ಆದಿಕಾಂಡ 19:8 - ಪರಿಶುದ್ದ ಬೈಬಲ್8 ನೋಡಿ! ನನಗೆ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಅವರು ಹಿಂದೆಂದೂ ಗಂಡಸರೊಡನೆ ಮಲಗಿದವರಲ್ಲ. ನೀವು ಅವರಿಗೆ ಏನುಬೇಕಾದರೂ ಮಾಡಿ, ಆದರೆ ದಯವಿಟ್ಟು ಈ ಪುರುಷರಿಗೆ ಏನನ್ನೂ ಮಾಡಬೇಡಿ. ಇವರು ನನ್ನ ಮನೆಗೆ ಬಂದಿದ್ದಾರೆ; ಇವರನ್ನು ಕಾಪಾಡುವುದು ನನ್ನ ಕರ್ತವ್ಯ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಕೇಳಿರಿ, ನನಗೆ ಪುರುಷನನ್ನು ಅರಿಯದ ಇಬ್ಬರು ಹೆಣ್ಣುಮಕ್ಕಳು ಇದ್ದಾರೆ; ಅವರನ್ನಾದರೂ ನಿಮಗೆ ತಂದು ಒಪ್ಪಿಸುತ್ತೇನೆ; ಅವರನ್ನು ಮನಸ್ಸು ಬಂದಂತೆ ಮಾಡಬಹುದು; ಆದರೆ ಆ ಮನುಷ್ಯರು ನನ್ನ ಆಶ್ರಯಕ್ಕೆ ಬಂದವರು; ಅವರಿಗೆ ಏನೂ ಮಾಡಕೂಡದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಕೇಳಿ, ಕನ್ಯೆಯರಾದ ಇಬ್ಬರು ಹೆಣ್ಣುಮಕ್ಕಳು ನನಗಿದ್ದಾರೆ; ಅವರನ್ನು ಬೇಕಾದರೆ ಹೊರಗೆ ಕರೆಯಿಸುತ್ತೇನೆ; ನಿಮಗೆ ಇಷ್ಟಬಂದಂತೆ ಮಾಡಬಹುದು. ಆದರೆ ಆ ಮನುಷ್ಯರು ನನ್ನ ಆಶ್ರಯಕ್ಕಾಗಿ ಬಂದವರು; ಅವರಿಗೆ ಏನೂ ಮಾಡಬೇಡಿ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನನಗೆ ಪುರುಷರನ್ನರಿಯದ ಇಬ್ಬರು ಹೆಣ್ಣುಮಕ್ಕಳು ಇದ್ದಾರೆ; ಅವರನ್ನಾದರೂ ನಿಮಗೆ ತಂದು ಒಪ್ಪಿಸೇನು; ಮನಸ್ಸು ಬಂದಂತೆ ಮಾಡಬಹುದು; ಆದರೆ ಆ ಮನುಷ್ಯರು ನನ್ನ ಆಶ್ರಯಕ್ಕೆ ಬಂದವರು; ಅವರಿಗೆ ಏನೂ ಮಾಡಕೂಡದು ಎಂದು ಹೇಳಲು ಅವರು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಗಂಡಸರನ್ನು ಅರಿಯದ ಇಬ್ಬರು ಪುತ್ರಿಯರು ನನಗೆ ಇದ್ದಾರೆ. ಅವರನ್ನು ನಿಮ್ಮ ಬಳಿಗೆ ಕರೆ ತರುವೆನು. ನಿಮ್ಮ ದೃಷ್ಟಿಗೆ ಒಳ್ಳೆಯದೆಂದು ಕಾಣುವ ಹಾಗೆ ನೀವು ಅವರಿಗೆ ಮಾಡಿರಿ. ಆ ಮನುಷ್ಯರಿಗೆ ಮಾತ್ರ ಏನೂ ಮಾಡಬೇಡಿರಿ. ಏಕೆಂದರೆ ಅವರು ನನ್ನ ಮನೆಯ ಆಶ್ರಯಕ್ಕೆ ಬಂದಿದ್ದಾರೆ,” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿ |
ನೀವು ನಿಮ್ಮ ಊಟವನ್ನು ಹಸಿದವರೊಂದಿಗೆ ಹಂಚಿಕೊಳ್ಳುವದನ್ನು ನಾನು ನೋಡಲು ಆಶಿಸುತ್ತೇನೆ. ಮನೆಗಳಿಲ್ಲದ ಬಡ ಜನರನ್ನು ಕಂಡುಹಿಡಿದು ಅವರನ್ನು ನಿಮ್ಮ ಮನೆಗಳಿಗೆ ಕರೆದುಕೊಂಡು ಬರುವದನ್ನು ನೋಡಲು ಆಶಿಸುತ್ತೇನೆ. ಬಟ್ಟೆ ಇಲ್ಲದ ಒಬ್ಬ ಮನುಷ್ಯನನ್ನು ನೋಡಿದರೆ ನೀವು ನಿಮ್ಮ ಬಟ್ಟೆಯನ್ನು ಅವನಿಗೆ ಕೊಡಿರಿ. ಅವರಿಗೆ ಸಹಾಯ ಮಾಡಲು ಹಿಂಜರಿಯಬೇಡಿರಿ. ಅವರು ನಿಮ್ಮಂತೆ ಮನುಷ್ಯರಲ್ಲವೋ?”