Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:32 - ಪರಿಶುದ್ದ ಬೈಬಲ್‌

32 ಆಮೇಲೆ ಅಬ್ರಹಾಮನು, “ಯೆಹೋವನೇ, ದಯಮಾಡಿ ನನ್ನ ಮೇಲೆ ಸಿಟ್ಟುಗೊಳ್ಳಬೇಡ. ಇದೊಂದು ಸಲ ಮಾತ್ರ ಪ್ರಶ್ನೆ ಕೇಳುವೆ. ಹತ್ತು ಮಂದಿ ನೀತಿವಂತರನ್ನು ಕಂಡರೆ ಏನು ಮಾಡುವೆ?” ಎಂದು ಕೇಳಿದನು. ಯೆಹೋವನು ಅವನಿಗೆ, “ನಾನು ಆ ಪಟ್ಟಣದಲ್ಲಿ ಹತ್ತು ಮಂದಿ ನೀತಿವಂತರನ್ನು ಕಂಡರೂ, ಅದನ್ನು ನಾಶಮಾಡುವುದಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅಬ್ರಹಾಮನು, “ಕರ್ತನೇ, ಸಿಟ್ಟಾಗಬಾರದು; ಇನ್ನು ಒಂದೇ ಸಾರಿ ಮಾತನಾಡುತ್ತೇನೆ; ಒಂದು ವೇಳೆ ಹತ್ತು ಮಂದಿ ಸಿಕ್ಕಾರು” ಎನ್ನಲು ಆತನು, “ಹತ್ತು ಮಂದಿಯ ನಿಮಿತ್ತವೂ ಅದನ್ನು ಉಳಿಸುವೆನು, ನಾಶ ಮಾಡುವುದಿಲ್ಲ.” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅಬ್ರಹಾಮನು, “ಸ್ವಾಮೀ, ಸಿಟ್ಟುಗೊಳ್ಳಬೇಡಿ; ಇನ್ನು ಒಂದೇ ಒಂದು ಸಾರಿ ಮಾತಾಡುತ್ತೇನೆ; ಒಂದು ವೇಳೆ ಹತ್ತೇ ಮಂದಿ ಸಿಕ್ಕಾರು” ಎನ್ನಲು, ಸರ್ವೇಶ್ವರ, “ಹತ್ತು ಮಂದಿಯ ನಿಮಿತ್ತವೂ ಅದನ್ನು ಉಳಿಸುತ್ತೇನೆ, ನಾಶಮಾಡುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅಬ್ರಹಾಮನು - ಸ್ವಾಮೀ, ನಿನಗೆ ಸಿಟ್ಟಾಗಬಾರದು; ಇನ್ನು ಒಂದೇ ಸಾರಿ ಮಾತಾಡುತ್ತೇನೆ; ಒಂದು ವೇಳೆ ಹತ್ತು ಮಂದಿ ಸಿಕ್ಕಾರು ಎನ್ನಲು ಆತನು - ಹತ್ತು ಮಂದಿಯ ನಿವಿುತ್ತವೂ ಅದನ್ನು ಉಳಿಸುವೆನು, ನಾಶಮಾಡುವದಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆಗ ಅವನು, “ಯೆಹೋವ ದೇವರೇ, ನಿಮಗೆ ಕೋಪಬಾರದೆ ಇರಲಿ. ಇನ್ನು ಒಂದೇ ಸಾರಿ ಮಾತನಾಡುತ್ತೇನೆ. ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಿದರೆ,” ಎಂದಾಗ, ದೇವರು, “ಹತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:32
21 ತಿಳಿವುಗಳ ಹೋಲಿಕೆ  

ಆಗ ಗಿದ್ಯೋನನು ದೇವರಿಗೆ, “ನನ್ನ ಮೇಲೆ ಕೋಪಿಸಿಕೊಳ್ಳಬೇಡ. ನಾನು ಇನ್ನೊಂದು ಸಾಕ್ಷ್ಯವನ್ನು ಕೇಳುತ್ತೇನೆ. ಇನ್ನೊಂದು ಸಲ ಕುರಿಯ ತುಪ್ಪಟದಿಂದ ನಿನ್ನನ್ನು ಪರೀಕ್ಷಿಸುತ್ತೇನೆ. ಈ ಸಲ, ಸುತ್ತಮುತ್ತಲಿನ ಭೂಮಿಯ ಮಂಜಿನಿಂದ ಹಸಿಯಾಗಿ, ಕುರಿಯ ತುಪ್ಪಟ ಮಾತ್ರ ಒಣಗಿರಲಿ” ಎಂದು ಪ್ರಾರ್ಥಿಸಿದನು.


“ಬೇಡಿಕೊಳ್ಳಿರಿ, ಆಗ ದೇವರು ನಿಮಗೆ ಕೊಡುತ್ತಾನೆ. ಹುಡುಕಿರಿ, ಆಗ ನೀವು ಕಂಡುಕೊಳ್ಳುವಿರಿ. ಬಾಗಿಲು ತಟ್ಟಿರಿ, ಆಗ ಅದು ನಿಮಗೆ ತೆರೆಯುವುದು.


ನಮ್ಮಲ್ಲಿ ಕಾರ್ಯಮಾಡುತ್ತಿರುವ ತನ್ನ ಶಕ್ತಿಯಿಂದ ನಾವು ಕೇಳುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಎಷ್ಟೋ ಹೆಚ್ಚೆಚ್ಚಾಗಿ ದೇವರು ಮಾಡಬಲ್ಲನು.


ನಿನ್ನ ಹಾಗೆ ಬೇರೆ ಯಾವ ದೇವರೂ ಇಲ್ಲ. ಪಾಪದಲ್ಲಿ ಬಿದ್ದವರನ್ನು ನೀನು ಕ್ಷಮಿಸುವೆ. ನಿನ್ನ ಜನಶೇಷವನ್ನು ಮನ್ನಿಸುವೆ. ನೀನು ನಿತ್ಯಕ್ಕೂ ಕೋಪಿಸುವದಿಲ್ಲ. ಯಾಕೆಂದರೆ ದಯೆತೋರಿಸುವದರಲ್ಲಿ ನೀನು ಸಂತೋಷಿಸುವೆ.


ಯೆಹೋವನು ಹೇಳುವುದೇನೆಂದರೆ: “ದ್ರಾಕ್ಷಿಹಣ್ಣಿನಲ್ಲಿ ಹೊಸ ರಸವು ಇರುವಾಗ ಜನರು ಅದನ್ನು ಹಿಂಡಿ ರಸವನ್ನು ತೆಗೆಯುವರು. ಯಾಕೆಂದರೆ ಆ ಹಣ್ಣನ್ನು ಮತ್ತೆ ಉಪಯೋಗಿಸಬೇಕೆಂಬ ಉದ್ದೇಶದಿಂದ ಅದನ್ನು ಸಂಪೂರ್ಣವಾಗಿ ಹಾಳು ಮಾಡುವದಿಲ್ಲ. ಅದೇ ರೀತಿ ನಾನು ನನ್ನ ಸೇವಕರಿಗೂ ಮಾಡುವೆನು. ಅವರನ್ನು ನಾನು ಸಂಪೂರ್ಣವಾಗಿ ನಾಶಮಾಡುವದಿಲ್ಲ.


ಕೆಡುಕರ ಕಾಣಿಕೆಯನ್ನು ಯೆಹೋವನು ದ್ವೇಷಿಸುವನು; ಒಳ್ಳೆಯವರ ಪ್ರಾರ್ಥನೆಯನ್ನು ಸಂತೋಷದಿಂದ ಕೇಳುವನು.


ಯೆಹೋವನೇ, ನೀನು ಒಳ್ಳೆಯವನೂ ಕರುಣಾಮಯನೂ ಆಗಿರುವೆ. ನಿನ್ನ ಜನರು ಸಹಾಯಕ್ಕಾಗಿ ನಿನಗೆ ಮೊರೆಯಿಡುವರು. ನೀನು ಅವರನ್ನು ನಿಜವಾಗಿಯೂ ಪ್ರೀತಿಸುವಿ.


ಒಂದುವೇಳೆ ದೇವರ ದೂತರಲ್ಲೊಬ್ಬನು ಮಧ್ಯಸ್ಥಗಾರನಾಗಿ ಬಂದು ಅವನ ನೀತಿಕಾರ್ಯಗಳನ್ನು ದೃಢಪಡಿಸಿ ಅವನ ಮೇಲೆ ಪ್ರೀತಿಯುಳ್ಳವನಾಗಿ,


ಆದ್ದರಿಂದ ಯೆಹೋವನು ಜನರಿಗಾಗಿ ಮರುಕಪಟ್ಟು ತನ್ನ ಮನಸ್ಸನ್ನು ಮಾರ್ಪಡಿಸಿಕೊಂಡನು; ತಾನು ಹೇಳಿದ್ದ ಕೇಡನ್ನು ಮಾಡಲಿಲ್ಲ; ತನ್ನ ಜನರನ್ನು ನಾಶಮಾಡಲಿಲ್ಲ.


ಆಮೇಲೆ ಅಬ್ರಹಾಮನು, “ಯೆಹೋವನೇ, ನನ್ನ ಮೇಲೆ ಸಿಟ್ಟುಗೊಳ್ಳಬೇಡ. ಈ ಪ್ರಶ್ನೆಯನ್ನೂ ಕೇಳುವೆ: ಆ ಪಟ್ಟಣದಲ್ಲಿ ಕೇವಲ ಮೂವತ್ತು ಮಂದಿ ನೀತಿವಂತರಿದ್ದರೆ ನೀನು ಆ ಪಟ್ಟಣವನ್ನು ನಾಶಮಾಡುವೆಯಾ?” ಎಂದು ಕೇಳಿದನು. ಯೆಹೋವನು ಅವನಿಗೆ, “ಅಲ್ಲಿ ಮೂವತ್ತು ಮಂದಿ ನೀತಿವಂತರಿದ್ದರೂ ನಾನು ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಅಂದನು.


ಆಮೇಲೆ ಅಬ್ರಹಾಮನು, “ನನ್ನ ಯೆಹೋವನು ಏನೂ ತಿಳಿದುಕೊಳ್ಳದಿರಲಿ. ನಾನು ಮತ್ತೊಂದು ಪ್ರಶ್ನೆ ಕೇಳುವೆ. ಅಲ್ಲಿ ಇಪ್ಪತ್ತು ಮಂದಿ ನೀತಿವಂತರಿದ್ದರೆ ಏನು ಮಾಡುವೆ?” ಎಂದು ಕೇಳಿದನು. ಯೆಹೋವನು ಅವನಿಗೆ, “ಅಲ್ಲಿ ಇಪ್ಪತ್ತು ಮಂದಿ ನೀತಿವಂತರನ್ನು ಕಂಡರೆ ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಎಂದು ಹೇಳಿದನು.


ಆಗ ಯೆಹೂದನು ಯೋಸೇಫನ ಬಳಿಗೆ ಹೋಗಿ, “ಸ್ವಾಮಿ, ತಮ್ಮೊಂದಿಗೆ ಬಿಚ್ಚುಮನಸ್ಸಿನಿಂದ ಮಾತನಾಡಲು ದಯವಿಟ್ಟು ಅನುಮತಿಯಾಗಲಿ; ದಯವಿಟ್ಟು ನನ್ನ ಮೇಲೆ ಕೋಪಗೊಳ್ಳಬೇಡಿ. ನೀವು ಸ್ವತಃ ಫರೋಹನಂತೆ ಇರುವಿರೆಂದು ನನಗೆ ತಿಳಿದಿದೆ.


ಯೆಹೋವನು ಹೀಗೆನ್ನುತ್ತಾನೆ: “ಜೆರುಸಲೇಮಿನ ಬೀದಿಗಳಲ್ಲಿ ಅತ್ತಿತ್ತ ತಿರುಗಾಡಿ ನೋಡಿರಿ; ಈ ವಿಷಯಗಳ ಬಗ್ಗೆ ವಿಚಾರ ಮಾಡಿರಿ. ನಗರದ ಸಾರ್ವಜನಿಕ ಸ್ಥಳಗಳಲ್ಲಿ ಹುಡುಕಿ ನೋಡಿರಿ. ಸತ್ಯಶೋಧಕನೂ ಪ್ರಾಮಾಣಿಕನೂ ಒಳ್ಳೆಯವನೂ ಆಗಿರುವ ಮನುಷ್ಯನು ಎಲ್ಲಿ ಸಿಕ್ಕುವನೋ ನೋಡಿ. ಕೇವಲ ಒಬ್ಬ ಒಳ್ಳೆಯವನಿದ್ದರೂ ನಾನು ಇಡೀ ಜೆರುಸಲೇಮನ್ನು ಕ್ಷಮಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು