ಆದಿಕಾಂಡ 18:5 - ಪರಿಶುದ್ದ ಬೈಬಲ್5 ನಾನು ನಿಮಗೆ ಊಟವನ್ನು ತಂದುಕೊಡುವೆನು. ನೀವು ಬೇಕಾದಷ್ಟು ಊಟ ಮಾಡಿದ ನಂತರ ನಿಮ್ಮ ಪ್ರಯಾಣವನ್ನು ಮುಂದುವರಿಸಬಹುದು” ಎಂದು ಹೇಳಿದನು. ಆ ಮೂವರು ಪುರುಷರು, “ಸರಿ, ನೀನು ಹೇಳಿದಂತೆಯೇ ಮಾಡು” ಅಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಸ್ವಲ್ಪ ಆಹಾರ ತರುತ್ತೇನೆ, ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಮಾಡಬಹುದು” ಎನ್ನಲು ಅವರು, “ನೀನು ಹೇಳಿದಂತೆ ಮಾಡಬಹುದು” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸ್ವಲ್ಪ ಆಹಾರ ತರುತ್ತೇನೆ, ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಮಾಡಬಹುದು. ದಾಸನಿರುವ ಸ್ಥಳದ ಹತ್ತಿರ ಹಾದುಹೋಗುತ್ತಿದ್ದೀರಲ್ಲವೇ?” ಎನ್ನಲು ಅವರು “ನೀನು ಹೇಳಿದಂತೆಯೇ ಆಗಲಿ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಸ್ವಲ್ಪ ಆಹಾರ ತರುತ್ತೇನೆ, ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಬೆಳಿಸಬಹುದು ಎನ್ನಲು ಅವರು - ನೀನು ಹೇಳಿದಂತೆ ಮಾಡಬಹುದು ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಾನು ಸ್ವಲ್ಪ ಆಹಾರವನ್ನು ತರುತ್ತೇನೆ. ತರುವಾಯ ನೀವು ಮುಂದೆ ಹೊರಟು ಹೋಗಬಹುದು. ನೀವು ನಿಮ್ಮ ದಾಸನ ಬಳಿಗೆ ಬಂದಿದ್ದೀರಿ,” ಎಂದು ಬೇಡಿಕೊಂಡನು. ಅದಕ್ಕೆ ಅವರು, “ನೀನು ಹೇಳಿದಂತೆಯೇ ಮಾಡು,” ಎಂದರು. ಅಧ್ಯಾಯವನ್ನು ನೋಡಿ |
ಗಿದ್ಯೋನನು ಒಳಗೆ ಹೋಗಿ ಒಂದು ಆಡಿನ ಮರಿಯನ್ನು ಬೇಯಿಸಿದನು. ಅವನು ಸುಮಾರು ಇಪ್ಪತ್ತು ಸೇರಿನಷ್ಟು ಹಿಟ್ಟನ್ನು ತೆಗೆದುಕೊಂಡು ಹುಳಿಯಿಲ್ಲದ ರೊಟ್ಟಿಯನ್ನು ಮಾಡಿದನು. ತರುವಾಯ ಗಿದ್ಯೋನನು ಆ ಮಾಂಸವನ್ನು ಒಂದು ಬುಟ್ಟಿಯಲ್ಲಿಟ್ಟನು, ಮಾಂಸ ಬೇಯಿಸಿದ ನೀರನ್ನು ಒಂದು ಪಾತ್ರೆಯಲ್ಲಿ ಹಾಕಿದನು. ಗಿದ್ಯೋನನು ಆ ಮಾಂಸವನ್ನೂ ಮಾಂಸ ಬೇಯಿಸಿದ ನೀರನ್ನೂ ಹುಳಿಯಿಲ್ಲದ ರೊಟ್ಟಿಯನ್ನೂ ತೆಗೆದುಕೊಂಡು ಬಂದನು. ಗಿದ್ಯೋನನು ಏಲಾ ಮರದ ಕೆಳಗೆ ಯೆಹೋವನಿಗೆ ಆಹಾರವನ್ನು ಕೊಟ್ಟನು.