ಆದಿಕಾಂಡ 19:2 - ಪರಿಶುದ್ದ ಬೈಬಲ್2 ಲೋಟನು ಅವರಿಗೆ, “ಸ್ವಾಮಿಗಳೇ, ದಯವಿಟ್ಟು ನನ್ನ ಮನೆಗೆ ಬನ್ನಿ. ನಾನು ನಿಮ್ಮನ್ನು ಉಪಚರಿಸುವೆನು. ನಿಮ್ಮ ಕೈಕಾಲುಗಳನ್ನು ತೊಳೆದುಕೊಂಡು ಈ ರಾತ್ರಿ ನಮ್ಮ ಮನೆಯಲ್ಲೇ ಇರಿ. ನಾಳೆ ಮುಂಜಾನೆ ನಿಮ್ಮ ಪ್ರಯಾಣವನ್ನು ಮುಂದುವರಿಸಬಹುದು” ಎಂದು ಹೇಳಿದನು. ದೇವದೂತರು, “ಈ ಚೌಕದಲ್ಲಿ ನಾವು ಈ ರಾತ್ರಿ ಕಳೆಯುತ್ತೇವೆ” ಎಂದು ಉತ್ತರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಸ್ವಾಮಿಗಳೇ, ನಿಮ್ಮ ದಾಸನ ಮನೆಗೆ ಬಂದು ಇಳಿದುಕೊಂಡು ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ನಿಮ್ಮ ಮಾರ್ಗ ಹಿಡಿದುಕೊಂಡು ಹೋಗಬಹುದು” ಅಂದನು. ಅವರು, “ಹಾಗಲ್ಲ, ಬೀದಿಯಲ್ಲೇ ರಾತ್ರಿ ಕಳೆಯುತ್ತೇವೆ” ಎನ್ನಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಸ್ವಾಮಿಗಳೇ, ನಿಮ್ಮ ದಾಸನ ಮನೆಗೆ ಬಂದು ರಾತ್ರಿ ತಂಗಿರಿ. ಕಾಲುಗಳನ್ನು ತೊಳೆದುಕೊಳ್ಳಿ. ಬೆಳಿಗ್ಗೆ ಎದ್ದು ನಿಮ್ಮ ಪ್ರಯಾಣವನ್ನು ಮುಂದುವರಿಸಬಹುದು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಸ್ವಾವಿುಗಳೇ, ನಿಮ್ಮ ದಾಸನ ಮನೆಗೆ ಬಂದು ಇಳುಕೊಂಡು ಕಾಲುಗಳನ್ನು ತೊಳಕೊಳ್ಳಿರಿ; ಬೆಳಿಗ್ಗೆ ನಿಮ್ಮ ಮಾರ್ಗ ಹಿಡುಕೊಂಡು ಹೋಗಬಹುದು ಅಂದನು. ಅವರು - ಹಾಗಲ್ಲ, ಬೀದಿಯಲ್ಲೇ ರಾತ್ರಿ ಕಳೆಯುತ್ತೇವೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಸ್ವಾಮಿಗಳೇ, ನೀವು ನಿಮ್ಮ ದಾಸನ ಮನೆಯಲ್ಲಿ ತಂಗಿ, ರಾತ್ರಿ ಕಳೆಯಿರಿ. ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ. ಬೆಳಿಗ್ಗೆ ಎದ್ದು ನಿಮ್ಮ ಮಾರ್ಗವನ್ನು ಹಿಡಿದು ಹೋಗಬಹುದು,” ಎಂದು ಬೇಡಿಕೊಂಡನು. ಅದಕ್ಕೆ ಅವರು, “ಹಾಗಲ್ಲ, ನಾವು ರಾತ್ರಿಯೆಲ್ಲಾ ಬೀದಿಯಲ್ಲಿ ಇರುತ್ತೇವೆ,” ಎಂದರು. ಅಧ್ಯಾಯವನ್ನು ನೋಡಿ |