Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:7 - ಪರಿಶುದ್ದ ಬೈಬಲ್‌

7 ಆ ಗಂಡಸರಿಗೆ, “ನನ್ನ ಸಹೋದರರೇ, ನಾನು ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ. ದಯವಿಟ್ಟು ಈ ಕೆಟ್ಟಕಾರ್ಯವನ್ನು ಮಾಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ಅಣ್ಣಂದಿರೇ, ಈ ದುಷ್ಟತನವನ್ನು ಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 "ಅಣ್ಣ ತಮ್ಮಂದಿರಾ, ನಿಮ್ಮನ್ನು ವಿನಂತಿಸಿ ಕೇಳಿಕೊಳ್ಳುತ್ತೇನೆ: ಈ ಪಾತಕ ಮಾತ್ರ ಮಾಡಬೇಡಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅಣ್ಣಂದಿರೇ, ಈ ಪಾತಕವನ್ನು ಮಾಡಬೇಡಿರಿ. ಕೇಳಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ನನ್ನ ಸಹೋದರರೇ, ಈ ದುಷ್ಟತನವನ್ನು ಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:7
13 ತಿಳಿವುಗಳ ಹೋಲಿಕೆ  

ಸೊದೋಮ್ ಮತ್ತು ಗೊಮೋರ ನಗರಗಳನ್ನೂ ಅವುಗಳ ಸುತ್ತಲಿನ ಪಟ್ಟಣಗಳನ್ನೂ ನೆನಪು ಮಾಡಿಕೊಳ್ಳಿರಿ. ಅವುಗಳೂ ಆ ದೇವದೂತರಂತಾದವು. ಆ ಪಟ್ಟಣಗಳಲ್ಲಿ ಲೈಂಗಿಕ ಪಾಪಗಳು ಮತ್ತು ಕೆಟ್ಟಕಾರ್ಯಗಳು ತುಂಬಿಕೊಂಡಿದ್ದವು. ಅವರು ನಿತ್ಯವಾದ ಬೆಂಕಿಯ ದಂಡನೆಯಿಂದ ಸಂಕಟಪಡುವರು. ಅವರಿಗೆ ನೀಡಿದ ದಂಡನೆಯು ನಮಗೊಂದು ದೃಷ್ಟಾಂತವಾಗಿದೆ.


ಪಾಪಗಳಿಂದ ತುಂಬಿಹೋಗಿದ್ದ ಅವರು ದುಷ್ಕೃತ್ಯಗಳನ್ನೇ ಮಾಡಬಯಸಿದರು. ಆದ್ದರಿಂದ ಪಾಪಮಾರ್ಗದಲ್ಲೇ ಹೋಗಲೆಂದು ದೇವರು ಅವರನ್ನು ಬಿಟ್ಟುಬಿಟ್ಟನು. ಅದರಿಂದಾಗಿ ಅವರು ತಮ್ಮತಮ್ಮಲ್ಲೇ ತಮ್ಮ ದೇಹಗಳಿಂದ ಲೈಂಗಿಕ ಪಾಪಗಳನ್ನು ಮಾಡಿದರು.


ದೇವರು ಒಬ್ಬ ಮನುಷ್ಯನನ್ನು ಸೃಷ್ಟಿ ಮಾಡುವುದರ ಮೂಲಕ ಮಾನವ ಜನಾಂಗವನ್ನು ಆರಂಭಿಸಿದನು. ಅವನಿಂದ ಬೇರೆಲ್ಲ ಜನರನ್ನು ಉತ್ಪತ್ತಿಮಾಡಿ, ಪ್ರಪಂಚದ ಎಲ್ಲೆಲ್ಲಿಯೂ ಅವರು ವಾಸಿಸುವಂತೆ ಮಾಡಿದನು; ಅವರು ಯಾವಾಗ ಮತ್ತು ಎಲ್ಲೆಲ್ಲಿ ವಾಸಿಸಬೇಕೆಂಬುದನ್ನು ಸರಿಯಾಗಿ ನಿರ್ಧರಿಸಿದನು.


ಆ ವೃದ್ಧನು ಮನೆಯಿಂದ ಹೊರಗೆ ಬಂದು ಆ ನೀಚರ ಜೊತೆ ಮಾತನಾಡಿ, “ಬೇಡ, ನನ್ನ ಮಿತ್ರರೇ, ಅಂಥ ಪಾಪದ ಕೆಲಸವನ್ನು ಮಾಡಬೇಡಿ. ಆ ಮನುಷ್ಯ ನನ್ನ ಅತಿಥಿಯಾಗಿದ್ದಾನೆ. ಈ ಭಯಂಕರ ಪಾಪವನ್ನು ಮಾಡಬೇಡಿ.


“ಇಸ್ರೇಲರ ಗಂಡಸಾಗಲಿ ಹೆಂಗಸಾಗಲಿ ದೇವಸ್ಥಾನದ ವೇಶ್ಯೆಯಾಗಬಾರದು.


“ಒಬ್ಬನು ಸ್ತ್ರೀಯೊಂದಿಗೆ ಸಂಗಮಿಸುವಂತೆ ಪುರುಷನೊಡನೆ ಲೈಂಗಿಕ ಸಂಬಂಧ ಮಾಡಿದರೆ, ಆಗ ಈ ಇಬ್ಬರೂ ಭಯಂಕರವಾದ ಪಾಪ ಮಾಡಿದವರಾಗಿದ್ದಾರೆ. ಅವರಿಗೆ ಮರಣಶಿಕ್ಷೆಯಾಗಬೇಕು. ಅವರು ಕೊಲ್ಲಲ್ಪಡಬೇಕು. ಅವರ ಮರಣಕ್ಕೆ ಅವರೇ ಜವಾಬ್ದಾರರಾಗಿದ್ದಾರೆ.


“ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಬಾರದು. ಅದು ಭಯಂಕರ ಪಾಪ!


ಆ ರಾತ್ರಿ ಮಲಗುವುದಕ್ಕಿಂತ ಮುಂಚೆ ಸೊದೋಮಿನ ಗಂಡಸರೆಲ್ಲರೂ ಬಂದು ಲೋಟನ ಮನೆಯ ಸುತ್ತಲೂ ನಿಂತುಕೊಂಡು ಲೋಟನಿಗೆ,


ಲೋಟನು ಹೊರಗೆ ಬಂದು ಬಾಗಿಲಿಗೆ ಬೀಗ ಹಾಕಿ,


ನೋಡಿ! ನನಗೆ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಅವರು ಹಿಂದೆಂದೂ ಗಂಡಸರೊಡನೆ ಮಲಗಿದವರಲ್ಲ. ನೀವು ಅವರಿಗೆ ಏನುಬೇಕಾದರೂ ಮಾಡಿ, ಆದರೆ ದಯವಿಟ್ಟು ಈ ಪುರುಷರಿಗೆ ಏನನ್ನೂ ಮಾಡಬೇಡಿ. ಇವರು ನನ್ನ ಮನೆಗೆ ಬಂದಿದ್ದಾರೆ; ಇವರನ್ನು ಕಾಪಾಡುವುದು ನನ್ನ ಕರ್ತವ್ಯ” ಎಂದು ಹೇಳಿದನು.


ಎಬೆದನ ಮಗನಾದ ಗಾಳನೆಂಬವನು ತನ್ನ ಸಹೋದರರ ಸಮೇತ ಶೆಕೆಮಿಗೆ ಬಂದನು. ಶೆಕೆಮಿನ ಹಿರಿಯರು ಗಾಳನನ್ನು ನಂಬಿ ಅವನನ್ನು ಅನುಸರಿಸಲು ನಿರ್ಧರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು