Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:31 - ಪರಿಶುದ್ದ ಬೈಬಲ್‌

31 ಒಂದು ದಿನ ಹಿರಿಯ ಮಗಳು ತನ್ನ ತಂಗಿಗೆ, “ಭೂಲೋಕದಲ್ಲೆಲ್ಲಾ ಸ್ತ್ರೀಯರೂ ಪುರುಷರೂ ಮದುವೆಯಾಗುತ್ತಾರೆ. ಆದರೆ ಇಲ್ಲಿ ನಾವು ಮದುವೆಯಾಗಲು ಯಾವ ಗಂಡಸರೂ ಇಲ್ಲ. ನಮ್ಮ ತಂದೆಗೂ ವಯಸ್ಸಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಹೀಗಿರುವಲ್ಲಿ ಹಿರೀಮಗಳು ತನ್ನ ತಂಗಿಗೆ, “ನಮ್ಮ ತಂದೆ ಮುದುಕನಷ್ಟೆ; ಸರ್ವಲೋಕದ ಪದ್ಧತಿಯ ಮೇರೆಗೆ ನಮ್ಮನ್ನು ಮದುವೆ ಮಾಡಿಕೊಳ್ಳುವ ಪುರುಷರು ಎಲ್ಲಿಯೂ ಇಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಇಂತಿರಲು, ಅವನ ಹಿರಿಯ ಮಗಳು ತನ್ನ ತಂಗಿಗೆ ಹೀಗೆಂದಳು. “ನಮ್ಮ ತಂದೆ ಮುದುಕ; ಲೋಕ ಪದ್ಧತಿಯ ಪ್ರಕಾರ ನಮ್ಮನ್ನು ಮದುವೆ ಮಾಡಿಕೊಳ್ಳುವ ಗಂಡುಗಳು ಇಲ್ಲೆಲ್ಲಿಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಹೀಗಿರುವಲ್ಲಿ ಹಿರೀಮಗಳು ತನ್ನ ತಂಗಿಗೆ - ನಮ್ಮ ತಂದೆ ಮುದುಕನಷ್ಟೆ; ಸರ್ವಲೋಕದ ಪದ್ಧತಿಯ ಮೇರೆಗೆ ನಮ್ಮನ್ನು ಮದುವೆ ಮಾಡಿಕೊಳ್ಳುವ ಪುರುಷರು ಎಲ್ಲಿಯೂ ಇಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆಗ ಹಿರಿಯ ಮಗಳು ಚಿಕ್ಕವಳಿಗೆ, “ನಮ್ಮ ತಂದೆಯು ಮುದುಕನಾಗಿದ್ದಾನೆ. ಲೋಕದ ಎಲ್ಲಾ ಕ್ರಮದ ಪ್ರಕಾರ ನಮ್ಮೊಂದಿಗಿರಲು ನಮ್ಮ ಸುತ್ತಲಿನ ಪ್ರದೇಶದಲ್ಲಿ ಪುರುಷರಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:31
10 ತಿಳಿವುಗಳ ಹೋಲಿಕೆ  

“ಇಬ್ಬರು ಅಣ್ಣತಮ್ಮಂದಿರು ಜೀವಿಸುತ್ತಿರುವಾಗ ಒಬ್ಬನು ಮಕ್ಕಳಿಲ್ಲದೆ ಸತ್ತುಹೋದರೆ ಅವನ ಹೆಂಡತಿಯು ಕುಟುಂಬದಿಂದ ಹೊರಗೆ ಮದುವೆಯಾಗಬಾರದು. ಅವಳ ಮೈದುನ ಆಕೆಯನ್ನು ಮದುವೆಯಾಗಿ, ತನ್ನ ಮೈದುನ ಧರ್ಮವನ್ನು ನೆರವೇರಿಸಬೇಕು.


ಆ ಸಮಯದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಗಂಡಸನ್ನು ಹಿಡಿದುಕೊಂಡು, “ನಮ್ಮ ಆಹಾರವನ್ನು ನಾವೇ ಸಂಪಾದಿಸಿಕೊಳ್ಳುತ್ತೇವೆ. ನಮ್ಮ ಬಟ್ಟೆಬರೆಗಳನ್ನು ನಾವೇ ಮಾಡಿಕೊಳ್ಳುತ್ತೇವೆ, ನಮ್ಮ ಕೆಲಸಗಳನ್ನೆಲ್ಲಾ ನಾವೇ ಮಾಡಿಕೊಳ್ಳುತ್ತೇವೆ. ನೀನು ನಮ್ಮನ್ನು ಮದುವೆಯಾಗು, ನಿನ್ನ ಹೆಸರನ್ನು ನಾವು ಇಟ್ಟುಕೊಳ್ಳುವಂತೆ ಮಾಡು. ದಯಮಾಡಿ ನಮ್ಮ ನಾಚಿಕೆಯನ್ನು ನಮ್ಮಿಂದ ತೊಲಗಿಸು” ಎಂದು ಹೇಳುವರು.


ಹಾಗರಳು ಅಬ್ರಾಮನಿಂದ ಗರ್ಭಿಣಿಯಾದಾಗ ತನ್ನ ಯಜಮಾನಿಯಾದ ಸಾರಯಳನ್ನೇ ಕಡೆಗಣಿಸತೊಡಗಿದಳು.


ಸಾರಯಳು ಅಬ್ರಾಮನಿಗೆ, “ಯೆಹೋವನು ನನಗೆ ಮಕ್ಕಳನ್ನು ಪಡೆಯುವ ಅವಕಾಶವನ್ನು ಕೊಡಲಿಲ್ಲ. ಆದ್ದರಿಂದ ನನ್ನ ಸೇವಕಿಯಾದ ಹಾಗರಳ ಬಳಿಗೆ ಹೋಗು. ಆಕೆಯಲ್ಲಿ ಹುಟ್ಟುವ ಮಗುವನ್ನು ನನ್ನ ಮಗುವಂತೆ ಸ್ವೀಕರಿಸಿಕೊಳ್ಳುವೆನು” ಎಂದು ಹೇಳಿದಳು. ಅಬ್ರಾಮನು ತನ್ನ ಹೆಂಡತಿಯಾದ ಸಾರಯಳಿಗೆ ವಿಧೇಯನಾದನು.


ಆದಾಮ ಮತ್ತು ಹವ್ವಳು ಕೂಡಿದರು. ಆದ್ದರಿಂದ ಹವ್ವಳಿಗೆ ಒಂದು ಮಗು ಜನಿಸಿತು. ಹವ್ವಳು, “ಯೆಹೋವನ ಸಹಾಯದಿಂದ ಗಂಡುಮಗುವನ್ನು ಪಡೆದಿದ್ದೇನೆ” ಎಂದು ಹೇಳಿ ಆ ಮಗುವಿಗೆ ಕಾಯಿನ ಎಂದು ಹೆಸರಿಟ್ಟಳು.


ಅಬ್ರಹಾಮನು ಸೊದೋಮ್ ಮತ್ತು ಗೊಮೋರ ಪಟ್ಟಣಗಳ ಕಡೆಗೂ ಕಣಿವೆ ಪ್ರದೇಶದ ಕಡೆಗೂ ನೋಡಿದಾಗ ಆ ಪ್ರದೇಶದಿಂದ ಹೊಗೆ ಮೇಲೇರುತ್ತಿರುವುದನ್ನು ಕಂಡನು; ಧಗಧಗಿಸುವ ಬೆಂಕಿಯಿಂದ ಬರುವ ಹೊಗೆಯಂತೆ ಅದು ಕಂಡಿತು.


ಪೇತ್ರನಿಗೆ ಏನು ಹೇಳಬೇಕೋ ತಿಳಿಯಲಿಲ್ಲ. ಏಕೆಂದರೆ ಅವನು ಮತ್ತು ಉಳಿದ ಇನ್ನಿಬ್ಬರು ಶಿಷ್ಯರು ಬಹಳ ಭಯಗೊಂಡಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು