ಆದಿಕಾಂಡ 19:28 - ಪರಿಶುದ್ದ ಬೈಬಲ್28 ಅಬ್ರಹಾಮನು ಸೊದೋಮ್ ಮತ್ತು ಗೊಮೋರ ಪಟ್ಟಣಗಳ ಕಡೆಗೂ ಕಣಿವೆ ಪ್ರದೇಶದ ಕಡೆಗೂ ನೋಡಿದಾಗ ಆ ಪ್ರದೇಶದಿಂದ ಹೊಗೆ ಮೇಲೇರುತ್ತಿರುವುದನ್ನು ಕಂಡನು; ಧಗಧಗಿಸುವ ಬೆಂಕಿಯಿಂದ ಬರುವ ಹೊಗೆಯಂತೆ ಅದು ಕಂಡಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಸೊದೋಮ್ ಗೊಮೋರದ ಸುತ್ತಲಿನ ಎಲ್ಲಾ ದಿಕ್ಕುಗಳ ಕಡೆಗೂ ನೋಡಿದಾಗ, ಅಯ್ಯೋ, ಆ ಪ್ರದೇಶದಿಂದ ಹೊಗೆಯು ಆವಿಗೆಯ ಹೊಗೆಯಂತೆ ಮೇಲಕ್ಕೇರುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಸೊದೋಮ್ - ಗೊಮೋರ ಹಾಗೂ ಆ ಬಯಲುಸೀಮೆಯತ್ತ ಅವನು ಕಣ್ಣುಹಾಯಿಸಿದಾಗ, ಇಗೋ, ಆ ಪ್ರದೇಶದಿಂದ ಹೊಗೆ, ದೊಡ್ಡ ಆವಿಗೆಯ ಹೊಗೆಯಂತೆ ಭುಗಿಲೇರುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಸೊದೋಮ್ ಗೊಮೋರಗಳ ಕಡೆಗೂ ಆ ಎಲ್ಲಾ ಸೀಮೆಯ ಕಡೆಗೂ ನೋಡಿದಾಗ, ಅಯ್ಯೋ, ಆ ಪ್ರದೇಶದಿಂದ ಹೊಗೆಯು ಆವಿಗೆಯ ಹೊಗೆಯಂತೆ ಏರಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅವನು ಸೊದೋಮ್ ಗೊಮೋರಗಳ ಕಡೆಗೂ ಮೈದಾನದ ಎಲ್ಲಾ ಪ್ರದೇಶಗಳ ಕಡೆಗೂ ನೋಡಿದನು. ಆ ಪ್ರದೇಶದಿಂದ ಹೊಗೆಯು ಕುಲುಮೆಯ ಹೊಗೆಯಂತೆ ಏರುತ್ತಿತ್ತು. ಅಧ್ಯಾಯವನ್ನು ನೋಡಿ |