ಆದಿಕಾಂಡ 18:7 - ಪರಿಶುದ್ದ ಬೈಬಲ್7 ಬಳಿಕ ಅವನು ತನ್ನ ಪಶುಗಳಿದ್ದಲ್ಲಿಗೆ ಓಡಿಹೋಗಿ ಉತ್ತಮವಾದ ಎಳೆಕರುವನ್ನು ತೆಗೆದು ಸೇವಕನಿಗೆ ಕೊಟ್ಟು, “ಬೇಗನೇ ಕರುವನ್ನು ಕೊಯ್ದು, ಊಟಕ್ಕೆ ಸಿದ್ಧಮಾಡು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆ ಮೇಲೆ ಅವನು ದನಗಳ ಕಡೆಗೆ ಓಡಿಹೋಗಿ ಕೊಬ್ಬಿದ ಎಳೇ ಕರುವನ್ನು ತೆಗೆದು ಆಳಿನ ಕೈಗೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅನಂತರ ದನಗಳ ಹಟ್ಟಿಗೆ ಓಡಿಹೋಗಿ ಕೊಬ್ಬಿದ ಎಳೇ ಕರುವನ್ನು ತೆಗೆದು ಆಳಿನ ಕೈಗೆ ಕೊಟ್ಟನು. ಆಳು ಬೇಗನೆ ಅಡಿಗೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಮೇಲೆ ಅವನು ದನಗಳ ಕಡೆಗೆ ಓಡಿಹೋಗಿ ಕೊಬ್ಬಿದ ಎಳೇ ಕರುವನ್ನು ತೆಗೆದು ಆಳಿನ ಕೈಗೆ ಕೊಟ್ಟನು. ಆಳು ಬೇಗನೆ ಅಡಿಗೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅಬ್ರಹಾಮನು ದನದ ಮಂದೆಯ ಬಳಿಗೆ ಓಡಿಹೋಗಿ, ಒಳ್ಳೆಯ ಕರುವನ್ನು ತೆಗೆದುಕೊಂಡು ಒಬ್ಬ ಸೇವಕನಿಗೆ ಕೊಟ್ಟನು. ಆ ಸೇವಕನು ಬೇಗನೆ ಅಡಿಗೆಯನ್ನು ಸಿದ್ಧಪಡಿಸಿದನು. ಅಧ್ಯಾಯವನ್ನು ನೋಡಿ |
ನಿಮ್ಮಲ್ಲಿ ಕೆಲವರಲ್ಲಿ ಯಜ್ಞಕ್ಕೆ ಬೇಕಾಗಿರುವ ಒಳ್ಳೆಯ ಗಂಡು ಪಶುಗಳು ಇದ್ದಾಗ್ಯೂ ಅವರು ನನಗೆ ಅವುಗಳನ್ನು ಸಮರ್ಪಿಸುವದಿಲ್ಲ. ಕೆಲವರು ಕಳಂಕವಿಲ್ಲದ ಪಶುಗಳನ್ನು ನನಗೆ ತರುತ್ತಾರೆ. ಅವರು ಅಂಥಾ ಆರೋಗ್ಯಕರ ಪಶುಗಳನ್ನು ನನಗೆ ಸಮರ್ಪಿಸಲು ವಾಗ್ದಾನ ಮಾಡುವರು. ಆದರೆ ಗುಪ್ತವಾಗಿ ಅವರು ಆ ಪಶುವನ್ನು ಬದಲಿಸಿ ನನಗೆ ರೋಗಿಯಾದ ಪಶುಗಳನ್ನು ಕೊಡುತ್ತಾರೆ. ಅವರಿಗೆ ದುರ್ದೆಶೆ ಸಂಭವಿಸಲಿರುವದು. ನಾನು ದೊಡ್ಡ ಅರಸನು. ನೀವು ನನ್ನನ್ನು ಗೌರವಿಸಬೇಕು. ಭೂಲೋಕದ ಸರ್ವಜನರು ನನ್ನನ್ನು ಸನ್ಮಾನಿಸುವರು.” ಇವು ಸರ್ವಶಕ್ತನಾದ ಯೆಹೋವನ ನುಡಿಗಳು.