Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:33 - ಪರಿಶುದ್ದ ಬೈಬಲ್‌

33 ಯೆಹೋವನು ಅಬ್ರಹಾಮನೊಂದಿಗೆ ಮಾತಾಡುವುದನ್ನು ಮುಗಿಸಿದ ಮೇಲೆ ಅಲ್ಲಿಂದ ಹೊರಟುಹೋದನು. ಅಬ್ರಹಾಮನು ಸಹ ತನ್ನ ಮನೆಗೆ ಹಿಂತಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಯೆಹೋವನು ಅಬ್ರಹಾಮನ ಸಂಗಡ ಮಾತನಾಡುವುದನ್ನು ನಿಲ್ಲಿಸಿ ಅಲ್ಲಿಂದ ಹೊರಟು ಹೋದನು; ಅಬ್ರಹಾಮನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅನಂತರ ಅಬ್ರಹಾಮನೊಡನೆ ಮಾತಾಡುವುದನ್ನು ಮುಗಿಸಿ ಸರ್ವೇಶ್ವರ ಸ್ವಾಮಿ ಹೊರಟುಹೋದರು. ಅಬ್ರಹಾಮನು ತನ್ನ ಮನೆಗೆ ಹಿಂತಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಯೆಹೋವನು ಅಬ್ರಹಾಮನ ಸಂಗಡ ಮಾತಾಡುವದನ್ನು ಮುಗಿಸಿ ಹೊರಟುಹೋದನು; ಅಬ್ರಹಾಮನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಯೆಹೋವ ದೇವರು ಅಬ್ರಹಾಮನ ಸಂಗಡ ಮಾತನಾಡುವುದನ್ನು ಮುಗಿಸಿದ ಕೂಡಲೆ ಹೊರಟು ಹೋದರು. ಅಬ್ರಹಾಮನು ತನ್ನ ಮನೆಗೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:33
9 ತಿಳಿವುಗಳ ಹೋಲಿಕೆ  

ಆದ್ದರಿಂದ ಆ ಪುರುಷರು ಸೊದೋಮಿನ ಕಡೆಗೆ ನಡೆಯತೊಡಗಿದರು. ಆದರೆ ಅಬ್ರಹಾಮನು ಯೆಹೋವನ ಎದುರಿನಲ್ಲಿ ನಿಂತುಕೊಂಡಿದ್ದನು.


ಆ ಪುರುಷನು ಯಾಕೋಬನಿಗೆ, “ನನ್ನನ್ನು ಬಿಡು, ಸೂರ್ಯೋದಯವಾಗುತ್ತಿದೆ” ಎಂದು ಹೇಳಿದನು. ಆದರೆ ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನು ಬಿಡುವುದಿಲ್ಲ” ಎಂದು ಹೇಳಿದನು.


ಮರುದಿನ ಮುಂಜಾನೆ ಲಾಬಾನನು ತನ್ನ ಮೊಮ್ಮಕ್ಕಳಿಗೂ ಹೆಣ್ಣುಮಕ್ಕಳಿಗೂ ಮುದ್ದಿಟ್ಟು ಆಶೀರ್ವದಿಸಿ ತನ್ನ ಮನೆಗೆ ಹಿಂತಿರುಗಿದನು.


ಆಮೇಲೆ ಆ ಪುರುಷರು ಹೋಗಲು ಎದ್ದುನಿಂತರು. ಅವರು ಸೊದೋಮಿನ ಕಡೆಗೆ ಕಣ್ಣೆತ್ತಿ ನೋಡಿ ಆ ಕಡೆಗೆ ನಡೆಯಲಾರಂಭಿಸಿದರು. ಅವರನ್ನು ಕಳುಹಿಸಿಕೊಡಲು ಅಬ್ರಹಾಮನು ಅವರ ಸಂಗಡ ಸ್ವಲ್ಪದೂರ ಹೋದನು.


ಅಂದು ಸಂಜೆ ತಂಗಾಳಿ ಬೀಸುತ್ತಿರಲು ದೇವರಾದ ಯೆಹೋವನು ತೋಟದಲ್ಲಿ ತಿರುಗಾಡುತ್ತಿದ್ದನು. ಆತನ ಸಪ್ಪಳವನ್ನು ಕೇಳಿದ ಪುರುಷನು ಮತ್ತು ಅವನ ಹೆಂಡತಿಯು ತೋಟದ ಮರಗಳ ಮರೆಯಲ್ಲಿ ಅಡಗಿಕೊಂಡರು.


ದೇವರು ಅಬ್ರಹಾಮನೊಡನೆ ಮಾತಾಡುವುದನ್ನು ಮುಗಿಸಿದ ಮೇಲೆ ಮೇಲೋಕಕ್ಕೆ ಹೊರಟುಹೋದನು.


ಆಮೇಲೆ ದೇವರು ಆ ಸ್ಥಳದಿಂದ ಹೊರಟುಹೋದನು.


ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡು ಹೊರಟುಹೋದನು.


ಯಾಕೋಬನು ಅಲ್ಲಿಂದ ಹೊರಟು ಪ್ರಯಾಣ ಮಾಡುತ್ತಿರುವಾಗ ದೇವದೂತರನ್ನು ನೋಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು