ಆದಿಕಾಂಡ 19:24 - ಪರಿಶುದ್ದ ಬೈಬಲ್24 ಆಗ ಯೆಹೋವನು ಸೊದೋಮ್ ಮತ್ತು ಗೊಮೋರ ಪಟ್ಟಣಗಳ ಮೇಲೆ ಆಕಾಶದಿಂದ ಉರಿಯುವ ಗಂಧಕದ ಮಳೆಯನ್ನು ಸುರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆಗ ಯೆಹೋವನು ಸೊದೋಮ್ ಗೊಮೋರಗಳ ಮೇಲೆ ಆಕಾಶದಿಂದ ಅಗ್ನಿಗಂಧಕಗಳನ್ನು ಸುರಿಸಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆಗ ಸರ್ವೇಶ್ವರ ಸ್ವಾಮಿ ಸೊದೋಮ್ - ಗೊಮೋರಗಳ ಮೇಲೆ ಅಗ್ನಿ ಉರಿಯುತ್ತಿರುವ ಗಂಧಕಮಳೆ ಸುರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆಗ ಯೆಹೋವನು ಸೊದೋಮ್ ಗೊಮೋರಗಳ ಮೇಲೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆಗ ಯೆಹೋವ ದೇವರು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ, ಬೆಂಕಿಯನ್ನೂ ಆಕಾಶದಿಂದ ಸುರಿಸಿದರು. ಅಧ್ಯಾಯವನ್ನು ನೋಡಿ |
ನನ್ನ ಜೀವದಾಣೆ, ಮೋವಾಬ್ಯರೂ ಅಮ್ಮೋನ್ಯರೂ ಸೊದೋಮ್ ಗೊಮೋರದವರಂತೆ ನಾಶವಾಗುವರು. ನಾನು ಸರ್ವಶಕ್ತನಾದ ಇಸ್ರೇಲರ ದೇವರಾಗಿರುವೆನು. ನಾನು ವಾಗ್ದಾನ ಮಾಡುವದೇನೆಂದರೆ, ಆ ರಾಜ್ಯಗಳು ಸಂಪೂರ್ಣವಾಗಿ ನಾಶವಾಗುವವು. ಅವರ ಭೂಮಿಯು ಕಳೆಗಳಿಂದ ತುಂಬಿಹೋಗುವದು. ಅದು ಮೃತ್ಯುಸಮುದ್ರದ ಉಪ್ಪಿನಿಂದ ತುಂಬಿಹೋದಂತಿರುವದು. ನನ್ನ ಜನರಲ್ಲಿ ಉಳಿದವರು ಅವರ ದೇಶವನ್ನೂ ಅಲ್ಲಿ ಉಳಿದಿರುವ ವಸ್ತುಗಳನ್ನೂ ತಮ್ಮ ವಶಮಾಡಿಕೊಳ್ಳುವರು.”
ಯೆಹೂದದ ಪ್ರವಾದಿಗಳು ಜೆರುಸಲೇಮಿನಲ್ಲಿ ಭಯಂಕರ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. ಈ ಪ್ರವಾದಿಗಳು ವ್ಯಭಿಚಾರ ಮಾಡುತ್ತಾರೆ. ಅವರು ಸುಳ್ಳುಗಳನ್ನು ಕೇಳಿ, ಆ ಸುಳ್ಳುಬೋಧನೆಗಳನ್ನು ಪಾಲಿಸುತ್ತಾರೆ. ಅವರು ದುಷ್ಟರಿಗೆ ಅವರ ದುಷ್ಟತನವನ್ನು ಮುಂದುವರಿಸಲು ಪ್ರೋತ್ಸಾಹಿಸುತ್ತಾರೆ. ಆದ್ದರಿಂದ ಜನರು ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರೆಲ್ಲರು ನನಗೆ ಸೊದೋಮ್ ನಗರದಂತೆ ಇದ್ದಾರೆ. ಜೆರುಸಲೇಮಿನ ಜನರು ಗೊಮೋರ ನಗರದಂತೆ ಇದ್ದಾರೆ.”