Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:32 - ಪರಿಶುದ್ದ ಬೈಬಲ್‌

32 ಆದರೆ ನಾವು ಮಕ್ಕಳನ್ನು ನಮ್ಮ ತಂದೆಯಿಂದಲೇ ಪಡೆದುಕೊಳ್ಳೋಣ. ಆಗ ನಮ್ಮ ಕುಟುಂಬ ಕೊನೆಗೊಳ್ಳುವುದಿಲ್ಲ. ನಮ್ಮ ತಂದೆಯನ್ನು ಮತ್ತನನ್ನಾಗಿ ಮಾಡಿ ಅವನೊಂದಿಗೆ ಮಲಗಿಕೊಳ್ಳೋಣ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನಾವು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ, ಅವನ ಸಂಗಡ ಮಲಗಿಕೊಂಡು ತಂದೆಯಿಂದ ಸಂತಾನವನ್ನು ಪಡೆದುಕೊಳ್ಳೋಣ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಎಂದೇ ಬಾ ತಂದೆಗೆ ದ್ರಾಕ್ಷಾರಸವನ್ನು ಕುಡಿಸೋಣ; ಅವನ ಸಂಗಡ ಮಲಗಿಕೊಂಡು ತಂದೆಯಿಂದಲಾದರೂ ಸಂತಾನ ಪಡೆದುಕೊಳ್ಳೋಣ,“ ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ನಾವು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ, ಅವನ ಸಂಗಡ ಮಲಗಿಕೊಂಡು ತಂದೆಯಿಂದ ಸಂತಾನವನ್ನು ಪಡಕೊಳ್ಳೋಣ ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆದ್ದರಿಂದ ನಾವು ನಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ, ನಾವು ಅವನ ಸಂಗಡ ಮಲಗಿಕೊಳ್ಳೋಣ. ಏಕೆಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:32
8 ತಿಳಿವುಗಳ ಹೋಲಿಕೆ  

ಅವರು ಒಬ್ಬರಿಗೊಬ್ಬರು ಮಾತಾಡುತ್ತಾ, “ಬನ್ನಿ, ಒಳ್ಳೆಯ ಸುಟ್ಟ ಇಟ್ಟಿಗೆಗಳನ್ನು ಮಾಡೋಣ” ಎಂದು ನಿರ್ಧರಿಸಿದರು. ಅವರು ತಮ್ಮ ಮನೆಗಳನ್ನು ಕಟ್ಟಲು ಕಲ್ಲುಗಳ ಬದಲಾಗಿ ಇಟ್ಟಿಗೆಗಳನ್ನೂ ಗಾರೆಗೆ ಬದಲಾಗಿ ಕಲ್ಲರಗನ್ನೂ ಉಪಯೋಗಿಸಿದರು.


“ಉಪದೇಶಕನೇ, ವಿವಾಹಿತನೊಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಹೆಂಡತಿಯನ್ನು ಅವನ ಸಹೋದರನು ಮದುವೆ ಮಾಡಿಕೊಂಡು ಸತ್ತುಹೋದ ಸಹೋದರನಿಗಾಗಿ ಸಂತಾನ ಪಡೆಯಬೇಕೆಂದು ಮೋಶೆಯು ಬರೆದಿದ್ದಾನೆ.


ಒಮ್ಮೆ ಅವನು ದ್ರಾಕ್ಷಾರಸವನ್ನು ಕುಡಿದು ಮತ್ತೇರಿದ್ದರಿಂದ ತನ್ನ ಗುಡಾರದಲ್ಲಿ ಬೆತ್ತಲೆಯಾಗಿ ಮಲಗಿಕೊಂಡನು.


“ಎಚ್ಚರಿಕೆ! ತಿನ್ನುವುದರಲ್ಲಿಯೂ ಕುಡಿದು ಮತ್ತರಾಗುವುದರಲ್ಲಿಯೂ ಪ್ರಾಪಂಚಿಕ ಚಿಂತೆಗಳಲ್ಲಿಯೂ ಮಗ್ನರಾಗಿರಬೇಡಿರಿ. ಇಲ್ಲವಾದರೆ, ನಿಮ್ಮ ಹೃದಯಗಳು ಭಾರವಾಗಿರುವಾಗಲೇ ಅಂತ್ಯವು ಫಕ್ಕನೆ ಬಂದೀತು.


ಆ ರಾತ್ರಿ ಅವರು ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ ಅಮಲೇರಿಸಿದರು. ಬಳಿಕ ಹಿರಿಯ ಮಗಳು ತನ್ನ ತಂದೆಯ ಹಾಸಿಗೆಗೆ ಹೋಗಿ ಅವನೊಂದಿಗೆ ಮಲಗಿಕೊಂಡಳು. ಲೋಟನು ಮತ್ತನಾಗಿದ್ದುದರಿಂದ ಆಕೆ ಅವನೊಂದಿಗೆ ಮಲಗಿಕೊಂಡದ್ದು ಅವನಿಗೆ ತಿಳಿಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು