗೂ ದುಷ್ಟರಿಗೂ ನ್ಯಾಯತೀರಿಸುವನು” ಎಂದುಕೊಂಡೆನು.


ಆದರೆ ಯೆಹೋವನೇ, ನೀನು ನ್ಯಾಯಪರನಾದ ತೀರ್ಪುಗಾರ. ಜನರ ಹೃದಯವನ್ನು ಮತ್ತು ಬುದ್ಧಿಯನ್ನು ಹೇಗೆ ಪರೀಕ್ಷಿಸಬೇಕೆಂದು ನಿನಗೆ ಗೊತ್ತು. ನಾನು ನನ್ನ ವಾದವನ್ನು ನಿನ್ನ ಮುಂದೆ ಮಂಡಿಸುತ್ತೇನೆ ಮತ್ತು ನೀನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡು ಎಂದು ಅರಿಕೆ ಮಾಡಿಕೊಳ್ಳುತ್ತೇನೆ.


ದೇವರು ಹೇಳಿದ್ದೇನೆಂದರೆ: “ಒಂದುವೇಳೆ ನೀವು ಹೇಳಬಹುದು: ‘ನನ್ನ ಒಡೆಯನಾದ ದೇವರ ಕ್ರಮವು ದೃಢವಾಗಿಲ್ಲ.’ ಆದರೆ, ಇಸ್ರೇಲಿನ ಜನರೇ, ಕೇಳಿರಿ. ನಿಮ್ಮ ನಡತೆಯೇ ದೃಢವಾಗಿಲ್ಲ.


ಆದರೆ ಮೋಶೆ ಆರೋನರು ನೆಲದವರೆಗೆ ಬಾಗಿ, “ದೇವರೇ, ಎಲ್ಲಾ ಜನರ ಆಲೋಚನೆ ನಿನಗೆ ಗೊತ್ತಿದೆ. ದಯಮಾಡಿ ಎಲ್ಲಾ ಜನರ ಮೇಲೆ ಕೋಪಗೊಳ್ಳಬೇಡ. ನಿಜವಾಗಿ ಪಾಪಮಾಡಿದವನು ಕೇವಲ ಒಬ್ಬನಲ್ಲವೇ?” ಎಂದು ಮೊರೆಯಿಟ್ಟರು.


ಯೆಹೋವನ ಸನ್ನಿಧಿಯಲ್ಲಿ ಅಡವಿಯ ಮರಗಳು ಸಂತೋಷದಿಂದ ಗಾನಮಾಡಲಿ. ಯಾಕೆಂದರೆ ಆತನು ಬರುತ್ತಿದ್ದಾನೆ. ಲೋಕಕ್ಕೆ ನ್ಯಾಯತೀರಿಸಲು ಬರುತ್ತಿದ್ದಾನೆ.


ಹೌದು, ನಿಜ, ದೇವರು ಕೆಟ್ಟದ್ದನ್ನು ಮಾಡುವುದಿಲ್ಲ; ಸರ್ವಶಕ್ತನಾದ ದೇವರು ನೀತಿಯನ್ನು ಡೊಂಕು ಮಾಡುವುದಿಲ್ಲ.


ಆತನು ತಾನು ಮಾಡಿದ ತೀರ್ಮಾನವನ್ನು ಬದಲಾಯಿಸುವುದಿಲ್ಲ.


ದೇವರೊಬ್ಬನೇ ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುವುದು.


ಭೂಮಿಯು ಅದರ ಮೇಲಿರುವ ಸಮಸ್ತದೊಡನೆ ನಡುಗುತ್ತಿದ್ದರೂ ಭೂಸ್ತಂಭಗಳನ್ನು ಸ್ಥಿರಗೊಳಿಸುವಾತನು ನಾನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು