ಆದಿಕಾಂಡ 18:6 - ಪರಿಶುದ್ದ ಬೈಬಲ್6 ಅಬ್ರಹಾಮನು ಗುಡಾರಕ್ಕೆ ಬೇಗನೆ ಹೋಗಿ ಸಾರಳಿಗೆ, “ಮೂರು ದೊಡ್ಡ ರೊಟ್ಟಿಗಳಿಗೆ ಬೇಕಾಗುವಷ್ಟು ಗೋಧಿ ಹಿಟ್ಟನ್ನು ಬೇಗನೆ ನಾದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿಹೋಗಿ ಆಕೆಗೆ, “ಹಸನಾದ ಮೂರು ಸೇರು ಹಿಟ್ಟನ್ನು ನಾದಿ ಬೇಗ ರೊಟ್ಟಿಗಳನ್ನು ಮಾಡು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿ ಆಕೆಗೆ, “ಹಸನಾದ ಮೂರು ಸೇರು ಹಿಟ್ಟನ್ನು ನಾದಿ, ಬೇಗ ರೊಟ್ಟಿಗಳನ್ನು ಮಾಡು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿಹೋಗಿ ಆಕೆಗೆ - ಹಸನಾದ ಮೂರು ಸೇರು ಹಿಟ್ಟನ್ನು ನಾದಿ ಬೇಗ ರೊಟ್ಟಿಗಳನ್ನು ಮಾಡು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಅಬ್ರಹಾಮನು ತ್ವರೆಯಾಗಿ ಗುಡಾರದಲ್ಲಿದ್ದ ಸಾರಳ ಬಳಿಗೆ ಹೋಗಿ, “ಬೇಗನೇ ಮೂರು ಸೇರು ನಯವಾದ ಹಿಟ್ಟು ನಾದಿ, ಒಲೆಯ ಮೇಲೆ ರೊಟ್ಟಿಗಳನ್ನು ಮಾಡು,” ಎಂದನು. ಅಧ್ಯಾಯವನ್ನು ನೋಡಿ |
ಗಿದ್ಯೋನನು ಒಳಗೆ ಹೋಗಿ ಒಂದು ಆಡಿನ ಮರಿಯನ್ನು ಬೇಯಿಸಿದನು. ಅವನು ಸುಮಾರು ಇಪ್ಪತ್ತು ಸೇರಿನಷ್ಟು ಹಿಟ್ಟನ್ನು ತೆಗೆದುಕೊಂಡು ಹುಳಿಯಿಲ್ಲದ ರೊಟ್ಟಿಯನ್ನು ಮಾಡಿದನು. ತರುವಾಯ ಗಿದ್ಯೋನನು ಆ ಮಾಂಸವನ್ನು ಒಂದು ಬುಟ್ಟಿಯಲ್ಲಿಟ್ಟನು, ಮಾಂಸ ಬೇಯಿಸಿದ ನೀರನ್ನು ಒಂದು ಪಾತ್ರೆಯಲ್ಲಿ ಹಾಕಿದನು. ಗಿದ್ಯೋನನು ಆ ಮಾಂಸವನ್ನೂ ಮಾಂಸ ಬೇಯಿಸಿದ ನೀರನ್ನೂ ಹುಳಿಯಿಲ್ಲದ ರೊಟ್ಟಿಯನ್ನೂ ತೆಗೆದುಕೊಂಡು ಬಂದನು. ಗಿದ್ಯೋನನು ಏಲಾ ಮರದ ಕೆಳಗೆ ಯೆಹೋವನಿಗೆ ಆಹಾರವನ್ನು ಕೊಟ್ಟನು.
ಅಮ್ನೋನನು ಹಾಸಿಗೆಯಲ್ಲಿ ಮಲಗಿ ಕಾಯಿಲೆಯವನಂತೆ ನಟಿಸಿದನು. ಅವನನ್ನು ನೋಡಲು ರಾಜನಾದ ದಾವೀದನು ಅಲ್ಲಿಗೆ ಬಂದನು. ಅಮ್ನೋನನು ರಾಜನಾದ ದಾವೀದನಿಗೆ, “ದಯವಿಟ್ಟು ನನ್ನ ಸೋದರಿಯಾದ ತಾಮಾರಳನ್ನು ಒಳಕ್ಕೆ ಕರೆಯಿರಿ. ನಾನು ನೋಡುತ್ತಿರುವಂತೆ ಅವಳು ನನಗಾಗಿ ಎರಡು ಸಿಹಿ ರೊಟ್ಟಿಗಳನ್ನು ತಯಾರಿಸಲಿ. ಅವಳ ಕೈಗಳಿಂದ ಮಾಡಿದ ರೊಟ್ಟಿಗಳನ್ನೇ ನಾನು ತಿನ್ನುತ್ತೇನೆ” ಎಂದು ಬೇಡಿಕೊಂಡನು.