Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:25 - ಪರಿಶುದ್ದ ಬೈಬಲ್‌

25 ಹೀಗೆ ಯೆಹೋವನು ಆ ಎರಡು ನಗರಗಳನ್ನು ನಾಶಮಾಡಿದನು; ಇಡೀ ಕಣಿವೆಯನ್ನೂ ಅದರಲ್ಲಿ ಬೆಳೆಯುತ್ತಿದ್ದ ಸಸ್ಯಗಳನ್ನೂ ನಗರಗಳಲ್ಲಿದ್ದ ಎಲ್ಲಾ ಜನರನ್ನೂ ನಾಶಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆ ಪಟ್ಟಣಗಳನ್ನೂ ಸುತ್ತಲಿರುವ ಸೀಮೆಯೆಲ್ಲವನ್ನೂ ಊರುಗಳಲ್ಲಿದ್ದ ಜನರೆಲ್ಲರನ್ನೂ ಭೂಮಿಯ ಮೇಲಣ ಎಲ್ಲಾ ಬೆಳೆಯನ್ನೂ ಹಾಳುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆ ಪಟ್ಟಣಗಳನ್ನು, ಇಡೀ ಆ ಬಯಲುಸೀಮೆಯನ್ನೂ ಅವುಗಳ ನಿವಾಸಿಗಳನ್ನೂ ಹೊಲಗಳ ಬೆಳೆಯೆಲ್ಲವನ್ನೂ ಹಾಳುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಕಾಶದಿಂದ ಅಗ್ನಿಗಂಧಕಗಳನ್ನು ಸುರಿಸಿ ಆ ಪಟ್ಟಣಗಳನ್ನೂ ಸುತ್ತಲಿರುವ ಸೀಮೆಯೆಲ್ಲವನ್ನೂ ಊರುಗಳಲ್ಲಿದ್ದ ಜನರೆಲ್ಲರನ್ನೂ ಭೂವಿುಯ ಮೇಲಣ ಎಲ್ಲಾ ಬೆಳೆಯನ್ನೂ ಹಾಳುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಹೀಗೆ ದೇವರು ಆ ಪಟ್ಟಣಗಳನ್ನೂ, ಅಲ್ಲಿಯ ಪ್ರದೇಶವನ್ನೂ, ಪಟ್ಟಣಗಳ ಎಲ್ಲಾ ನಿವಾಸಿಗಳನ್ನೂ, ಭೂಮಿಯ ಮೇಲೆ ಬೆಳೆದ ಬೆಳೆಯನ್ನೂ ಅಳಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:25
15 ತಿಳಿವುಗಳ ಹೋಲಿಕೆ  

ಆತನು ಫಲವತ್ತಾದ ಭೂಮಿಯನ್ನು ಉಪಯೋಗವಿಲ್ಲದ ಉಪ್ಪುಭೂಮಿಯನ್ನಾಗಿ ಪರಿವರ್ತಿಸಿದನು, ಯಾಕೆಂದರೆ ಅಲ್ಲಿ ಕೆಟ್ಟಜನರು ನೆಲೆಸಿದ್ದರು.


ಈ ರಾಜರುಗಳೆಲ್ಲ ಸಿದ್ದೀಮ್ ಕಣಿವೆಯಲ್ಲಿ ತಮ್ಮ ಸೈನ್ಯಗಳನ್ನು ಒಟ್ಟಿಗೆ ಸೇರಿಸಿದರು. (ಸಿದ್ದೀಮ್ ಕಣಿವೆಯು ಈಗ ಉಪ್ಪುಸಮುದ್ರವಾಗಿದೆ).


ಲೋಟನು ಕಣ್ಣೆತ್ತಿ ನೋಡಿದಾಗ ಜೋರ್ಡನ್ ಕಣಿವೆಯೆಲ್ಲಾ ಕಾಣಿಸಿತು. ಅಲ್ಲಿ ಬೇಕಾದಷ್ಟು ನೀರಿರುವುದನ್ನು ಲೋಟನು ನೋಡಿದನು. (ಆ ಕಾಲದಲ್ಲಿ ಸೊದೋಮ್ ಮತ್ತು ಗೊಮೋರ ಪಟ್ಟಣಗಳು ಯೆಹೋವನಿಂದ ನಾಶವಾಗಿರಲಿಲ್ಲ. ಆ ಕಾಲದಲ್ಲಿ ಜೋರ್ಡನ್ ಕಣಿವೆಯು ಚೋಗರ್ ತನಕ ಯೆಹೋವನ ತೋಟದಂತಿತ್ತು. ಅದು ಈಜಿಪ್ಟಿನ ಭೂಮಿಯಂತೆ ಫಲವತ್ತಾಗಿತ್ತು.)


ದೇವರು ಸೊದೋಮ್, ಗೊಮೋರ ಎಂಬ ಕೆಟ್ಟ ಪಟ್ಟಣಗಳನ್ನು ದಂಡಿಸಿದನು. ಆತನು ಆ ಪಟ್ಟಣಗಳಲ್ಲಿ ಏನೂ ಉಳಿಯದಂತೆ, ಸುಟ್ಟು ಬೂದಿಮಾಡಿದನು. ತನಗೆ ವಿರುದ್ಧವಾಗಿರುವ ಜನರಿಗೆ ಏನಾಗುತ್ತದೆ ಎಂಬುದಕ್ಕೆ ಆತನು ಆ ಪಟ್ಟಣಗಳನ್ನು ನಿದರ್ಶನಗಳನ್ನಾಗಿ ಇಟ್ಟಿದ್ದಾನೆ.


ಅಬ್ರಾಮನು ಕಾನಾನ್ ಪ್ರದೇಶದಲ್ಲಿ ಉಳಿದುಕೊಂಡನು. ಲೋಟನು ಕಣಿವೆಯಲ್ಲಿದ್ದ ಪಟ್ಟಣಗಳ ಮಧ್ಯದಲ್ಲಿ ವಾಸಿಸಿದನು; ದಕ್ಷಿಣದಲ್ಲಿದ್ದ ಸೊದೋಮಿನವರೆಗೂ ಗುಡಾರಗಳನ್ನು ಹಾಕಿಕೊಂಡು ಪಾಳೆಯಮಾಡಿಕೊಂಡನು.


ನಿಮ್ಮ ದೇಶವೆಲ್ಲಾ ನಿಷ್ಪ್ರಯೋಜಕವಾಗಿರುವುದು. ಅದರ ಮೇಲೆ ಉಪ್ಪೂ ಗಂಧಕವೂ ತುಂಬಿರುವುದು. ಅದರ ಮೇಲೆ ಯಾವ ಸಸಿಯೂ ಬೆಳೆಯಲಾರದು; ಕೂಳೆಯೂ ಬೆಳೆಯುವುದಿಲ್ಲ. ಸೊದೋಮ್, ಗೊಮೋರ, ಅದ್ಮಾ ಮತ್ತು ಚೆಬೋಯೀಮ್ ಎಂಬ ಪಟ್ಟಣಗಳು ಯೆಹೋವನ ಕೋಪದ ನಿಮಿತ್ತ ನಾಶವಾದಂತೆ ನಿಮ್ಮ ದೇಶವೂ ನಾಶವಾಗುವುದು.


ಬಾಬಿಲೋನು ಸೊದೋಮ್ ಗೊಮೋರಗಳಂತೆ ನಾಶವಾಗುವದು. ದೇವರೇ ಇದನ್ನು ಮಾಡುವನು. ಆಗ ಅಲ್ಲಿ ಏನೂ ಉಳಿಯದು. “ಎಲ್ಲಾ ರಾಜ್ಯಗಳಿಗಿಂತ ಬಾಬಿಲೋನ್ ಬಹಳ ಸುಂದರವಾಗಿದೆ. ಬಾಬಿಲೋನಿಯರು ತಮ್ಮ ನಗರದ ಬಗ್ಗೆ ತುಂಬಾ ಹೆಚ್ಚಳಪಡುತ್ತಾರೆ.


ಯೆಹೋವನು ಕನಿಕರಪಡದೆ ಕೆಡವಿಬಿಟ್ಟ ನಗರಗಳ ಗತಿಯು ಅವನಿಗೆ ಬರಲಿ. ಬೆಳಿಗ್ಗೆ ಯುದ್ಧದ ಕೂಗಾಟವೂ, ಮಧ್ಯಾಹ್ನದಲ್ಲಿ ಯುದ್ಧದ ಕಿರುಚಾಟವೂ ಅವನ ಕಿವಿಗೆ ಬೀಳಲಿ.


ಸೊದೋಮ್ ಗೊಮೋರನಗರಗಳಂತೆಯೂ ಅವುಗಳ ಸುತ್ತಲಿನ ಪಟ್ಟಣಗಳಂತೆಯೂ ಎದೋಮ್ ನಾಶವಾಗುವುದು. ಅಲ್ಲಿ ಯಾರೂ ವಾಸಮಾಡಲಾರರು” ಯೆಹೋವನು ಹೀಗೆನ್ನುತ್ತಾನೆ:


ದೇವರು ಸೊದೋಮ್ ಗೊಮೋರ ನಗರಗಳನ್ನೂ ಅವುಗಳ ಸುತ್ತಮುತ್ತಲಿನ ಪಟ್ಟಣಗಳನ್ನೂ ಸಂಪೂರ್ಣವಾಗಿ ನಾಶಮಾಡಿದನು. ಈಗ ಅಲ್ಲಿ ಯಾರೂ ವಾಸಿಸುವದಿಲ್ಲ. ಅದೇ ರೀತಿ ಬಾಬಿಲೋನಿನಲ್ಲಿ ಯಾರೂ ವಾಸಮಾಡುವದಿಲ್ಲ. ವಾಸಮಾಡಲು ಅಲ್ಲಿಗೆ ಯಾರೂ ಹೋಗುವದಿಲ್ಲ.”


ನನ್ನ ಜನರ ಪಾಪವು ಬಹಳವಾಗಿತ್ತು. ಅವರ ಪಾಪವು ಸೊದೋಮ್ ಪಟ್ಟಣದ ಪಾಪಕ್ಕಿಂತಲೂ ಹೆಚ್ಚಾಗಿತ್ತು. ಸೊದೋಮ್ ಇದ್ದಕ್ಕಿದ್ದಂತೆ ನಾಶವಾಯಿತು. ಅದು ನಾಶವಾದದ್ದು ಯಾವ ಮಾನವನಿಂದಲೂ ಅಲ್ಲ.


ಸೊದೋಮಿಗೂ ಮತ್ತು ಆಕೆಯ ಹೆಣ್ಣು ಮಕ್ಕಳಿಗೂ ಅತಿರೇಕ ಜಂಬವು ಬಂದು ಭಯಂಕರ ಕೃತ್ಯಗಳನ್ನು ನನ್ನ ಮುಂದೆಯೇ ಮಾಡಿದರು. ಆದ್ದರಿಂದ ನಾನು ಅವರನ್ನು ನನ್ನಿಂದ ದೂರ ಮಾಡಿದೆನು.”


“ಸೊದೋಮ್ ಗೊಮೋರವನ್ನು ನಾಶಮಾಡಿದಂತೆ ನಾನು ನಿಮ್ಮನ್ನು ನಾಶಮಾಡಿದೆನು. ಆ ನಗರಗಳು ಸಂಪೂರ್ಣವಾಗಿ ನಾಶವಾದವು. ನೀವು ಬೆಂಕಿಯಿಂದ ಎಳೆದ ಕೊಳ್ಳಿಯಂತಿದ್ದೀರಿ. ಆದರೂ ನೀವು ಸಹಾಯಕ್ಕಾಗಿ ನನ್ನ ಬಳಿಗೆ ಬರಲಿಲ್ಲ.” ಇದು ಯೆಹೋವನ ನುಡಿ.


ಯೆಹೂದದ ಪ್ರವಾದಿಗಳು ಜೆರುಸಲೇಮಿನಲ್ಲಿ ಭಯಂಕರ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. ಈ ಪ್ರವಾದಿಗಳು ವ್ಯಭಿಚಾರ ಮಾಡುತ್ತಾರೆ. ಅವರು ಸುಳ್ಳುಗಳನ್ನು ಕೇಳಿ, ಆ ಸುಳ್ಳುಬೋಧನೆಗಳನ್ನು ಪಾಲಿಸುತ್ತಾರೆ. ಅವರು ದುಷ್ಟರಿಗೆ ಅವರ ದುಷ್ಟತನವನ್ನು ಮುಂದುವರಿಸಲು ಪ್ರೋತ್ಸಾಹಿಸುತ್ತಾರೆ. ಆದ್ದರಿಂದ ಜನರು ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರೆಲ್ಲರು ನನಗೆ ಸೊದೋಮ್ ನಗರದಂತೆ ಇದ್ದಾರೆ. ಜೆರುಸಲೇಮಿನ ಜನರು ಗೊಮೋರ ನಗರದಂತೆ ಇದ್ದಾರೆ.”


ನನ್ನ ಜೀವದಾಣೆ, ಮೋವಾಬ್ಯರೂ ಅಮ್ಮೋನ್ಯರೂ ಸೊದೋಮ್ ಗೊಮೋರದವರಂತೆ ನಾಶವಾಗುವರು. ನಾನು ಸರ್ವಶಕ್ತನಾದ ಇಸ್ರೇಲರ ದೇವರಾಗಿರುವೆನು. ನಾನು ವಾಗ್ದಾನ ಮಾಡುವದೇನೆಂದರೆ, ಆ ರಾಜ್ಯಗಳು ಸಂಪೂರ್ಣವಾಗಿ ನಾಶವಾಗುವವು. ಅವರ ಭೂಮಿಯು ಕಳೆಗಳಿಂದ ತುಂಬಿಹೋಗುವದು. ಅದು ಮೃತ್ಯುಸಮುದ್ರದ ಉಪ್ಪಿನಿಂದ ತುಂಬಿಹೋದಂತಿರುವದು. ನನ್ನ ಜನರಲ್ಲಿ ಉಳಿದವರು ಅವರ ದೇಶವನ್ನೂ ಅಲ್ಲಿ ಉಳಿದಿರುವ ವಸ್ತುಗಳನ್ನೂ ತಮ್ಮ ವಶಮಾಡಿಕೊಳ್ಳುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು