Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:5 - ಪರಿಶುದ್ದ ಬೈಬಲ್‌

5 “ನಿನ್ನ ಮನೆಗೆ ಬಂದ ಆ ಇಬ್ಬರು ಪುರುಷರು ಎಲ್ಲಿದ್ದಾರೆ? ಅವರನ್ನು ಹೊರಗೆ ಕಳುಹಿಸು. ನಾವು ಅವರನ್ನು ಸಂಭೋಗಿಸಬೇಕು” ಎಂದು ಕೂಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಲೋಟನಿಗೆ, “ಈ ರಾತ್ರಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ಹೊರಕ್ಕೆ ಕರೆದುಕೊಂಡು ಬಾ; ಅವರೊಡನೆ ನಮಗೆ ಸಂಗಮವಾಗಬೇಕೆಂದು” ಕೂಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅಲ್ಲದೆ ಲೋಟನಿಗೆ, "ಈ ರಾತ್ರಿ ತಂಗಲು ನಿನ್ನ ಬಳಿಗೆ ಬಂದ ಆ ಮನುಷ್ಯರು ಎಲ್ಲಿ? ಅವರನ್ನು ಹೊರಕ್ಕೆ ಕರೆದುಕೊಂಡು ಬಾ; ಅವರೊಡನೆ ಸಂಭೋಗಿಸಬೇಕು,” ಎಂದು ಕೂಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಈ ರಾತ್ರಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ಹೊರಕ್ಕೆ ತೆಗೆದುಕೊಂಡು ಬಾ; ಅವರೊಡನೆ ನಮಗೆ ಸಂಗಮವಾಗಬೇಕೆಂದು ಕೂಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರು ಲೋಟನನ್ನು ಕರೆದು, “ಈ ರಾತ್ರಿಯಲ್ಲಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ನಮ್ಮ ಬಳಿಗೆ ಕರೆದುಕೊಂಡು ಬಾ, ಅವರೊಡನೆ ಸಂಭೋಗಿಸಬೇಕು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:5
23 ತಿಳಿವುಗಳ ಹೋಲಿಕೆ  

ಲೇವಿಯು ಮತ್ತು ಅವನ ಸಂಗಡಿಗರು ಸಂತೋಷದಿಂದ ಅಲ್ಲಿದ್ದಾಗ ಆ ನಗರದ ಕೆಲವು ಜನರು ಆ ಮನೆಗೆ ಮುತ್ತಿಗೆ ಹಾಕಿದರು. ಅವರು ಮಹಾ ನೀಚಜನರಾಗಿದ್ದರು. ಅವರು ಬಾಗಿಲು ತಟ್ಟತೊಡಗಿದರು. ಆ ಮನೆಯ ಯಜಮಾನನಾದ ವೃದ್ಧನಿಗೆ, “ನಿನ್ನ ಮನೆಗೆ ಬಂದ ಆ ಮನುಷ್ಯನನ್ನು ಹೊರಗೆ ಕರೆದುಕೊಂಡು ಬಾ. ನಾವು ಅವನೊಂದಿಗೆ ಸಂಭೋಗ ಮಾಡಬೇಕು”ಎಂದು ಕೂಗಾಡಿದರು.


ಸೊದೋಮ್ ಮತ್ತು ಗೊಮೋರ ನಗರಗಳನ್ನೂ ಅವುಗಳ ಸುತ್ತಲಿನ ಪಟ್ಟಣಗಳನ್ನೂ ನೆನಪು ಮಾಡಿಕೊಳ್ಳಿರಿ. ಅವುಗಳೂ ಆ ದೇವದೂತರಂತಾದವು. ಆ ಪಟ್ಟಣಗಳಲ್ಲಿ ಲೈಂಗಿಕ ಪಾಪಗಳು ಮತ್ತು ಕೆಟ್ಟಕಾರ್ಯಗಳು ತುಂಬಿಕೊಂಡಿದ್ದವು. ಅವರು ನಿತ್ಯವಾದ ಬೆಂಕಿಯ ದಂಡನೆಯಿಂದ ಸಂಕಟಪಡುವರು. ಅವರಿಗೆ ನೀಡಿದ ದಂಡನೆಯು ನಮಗೊಂದು ದೃಷ್ಟಾಂತವಾಗಿದೆ.


ಜನರ ಮುಖಭಾವವೇ ಅವರ ದುಷ್ಕೃತ್ಯಗಳನ್ನು ಎತ್ತಿತೋರಿಸುವವು. ಅವರು ತಮ್ಮ ಪಾಪಗಳಿಗಾಗಿ ಹೆಚ್ಚಳಪಡುವರು. ಅವರು ಸೊದೋಮಿನ ಜನರಂತಿದ್ದಾರೆ. ತಮ್ಮ ಪಾಪಗಳನ್ನು ಯಾರು ನೋಡಿದರೂ ಅವರಿಗೆ ಚಿಂತೆಯಿಲ್ಲ. ಇದು ನಿಜವಾಗಿಯೂ ಭಯಂಕರವಾದದ್ದು. ಅವರು ತಮಗೆ ಬಹಳ ಸಂಕಟಗಳನ್ನು ಬರಮಾಡಿಕೊಂಡಿದ್ದಾರೆ.


“ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಬಾರದು. ಅದು ಭಯಂಕರ ಪಾಪ!


ಲೈಂಗಿಕ ಪಾಪಗಳನ್ನು ಮಾಡುವವರಿಗೆ, ಸಲಿಂಗಕಾಮಿಗಳಿಗೆ, ಗುಲಾಮರನ್ನು ಮಾರಾಟ ಮಾಡುವವರಿಗೆ, ಸುಳ್ಳನ್ನು ಹೇಳುವವರಿಗೆ, ಒಪ್ಪಂದವನ್ನು ಮೀರುವ ಜನರಿಗೆ, ದೇವರ ಸತ್ಯೋಪದೇಶಕ್ಕೆ ವಿರುದ್ಧವಾಗಿ ಏನನ್ನು ಬೇಕಾದರೂ ಮಾಡುವವರಿಗೆ ಅದನ್ನು ರೂಪಿಸಲಾಗಿದೆ.


ಅಧರ್ಮಿಗಳು ದೇವರ ರಾಜ್ಯವನ್ನು ಪಡೆಯುವುದಿಲ್ಲವೆಂದು ನಿಮಗೆ ಖಂಡಿತವಾಗಿ ತಿಳಿದಿದೆ. ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿ. ದೇವರ ರಾಜ್ಯಕ್ಕೆ ಸೇರದ ಜನರು ಯಾರ್ಯಾರೆಂದರೆ: ಲೈಂಗಿಕ ಪಾಪ ಮಾಡುವವರು, ವಿಗ್ರಹಗಳನ್ನು ಪೂಜಿಸುವವರು, ವ್ಯಭಿಚಾರ ಮಾಡುವವರು, ಸಲಿಂಗಕಾಮಿಗಳು, ಕದಿಯುವವರು, ಸ್ವಾರ್ಥಿಗಳು, ಕುಡುಕರು, ಬೈಯುವವರು ಮತ್ತು ಮೋಸಗಾರರು.


ದೇವರು ಹೇಳಿದ್ದೇನೆಂದರೆ: “ನೀನು ಮಾಡಿದ ದುಷ್ಕೃತ್ಯಗಳ ಅರ್ಧದಷ್ಟು ಸಮಾರ್ಯವು ಮಾಡಿತ್ತು. ಸಮಾರ್ಯದವರಿಗಿಂತಲೂ ಹೆಚ್ಚಾದ ಭಯಂಕರಕೃತ್ಯಗಳನ್ನು ನೀನು ಮಾಡಿರುವೆ. ನಿನ್ನ ಅಕ್ಕತಂಗಿಯರಿಗಿಂತ ಹೆಚ್ಚಾಗಿ ನೀನು ದುಷ್ಕೃತ್ಯಗಳನ್ನು ಮಾಡಿರುವೆ. ಸಮಾರ್ಯ ಮತ್ತು ಸೊದೋಮ್ ನಿನ್ನೊಂದಿಗೆ ಹೋಲಿಸಿ ನೋಡಿದರೆ ಅವು ಒಳ್ಳೆಯ ಪಟ್ಟಣಗಳಂತೆ ತೋರಿಬರುತ್ತವೆ.


ದುಷ್ಟರು ಮತ್ತು ದುರ್ಬೋಧಕರು ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ದಿನದಿಂದ ದಿನಕ್ಕೆ ಕೀಳುಮಟ್ಟಕ್ಕೆ ಇಳಿಯುತ್ತಿದ್ದಾರೆ.


ದೇವರು ಹೇಳಿದ್ದೇನೆಂದರೆ, “ನಿನ್ನ ತಂಗಿ ಸೊದೋಮ್ ಮತ್ತು ಆಕೆಯ ಹೆಣ್ಣುಮಕ್ಕಳು ಕೊಬ್ಬಿದ ಕಣ್ಣುಳ್ಳವರಾಗಿದ್ದರು. ಅವರಿಗೆ ತಿನ್ನಲು ಬೇಕಾದಷ್ಟಿತ್ತು. ಅವರು ಶಾಂತಿಕರವಾದ ಸುಭದ್ರತೆಯಲ್ಲಿ ಜೀವಿಸಿದರು. ಅವರು ಬಡವರಿಗೆ ಸಹಾಯ ಮಾಡಲಿಲ್ಲ.


ಪ್ರವಾದಿಗಳು ಮತ್ತು ಯಾಜಕರು ತಾವು ಮಾಡುವ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು. ಆದರೆ ಅವರು ನಾಚಿಕೆಪಡುವದೇ ಇಲ್ಲ. ತಮ್ಮ ಪಾಪಕಾರ್ಯಗಳಿಗಾಗಿ ಸಂಕೋಚಪಡುವುದು ಸಹ ಅವರಿಗೆ ಗೊತ್ತಿಲ್ಲ. ಆದ್ದರಿಂದ ಬೇರೆಯವರಂತೆ ಅವರನ್ನೂ ಶಿಕ್ಷಿಸಲಾಗುವುದು. ನಾನು ಅವರನ್ನು ಶಿಕ್ಷಿಸಿದಾಗ ಅವರನ್ನು ನೆಲಕ್ಕೆ ಎಸೆಯಲಾಗುವದು” ಎಂದು ಯೆಹೋವನು ಅನ್ನುತ್ತಾನೆ.


ನೀನು ಪಾಪ ಮಾಡಿದ್ದರಿಂದ ಮಳೆ ಬರಲಿಲ್ಲ; ಹಿಂಗಾರು ಮಳೆಯೂ ಆಗಲಿಲ್ಲ. ನಿನ್ನ ಮುಖದ ಮೇಲೆ ಇನ್ನೂ ವೇಶ್ಯೆಯ ಕಳೆಯೇ ಇದೆ. ನೀನು ಮಾಡಿದ ದುಷ್ಕೃತ್ಯಗಳಿಗಾಗಿ ನಿನಗೆ ನಾಚಿಕೆಯೂ ಆಗುವುದಿಲ್ಲ.


ಆದರೆ ಸರ್ವಶಕ್ತನಾದ ಯೆಹೋವನು ಸ್ವಲ್ಪ ಮಂದಿಯನ್ನಾದರೂ ಉಳಿಸಿ ಅಲ್ಲಿ ವಾಸಿಸುವಂತೆ ಮಾಡಿದ್ದಾನೆ. ನಾವು ಸೊದೋಮ್ ಗೊಮೋರ ಪಟ್ಟಣಗಳಂತೆ ಸಂಪೂರ್ಣವಾಗಿ ನಾಶವಾಗಲಿಲ್ಲ.


“ಒಬ್ಬನು ಸ್ತ್ರೀಯೊಂದಿಗೆ ಸಂಗಮಿಸುವಂತೆ ಪುರುಷನೊಡನೆ ಲೈಂಗಿಕ ಸಂಬಂಧ ಮಾಡಿದರೆ, ಆಗ ಈ ಇಬ್ಬರೂ ಭಯಂಕರವಾದ ಪಾಪ ಮಾಡಿದವರಾಗಿದ್ದಾರೆ. ಅವರಿಗೆ ಮರಣಶಿಕ್ಷೆಯಾಗಬೇಕು. ಅವರು ಕೊಲ್ಲಲ್ಪಡಬೇಕು. ಅವರ ಮರಣಕ್ಕೆ ಅವರೇ ಜವಾಬ್ದಾರರಾಗಿದ್ದಾರೆ.


ಅವರು ಮಾಡುವ ಕೆಟ್ಟಕಾರ್ಯಗಳನ್ನು ಅನೇಕ ಜನರು ಅನುಸರಿಸುತ್ತಾರೆ. ಆ ಜನರ ದೆಸೆಯಿಂದ ಸತ್ಯಮಾರ್ಗದ ಕುರಿತಾಗಿ ಇತರರು ಕೆಟ್ಟಮಾತುಗಳನ್ನು ಆಡುತ್ತಾರೆ.


ಆದರೆ ದೇವರು ಆ ಪಟ್ಟಣಗಳಿಂದ ಲೋಟನನ್ನು ರಕ್ಷಿಸಿದನು. ಲೋಟನು ನೀತಿವಂತನಾಗಿದ್ದನು. ದುಷ್ಟ ಜನರ ಕೆಟ್ಟ ನಡತೆಯಿಂದ ಅವನು ದುಃಖಗೊಂಡಿದ್ದನು.


ಲೋಟನು ಹೊರಗೆ ಬಂದು ಬಾಗಿಲಿಗೆ ಬೀಗ ಹಾಕಿ,


“ಇಸ್ರೇಲರ ಗಂಡಸಾಗಲಿ ಹೆಂಗಸಾಗಲಿ ದೇವಸ್ಥಾನದ ವೇಶ್ಯೆಯಾಗಬಾರದು.


ಇತರ ದೇವರುಗಳ ಸೇವೆಗಾಗಿ ತಮ್ಮ ದೇಹಗಳನ್ನು ಲೈಂಗಿಕ ಸಂಬಂಧಕ್ಕೆ ಮಾರಾಟ ಮಾಡುವ ಗಂಡಸರೂ ಅಲ್ಲಿದ್ದರು. ಯೆಹೂದದ ಜನರು ಅನೇಕ ಕೆಟ್ಟಕಾರ್ಯಗಳನ್ನು ಮಾಡಿದರು. ಆ ದೇಶದಲ್ಲಿ ಇವರಿಗಿಂತ ಮುಂಚೆ ನೆಲಸಿದ್ದ ಜನರು ಇಂತಹ ದುಷ್ಕೃತ್ಯಗಳನ್ನು ಮಾಡುತ್ತಿದ್ದರು. ದೇವರು ಆ ಜನರಿಂದ ಈ ದೇಶವನ್ನು ತೆಗೆದುಕೊಂಡು ಇಸ್ರೇಲರಿಗೆ ಕೊಟ್ಟಿದ್ದನು.


ಲೈಂಗಿಕ ಸಂಬಂಧಕ್ಕಾಗಿ ತಮ್ಮ ದೇಹಗಳನ್ನು ಮಾರಾಟ ಮಾಡುತ್ತಿದ್ದ ಗಂಡಸರನ್ನು ಮತ್ತು ಹೆಂಗಸರನ್ನು, ಯೆಹೋಷಾಫಾಟನು ದೇಶದಿಂದ ಹೊರಗಟ್ಟಿದನು. ಅವನ ತಂದೆಯಾದ ಆಸನು ರಾಜನಾಗಿದ್ದ ಕಾಲದಲ್ಲಿ ಆ ಜನರು ಪೂಜಾಸ್ಥಳಗಳಲ್ಲಿ ಸೇವೆಯನ್ನು ಮಾಡುತ್ತಿದ್ದರು.


ಸೊದೋಮಿಗೂ ಮತ್ತು ಆಕೆಯ ಹೆಣ್ಣು ಮಕ್ಕಳಿಗೂ ಅತಿರೇಕ ಜಂಬವು ಬಂದು ಭಯಂಕರ ಕೃತ್ಯಗಳನ್ನು ನನ್ನ ಮುಂದೆಯೇ ಮಾಡಿದರು. ಆದ್ದರಿಂದ ನಾನು ಅವರನ್ನು ನನ್ನಿಂದ ದೂರ ಮಾಡಿದೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು