ಆದಿಕಾಂಡ 19:29 - ಪರಿಶುದ್ದ ಬೈಬಲ್29 ದೇವರು ಆ ಸೀಮೆಯ ನಗರಗಳನ್ನು ನಾಶಮಾಡಿದರೂ ಅಬ್ರಹಾಮನನ್ನು ಜ್ಞಾಪಿಸಿಕೊಂಡು ಲೋಟನ ಪ್ರಾಣವನ್ನು ಉಳಿಸಿದನು; ಆದರೆ ಲೋಟನು ವಾಸಿಸುತ್ತಿದ್ದ ನಗರವನ್ನು ನಾಶಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ದೇವರು ಆ ಪ್ರದೇಶದ ಪಟ್ಟಣಗಳನ್ನು ನಾಶಮಾಡಿದಾಗ, ಅಬ್ರಹಾಮನನ್ನು ನೆನಪುಮಾಡಿಕೊಂಡನು. ಲೋಟನು ವಾಸವಾಗಿದ್ದ ಪಟ್ಟಣಗಳನ್ನು ಹಾಳುಮಾಡಿ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿ ಪಾರುಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ದೇವರು ಆ ಬಯಲುಸೀಮೆಯ ಪಟ್ಟಣಗಳನ್ನು ನಾಶಮಾಡಿದಾಗ ಲೋಟನು ವಾಸವಾಗಿದ್ದ ಊರುಗಳನ್ನೇನೋ ಹಾಳುಮಾಡಿದರು, ಆದರೆ ಅಬ್ರಹಾಮನನ್ನು ನೆನಪಿಗೆ ತಂದುಕೊಂಡು ಲೋಟನನ್ನು ತಪ್ಪಿಸಿ ಕಾಪಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ದೇವರು ಆ ಸೀಮೆಯ ಪಟ್ಟಣಗಳನ್ನು ನಾಶಮಾಡಿದಾಗ ಲೋಟನು ವಾಸವಾಗಿದ್ದ ಊರುಗಳನ್ನು ಕೆಡವಿದರೂ ಅಬ್ರಹಾಮನನ್ನು ನೆನಸಿ ಲೋಟನನ್ನು ತಪ್ಪಿಸಿ ಕಾಪಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ದೇವರು ಆ ಬಯಲುಸೀಮೆಯ ಪಟ್ಟಣಗಳನ್ನು ನಾಶಮಾಡಿದಾಗ, ಲೋಟನು ವಾಸವಾಗಿದ್ದ ಪಟ್ಟಣಗಳನ್ನು ನಾಶಮಾಡಿದರು. ಆದರೆ ಅಬ್ರಹಾಮನನ್ನು ಜ್ಞಾಪಕಮಾಡಿಕೊಂಡು, ಲೋಟನನ್ನು ಹೊರಗೆ ಕಳುಹಿಸಿ ಪಾರು ಮಾಡಿದರು. ಅಧ್ಯಾಯವನ್ನು ನೋಡಿ |