ಆದಿಕಾಂಡ 18:28 - ಪರಿಶುದ್ದ ಬೈಬಲ್28 ಒಂದುವೇಳೆ ಐದು ಮಂದಿ ಕಡಿಮೆಯಾಗಿದ್ದು ನಲವತ್ತೈದು ಮಂದಿ ಮಾತ್ರ ನೀತಿವಂತರಿದ್ದರೆ ಆ ಪಟ್ಟಣವನ್ನು ನಾಶಮಾಡುವಿಯಾ?” ಎಂದು ಕೇಳಿದನು. ಅದಕ್ಕೆ ಯೆಹೋವನು ಅವನಿಗೆ, “ನಾನು ನಲವತ್ತೈದು ಮಂದಿ ನೀತಿವಂತರನ್ನು ಕಂಡರೂ ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಒಂದು ವೇಳೆ ಐವತ್ತು ಮಂದಿ ನೀತಿವಂತರಲ್ಲಿ ಐದು ಮಂದಿ ಕಡಿಮೆ ಇದ್ದರೆ ಪಟ್ಟಣವನ್ನೆಲ್ಲಾ ನಾಶ ಮಾಡುವಿಯಾ?” ಎಂದು ಕೇಳಲು ಯೆಹೋವನು, “ಅಲ್ಲಿ ನಲ್ವತ್ತೈದು ಮಂದಿ ನೀತಿವಂತರು ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಒಂದು ವೇಳೆ ಐವತ್ತು ಮಂದಿ ಸಜ್ಜನರಿಗೆ ಐದು ಮಂದಿ ಕಡಿಮೆಯಾಗಿದ್ದಾರು. ಐದು ಮಂದಿ ಕಡಿಮೆಯಾದುದಕ್ಕೆ ಪಟ್ಟಣವನ್ನೆಲ್ಲ ನಾಶಮಾಡುವಿರೋ?” ಎಂದು ಕೇಳಲು ಸರ್ವೇಶ್ವರ, “ಅಲ್ಲಿ ನಲವತ್ತೈದು ಮಂದಿ ಸಿಕ್ಕಿದರೆ ಅದನ್ನು ನಾಶಮಾಡುವುದಿಲ್ಲ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಒಂದು ವೇಳೆ ಐವತ್ತು ಮಂದಿ ನೀತಿವಂತರಿಗೆ ಐದು ಮಂದಿ ಕಡಿಮೆಯಾಗಿದ್ದಾರು; ಐದು ಮಂದಿ ಕಡಿಮೆಯಾದದ್ದಕ್ಕೆ ಪಟ್ಟಣವನ್ನೆಲ್ಲಾ ನಾಶಮಾಡುವಿಯಾ ಎಂದು ಹೇಳಲು ಯೆಹೋವನು - ಅಲ್ಲಿ ನಾಲ್ವತ್ತೈದು ಮಂದಿ ಸಿಕ್ಕಿದರೆ ಅದನ್ನು ನಾಶಮಾಡುವದಿಲ್ಲ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಒಂದು ವೇಳೆ ಐವತ್ತು ನೀತಿವಂತರಲ್ಲಿ ಐದು ಮಂದಿ ಕಡಿಮೆ ಇದ್ದರೆ, ಆ ಐದು ಮಂದಿ ಇಲ್ಲದ್ದರಿಂದ ಪಟ್ಟಣವನ್ನು ನಾಶಮಾಡುವಿರೋ?” ಎಂದು ಕೇಳಿದನು. ಅದಕ್ಕೆ ದೇವರು, “ನಲವತ್ತೈದು ಮಂದಿ ಅಲ್ಲಿ ಸಿಕ್ಕಿದರೆ ನಾನು ನಾಶಮಾಡುವುದಿಲ್ಲ,” ಎಂದರು. ಅಧ್ಯಾಯವನ್ನು ನೋಡಿ |