19 ನಿಮ್ಮ ಸೇವಕನಾದ ನನಗೆ ಮಹಾಕರುಣೆಯನ್ನು ತೋರಿ ನನ್ನನ್ನು ಕಾಪಾಡಿದ್ದೀರಿ. ಆದರೆ ನಾನು ಬೆಟ್ಟಗಳವರೆಗೂ ಓಡಿಹೋಗಲಾರೆ. ನಾನು ನಿಧಾನವಾಗಿ ಹೋಗುವುದಾದರೆ ಕೇಡು ಸಂಭವಿಸಿ ಕೊಲ್ಲಲ್ಪಡುವೆನು.
19 ನೀನು ನಿನ್ನ ದಾಸನ ಮೇಲೆ ದಯೆ ಇಟ್ಟು ನನ್ನ ಪ್ರಾಣವನ್ನು ಉಳಿಸಿದ್ದು ಬಹು ವಿಶೇಷವಾದ ಉಪಕಾರವೇ; ಆದರೆ ಬೆಟ್ಟಕ್ಕೆ ಓಡಿ ಹೋಗಲಾರೆನು; ನಾನು ಹೋಗುತ್ತಿರುವಾಗ ಆ ವಿಪತ್ತು ನನಗೂ ಉಂಟಾಗಿ ಸತ್ತೇನು.
19 ನಿಮ್ಮ ದಾಸನ ಮೇಲೆ ಮರುಕವಿಟ್ಟು, ಪ್ರಾಣ ಉಳಿಸಿದ್ದೇನೋ ಮಹಾ ಉಪಕಾರ ಆಯಿತು; ಆದರೆ ಗುಡ್ಡಗಾಡಿಗೆ ಓಡಿಹೋಗಲು ನನ್ನಿಂದಾಗದು, ಅಲ್ಲಿಗೆ ಸೇರುವುದಕ್ಕೆ ಮುಂಚೆಯೇ ಈ ವಿಪತ್ತಿಗೆ ಸಿಕ್ಕಿ ಸತ್ತೇನು.
19 ನೀನು ನಿನ್ನ ದಾಸನ ಮೇಲೆ ದಯವಿಟ್ಟು ನನ್ನ ಪ್ರಾಣವನ್ನು ಉಳಿಸಿದ್ದು ಬಹು ವಿಶೇಷವಾದ ಉಪಕಾರವೇ; ಆದರೆ ಬೆಟ್ಟಕ್ಕೆ ಓಡಿಹೋಗಲಾರೆನು: ನಾನು ಹೋಗುತ್ತಿರುವಾಗ ಆ ವಿಪತ್ತು ನನಗೂ ಉಂಟಾಗಿ ಸತ್ತೇನು.
19 ಈಗ ನಿನ್ನ ದಾಸನಿಗೆ ನಿನ್ನ ದೃಷ್ಟಿಯಲ್ಲಿ ದಯೆ ದೊರಕಿದೆ. ನನ್ನ ಪ್ರಾಣವನ್ನು ಉಳಿಸುವ ಹಾಗೆ ನೀನು ನನಗೆ ಮಾಡಿದ ದಯೆ ದೊಡ್ಡದು. ಆದರೆ ನಾನು ತಪ್ಪಿಸಿಕೊಂಡು ಬೆಟ್ಟಕ್ಕೆ ಓಡಿಹೋಗಲಾರೆನು, ನನಗೆ ವಿಪತ್ತು ಉಂಟಾಗಿ ಸತ್ತೇನು.
‘ಇದು ಏಕೆ ಸಂಭವಿಸಿತೆಂದರೆ, ಅವರು ತಮ್ಮ ದೇವರಾದ ಯೆಹೋವನನ್ನು ತ್ಯಜಿಸಿದರು. ಆತನು ಅವರ ಪೂರ್ವಿಕರನ್ನು ಈಜಿಪ್ಟಿನಿಂದ ಬರಮಾಡಿದನು. ಆದರೆ ಅವರು ಅನ್ಯದೇವರುಗಳನ್ನು ಅನುಸರಿಸಲು ತೀರ್ಮಾನಿಸಿದರು. ಅವರು ಆ ದೇವರುಗಳ ಪೂಜೆಯನ್ನೂ ಸೇವೆಯನ್ನೂ ಮಾಡಲಾರಂಭಿಸಿದರು. ಆದಕಾರಣವೇ ಈ ಕೆಟ್ಟಕಾರ್ಯಗಳೆಲ್ಲಾ ಅವರಿಗೆ ಸಂಭವಿಸುವಂತೆ ಯೆಹೋವನು ಮಾಡಿದನು’ ಎಂದು ಅನ್ಯಜನರು ಉತ್ತರಿಸುವರು.”
ಆದರೆ ದಾವೀದನು, “ಸೌಲನು ಎಂದಾದರೂ ಒಂದು ದಿನ ನನ್ನನ್ನು ಹಿಡಿದುಕೊಳ್ಳುವನು. ಈಗ ಫಿಲಿಷ್ಟಿಯರ ರಾಜ್ಯಕ್ಕೆ ತಪ್ಪಿಸಿಕೊಂಡು ಹೋಗುವುದೇ ನಾನು ಮಾಡಬಹುದಾದ ಒಳ್ಳೆಯ ಕೆಲಸ. ಆಗ ಸೌಲನು ಇಸ್ರೇಲಿನಲ್ಲಿ ನನ್ನನ್ನು ಹುಡುಕುವುದನ್ನು ಬಿಟ್ಟುಬಿಡುತ್ತಾನೆ. ಸೌಲನಿಂದ ತಪ್ಪಿಸಿಕೊಳ್ಳಲು ಇದೇ ಸರಿಯಾದ ಮಾರ್ಗ” ಎಂದು ತನ್ನಲ್ಲೇ ಯೋಚಿಸಿದನು.
ಆಗ ನಾನು ಅವರ ಮೇಲೆ ತುಂಬಾ ಕೋಪವುಳ್ಳವನಾಗಿರುವೆನು. ಅವರಿಗೆ ಸಹಾಯ ಮಾಡದೆ ಅವರನ್ನು ಬಿಟ್ಟುಬಿಡುವೆನು; ಅವರು ನಾಶವಾಗುವರು; ಅವರಿಗೆ ಭಯಂಕರ ಸಂಗತಿಗಳು ಸಂಭವಿಸುವವು; ಅನೇಕ ಕೇಡುಗಳಾಗುವುವು; ಆಗ, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದಿರುವ ಕಾರಣ ಇವೆಲ್ಲಾ ನಮಗೆ ಸಂಭವಿಸುತ್ತವೆ’ ಎಂದು ಅವರು ಹೇಳುವರು.
ಆದ್ದರಿಂದ ನೀನು ನನಗೆ ತಂಗಿಯಾಗಬೇಕೆಂದು ಜನರಿಗೆ ಹೇಳು. ಆಗ ಅವರು ನನ್ನನ್ನು ನಿನ್ನ ಸಹೋದರನೆಂದು ಭಾವಿಸಿ ನನ್ನನ್ನು ಕೊಲ್ಲದೆ ನನಗೆ ದಯೆತೋರುವರು. ಹೀಗೆ ನೀನು ನನ್ನ ಪ್ರಾಣ ಉಳಿಸುವೆ” ಎಂದು ಹೇಳಿದನು.
ಪೋಟೀಫರನು ಯೋಸೇಫನ ವಿಷಯದಲ್ಲಿ ತುಂಬ ಸಂತೋಷಪಟ್ಟು ಸ್ವಂತ ಸೇವಕನನ್ನಾಗಿ ಮಾಡಿಕೊಂಡನು; ಅಲ್ಲದೆ ಮನೆಯ ಮೇಲ್ವಿಚಾರಣೆಯನ್ನು ಒಪ್ಪಿಸಿಕೊಟ್ಟನು; ತನ್ನ ಆಸ್ತಿಗೆಲ್ಲಾ ಮೇಲಾಧಿಕಾರಿಯನ್ನಾಗಿ ನೇಮಿಸಿದನು.