ಆದಿಕಾಂಡ 18:29 - ಪರಿಶುದ್ದ ಬೈಬಲ್29 ಮತ್ತೆ ಅಬ್ರಹಾಮನು ದೇವರಿಗೆ, “ಕೇವಲ ನಲವತ್ತು ಮಂದಿ ನೀತಿವಂತರನ್ನು ಕಂಡರೆ, ನೀನು ಆ ಪಟ್ಟಣವನ್ನು ನಾಶಮಾಡುವೆಯಾ?” ಎಂದು ಕೇಳಿದನು. ಯೆಹೋವನು ಅವನಿಗೆ, “ನಲವತ್ತು ಮಂದಿ ನೀತಿವಂತರನ್ನು ಕಂಡರೂ ನಾನು ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ, “ಒಂದು ವೇಳೆ ಅಲ್ಲಿ ನಲ್ವತ್ತು ಮಂದಿ ಸಿಕ್ಕಾರು” ಎನ್ನಲು ಆತನು, “ನಲ್ವತ್ತು ಮಂದಿ ಸಿಕ್ಕಿದರೆ ಆ ಪಟ್ಟಣವನ್ನು ನಾಶ ಮಾಡುವುದಿಲ್ಲ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಅಬ್ರಹಾಮನು ಇನ್ನೂ ಮುಂದುವರೆದು, “ಒಂದು ವೇಳೆ ಅಲ್ಲಿ ನಲವತ್ತು ಮಂದಿ ಸಿಕ್ಕಾರು"ಎನ್ನಲು "ನಲವತ್ತು ಮಂದಿ ಸಿಕ್ಕಿದರೆ ಆ ಪಟ್ಟಣವನ್ನು ನಾಶಮಾಡುವುದಿಲ್ಲ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಅಬ್ರಹಾಮನು ಆತನ ಸಂಗಡ ಇನ್ನೂ ಮಾತಾಡಿ - ಒಂದು ವೇಳೆ ಅಲ್ಲಿ ನಾಲ್ವತ್ತು ಮಂದಿ ಸಿಕ್ಕಾರು ಎನ್ನಲು ಆತನು - ನಾಲ್ವತ್ತು ಮಂದಿ ಸಿಕ್ಕಿದರೆ ಆ ಪಟ್ಟಣವನ್ನು ನಾಶಮಾಡುವದಿಲ್ಲ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಅಬ್ರಹಾಮನು ದೇವರ ಸಂಗಡ ಇನ್ನೂ ಮಾತನಾಡಿ, “ಅಲ್ಲಿ ನಲವತ್ತು ಮಂದಿ ದೊರೆತರೆ, ಏನು ಮಾಡುವಿರಿ?” ಎನ್ನಲು, ಅದಕ್ಕೆ ದೇವರು, “ನಲವತ್ತು ಮಂದಿಗೋಸ್ಕರ ಅದನ್ನು ನಾನು ನಾಶಮಾಡುವುದಿಲ್ಲ,” ಎಂದರು. ಅಧ್ಯಾಯವನ್ನು ನೋಡಿ |