ಆದಿಕಾಂಡ 19:13 - ಪರಿಶುದ್ದ ಬೈಬಲ್13 ನಾವು ಈ ನಗರವನ್ನು ನಾಶಮಾಡುತ್ತೇವೆ. ಈ ನಗರದ ದುಷ್ಟತನವನ್ನು ಯೆಹೋವನು ನೋಡಿದ್ದಾನೆ. ಆದ್ದರಿಂದ ಇದನ್ನು ನಾಶಮಾಡಲು ಆತನೇ ನಮ್ಮನ್ನು ಕಳುಹಿಸಿದ್ದಾನೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾವು ಈ ಸ್ಥಳವನ್ನು ನಾಶಮಾಡುವುದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಲು ದೊಡ್ಡ ಮೊರೆಯು ಯೆಹೋವನಿಗೆ ಮುಟ್ಟಿದ್ದರಿಂದ ಇವರನ್ನು ನಾಶಮಾಡುವುದಕ್ಕಾಗಿ ಆತನು ನಮ್ಮನ್ನು ಕಳುಹಿಸಿದ್ದಾನೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಾವು ಈ ಸ್ಥಳವನ್ನು ನಾಶಮಾಡುವುದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಂದ ಆಪಾದನೆ ದೊಡ್ಡದಾದುದರಿಂದ ಇವರನ್ನು ನಾಶಮಾಡುವುದಕ್ಕಾಗಿ ಸರ್ವೇಶ್ವರ ನಮ್ಮನ್ನು ಕಳಿಸಿದ್ದಾರೆ,” ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಾವು ಈ ಸ್ಥಳವನ್ನು ನಾಶಮಾಡುವದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಲು ದೊಡ್ಡ ಮೊರೆಯು ಯೆಹೋವನಿಗೆ ಮುಟ್ಟಿದ್ದರಿಂದ ಇವರನ್ನು ನಾಶಮಾಡುವದಕ್ಕಾಗಿ ಆತನು ನಮ್ಮನ್ನು ಕಳುಹಿಸಿದ್ದಾನೆ ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಏಕೆಂದರೆ ಈ ಸ್ಥಳದವರ ಕೂಗು ಯೆಹೋವ ದೇವರ ಸನ್ನಿಧಿಯಲ್ಲಿ ದೊಡ್ಡದಾಗಿರುವುದರಿಂದ ನಾವು ಇದನ್ನು ನಾಶ ಮಾಡುತ್ತೇವೆ. ಯೆಹೋವ ದೇವರು ನಮ್ಮನ್ನು ಕಳುಹಿಸಿದ್ದಾರೆ.” ಅಧ್ಯಾಯವನ್ನು ನೋಡಿ |