Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:9 - ಪರಿಶುದ್ದ ಬೈಬಲ್‌

9 ಮನೆಯ ಸುತ್ತಲೂ ನಿಂತುಕೊಂಡಿದ್ದ ಗಂಡಸರು ಅವನಿಗೆ, “ದಾರಿಬಿಡು” ಎಂದು ಕೂಗಿದರು. ಆಮೇಲೆ ಅವರು ತಮ್ಮೊಳಗೆ, “ಈ ಲೋಟನು ನಮ್ಮ ನಗರಕ್ಕೆ ಪ್ರವಾಸಿಗನಂತೆ ಬಂದು ಈಗ ನಮಗೇ ನ್ಯಾಯವನ್ನು ಹೇಳಿಕೊಡುತ್ತಿದ್ದಾನೆ” ಎಂದು ಮಾತಾಡಿಕೊಂಡರು. ಆಮೇಲೆ ಅವರು ಲೋಟನಿಗೆ, “ನಾವು ಆ ಪುರುಷರಿಗೆ ಮಾಡುವುದಕ್ಕಿಂತ ನಿನಗೇ ಹೆಚ್ಚು ಕೆಟ್ಟದ್ದನ್ನು ಮಾಡುತ್ತೇವೆ” ಎಂದು ಕೂಗಿಹೇಳಿ ಲೋಟನ ಸಮೀಪಕ್ಕೆ ಬಂದು ಬಾಗಿಲನ್ನು ಮುರಿದುಹಾಕಲು ಸಿದ್ಧರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ದಾರಿ ಬಿಡು ಎಂದು ಹೇಳಿ, “ಇವನು ಯಾರೋ ಒಬ್ಬ ಪರದೇಶಿಯಾಗಿ ಬಂದು ಈಗ ನ್ಯಾಯಾಧಿಪತಿಯಾಗಬೇಕೆಂದಿದ್ದಾನೆ; ಆ ಮನುಷ್ಯರಿಗೆ ಕೇಡು ಮಾಡುವುದಕ್ಕಿಂತ ಹೆಚ್ಚಾಗಿ ನಿನಗೇ ಕೇಡು ಮಾಡುತ್ತೇವೆ” ಎಂದು ಹೇಳಿ ಲೋಟನ ಮೇಲೆ ಬಿದ್ದು ಬಹಳವಾಗಿ ತುಳಿದು ಬಾಗಿಲನ್ನು ಮುರಿಯಲು ಸಮೀಪಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವರಾದರೋ, “ಬಿಡು ದಾರಿ, ಪ್ರವಾಸಿಯಾಗಿ ಬಂದ ಇವನು ನಮಗೆ ನ್ಯಾಯಹೇಳುವವನಾಗಿಬಿಟ್ಟ! ದಾರಿ ಬಿಡದಿದ್ದರೆ ಆ ಮನುಷ್ಯರಿಗಿಂತ ನಿನಗೇ ಹೆಚ್ಚು ಕೇಡಾದೀತು,” ಎಂದು ಹೇಳಿ ಲೋಟನ ಮೇಲೆ ಬಿದ್ದು ತುಳಿದು ಬಾಗಿಲನ್ನು ಒಡೆದುಹಾಕುವುದರಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದಾರಿ ಬಿಡು ಎಂದು ಹೇಳಿ - ಇವನು ಯಾರೋ ಒಬ್ಬ ಪರದೇಶಿಯಾಗಿ ಬಂದು ಈಗ ನ್ಯಾಯ ಹೇಳುವವನಾಗಬೇಕೋ; ಆ ಮನುಷ್ಯರಿಗೆ ಕೇಡು ಮಾಡುವದಕ್ಕಿಂತ ಹೆಚ್ಚಾಗಿ ನಿನಗೇ ಕೇಡು ಮಾಡುತ್ತೇವೆ ಎಂದು ಹೇಳಿ ಲೋಟನ ಮೇಲೆ ಬಿದ್ದು ಬಹಳವಾಗಿ ಇರುಕಿಸಿ ಕದವನ್ನು ಒಡೆದು ಬಿಡಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ಅವರು, “ಹಿಂದಕ್ಕೆ ಸರಿ,” ಎಂದು ಹೇಳಿ, “ಇವನು ಪ್ರವಾಸಿಯಾಗಿ ಬಂದು ನ್ಯಾಯಾಧಿಪತಿಯಾಗಲು ಯತ್ನಿಸುತ್ತಿದ್ದಾನೆ. ಈಗ ನಿನಗೆ ಅವರಿಗಿಂತ ಹೆಚ್ಚು ಕೇಡು ಮಾಡುತ್ತೇವೆ,” ಎಂದರು. ಅವರು ಲೋಟನನ್ನು ಬಲವಾಗಿ ತುಳಿದು, ಬಾಗಿಲನ್ನು ಮುರಿಯಲು ಸಮೀಪಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:9
21 ತಿಳಿವುಗಳ ಹೋಲಿಕೆ  

ಅದಕ್ಕೆ ಆ ಮನುಷ್ಯನು, “ನಿನ್ನನ್ನು ನಮ್ಮ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿದವರು ಯಾರು? ನಿನ್ನೆ ಆ ಈಜಿಪ್ಟಿನವನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿರುವಿಯೋ?” ಎಂದು ಉತ್ತರಿಸಿದನು. ಆಗ ಮೋಶೆಗೆ ಭಯವಾಯಿತು. ಮೋಶೆಯು ತನ್ನೊಳಗೆ, “ನಾನು ಮಾಡಿದ್ದು ಪ್ರತಿಯೊಬ್ಬರಿಗೂ ತಿಳಿದಿದೆ” ಅಂದುಕೊಂಡನು.


ಅಬ್ರಾಮನು ಕಾನಾನ್ ಪ್ರದೇಶದಲ್ಲಿ ಉಳಿದುಕೊಂಡನು. ಲೋಟನು ಕಣಿವೆಯಲ್ಲಿದ್ದ ಪಟ್ಟಣಗಳ ಮಧ್ಯದಲ್ಲಿ ವಾಸಿಸಿದನು; ದಕ್ಷಿಣದಲ್ಲಿದ್ದ ಸೊದೋಮಿನವರೆಗೂ ಗುಡಾರಗಳನ್ನು ಹಾಕಿಕೊಂಡು ಪಾಳೆಯಮಾಡಿಕೊಂಡನು.


“ಪರಿಶುದ್ಧವಾದ ವಸ್ತುಗಳನ್ನು ನಾಯಿಗಳಿಗೆ ಹಾಕಬೇಡಿ. ಅವು ಹಿಂದಕ್ಕೆ ತಿರುಗಿ ನಿಮ್ಮನ್ನು ಕಚ್ಚುತ್ತವೆ. ಹಂದಿಗಳ ಮುಂದೆ ನಿಮ್ಮ ಮುತ್ತುಗಳನ್ನು ಎಸೆಯಬೇಡಿ. ಅವು ಮುತ್ತುಗಳನ್ನು ತುಳಿದುಹಾಕುತ್ತವೆ.


ಅವರು ತಮ್ಮ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು. ಆದರೆ ಅವರು ಸ್ವಲ್ಪವೂ ನಾಚಿಕೆಪಡುವುದಿಲ್ಲ. ಅವರಿಗೆ ನಾಚಿಕೆ ಎಂಬುದೇ ತಿಳಿದಿಲ್ಲ. ಆದ್ದರಿಂದ ಉಳಿದೆಲ್ಲರಂತೆ ಅವರಿಗೂ ಶಿಕ್ಷೆ ವಿಧಿಸಲಾಗುವುದು. ನಾನು ಅವರನ್ನು ಶಿಕ್ಷಿಸುವಾಗ ಅವರು ಮುಗ್ಗರಿಸಿ ಬೀಳುವರು.’” ಯೆಹೋವನ ನುಡಿಗಳಿವು.


ಪ್ರವಾದಿಗಳು ಮತ್ತು ಯಾಜಕರು ತಾವು ಮಾಡುವ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು. ಆದರೆ ಅವರು ನಾಚಿಕೆಪಡುವದೇ ಇಲ್ಲ. ತಮ್ಮ ಪಾಪಕಾರ್ಯಗಳಿಗಾಗಿ ಸಂಕೋಚಪಡುವುದು ಸಹ ಅವರಿಗೆ ಗೊತ್ತಿಲ್ಲ. ಆದ್ದರಿಂದ ಬೇರೆಯವರಂತೆ ಅವರನ್ನೂ ಶಿಕ್ಷಿಸಲಾಗುವುದು. ನಾನು ಅವರನ್ನು ಶಿಕ್ಷಿಸಿದಾಗ ಅವರನ್ನು ನೆಲಕ್ಕೆ ಎಸೆಯಲಾಗುವದು” ಎಂದು ಯೆಹೋವನು ಅನ್ನುತ್ತಾನೆ.


ನೀನು ಪಾಪ ಮಾಡಿದ್ದರಿಂದ ಮಳೆ ಬರಲಿಲ್ಲ; ಹಿಂಗಾರು ಮಳೆಯೂ ಆಗಲಿಲ್ಲ. ನಿನ್ನ ಮುಖದ ಮೇಲೆ ಇನ್ನೂ ವೇಶ್ಯೆಯ ಕಳೆಯೇ ಇದೆ. ನೀನು ಮಾಡಿದ ದುಷ್ಕೃತ್ಯಗಳಿಗಾಗಿ ನಿನಗೆ ನಾಚಿಕೆಯೂ ಆಗುವುದಿಲ್ಲ.


ಆದರೆ ಅವರು ಇತರರಿಗೆ, ‘ನನ್ನ ಬಳಿಗೆ ಬರಬೇಡ. ನೀನು ನಿನ್ನನ್ನು ಶುದ್ಧಮಾಡುವ ತನಕ ನನ್ನನ್ನು ಮುಟ್ಟದಿರು’ ಎಂದು ಹೇಳುವರು. ಅವರು ನನ್ನ ಕಣ್ಣಿನಲ್ಲಿ ಹೊಗೆಯಂತಿದ್ದಾರೆ; ಅವರ ಬೆಂಕಿಯು ಸದಾ ಉರಿಯುತ್ತಿರುವದು.”


ಮೂಢನ ಮಾತು ಮೂರ್ಖತನದೊಡನೆ ಆರಂಭಗೊಂಡು ದುಷ್ಟಕರವಾದ ಹುಚ್ಚುತನದೊಡನೆ ಕೊನೆಗೊಳ್ಳುವುದು.


ಈ ಲೋಕದ ಎಲ್ಲಾ ಕಾರ್ಯಗಳಲ್ಲಿ ಎಲ್ಲಕ್ಕಿಂತಲೂ ದುಃಖಕರವಾದದ್ದೇನೆಂದರೆ, ಎಲ್ಲರೂ ಒಂದೇ ರೀತಿಯಲ್ಲಿ ಅಂತ್ಯವಾಗುವರು. ಆದರೆ ಜನರು ದುಷ್ಟತನವನ್ನೂ ಮೂರ್ಖತನವನ್ನೂ ಆಲೋಚಿಸುತ್ತಲೇ ಇರುವುದು ಅಪಾಯಕರ. ಆಲೋಚನೆಗಳು ಅವರನ್ನು ಮರಣಕ್ಕೆ ನಡೆಸುತ್ತವೆ.


ಕಲ್ಲು ಭಾರ, ಮರಳು ಭಾರ, ಮೂಢನಿಂದಾಗುವ ಕೇಡು ಇವೆರಡಕ್ಕಿಂತಲೂ ಬಹು ಭಾರ.


ಮೂಢಕಾರ್ಯಗಳಲ್ಲಿ ನಿರತನಾಗಿರುವ ಮೂಢನನ್ನು ಭೇಟಿಯಾಗುವುದಕ್ಕಿಂತ ತನ್ನ ಮರಿಗಳನ್ನು ಕಳೆದುಕೊಂಡು ಕೋಪದಿಂದಿರುವ ತಾಯಿಕರಡಿಗೆ ಎದುರಾಗುವುದೇ ಮೇಲು.


ಜ್ಞಾನಿಯು ಎಚ್ಚರವಾಗಿದ್ದು ಆಪತ್ತಿನಿಂದ ದೂರವಿರುತ್ತಾನೆ. ಜ್ಞಾನಹೀನನಾದರೋ ಸೊಕ್ಕಿನಿಂದ ಯೋಚಿಸದೆ ಕಾರ್ಯಗಳನ್ನು ಮಾಡುತ್ತಾನೆ.


ಈಗ ಅದರ ಬಗ್ಗೆ ಯೋಚಿಸಿ ನೀನು ಮಾಡಬೇಕಾದದ್ದನ್ನು ತೀರ್ಮಾನಿಸು. ಮೂರ್ಖನಾದ ನಾಬಾಲನೊಂದಿಗೆ ಮಾತಾಡಿ ಅವನ ಮನಸ್ಸನ್ನು ಬದಲಾಯಿಸುವುದು ಅಸಾಧ್ಯ. ನಮ್ಮ ಒಡೆಯನಿಗೂ ಅವನ ಕುಟುಂಬಕ್ಕೂ ಭೀಕರವಾದ ಕೇಡು ಬರಲಿದೆ” ಎಂದು ಹೇಳಿದನು.


ಗೊಲ್ಯಾತನು ದಾವೀದನಿಗೆ, “ಬಾ ಇಲ್ಲಿಗೆ, ನಿನ್ನ ದೇಹವನ್ನು ಪಕ್ಷಿಗಳಿಗೂ ಕ್ರೂರಪ್ರಾಣಿಗಳಿಗೂ ಆಹಾರವನ್ನಾಗಿ ಮಾಡುತ್ತೇನೆ!” ಎಂದನು.


ಯೆಹೋವನು, “ಈ ಜನರೆಲ್ಲರು ಒಂದೇ ಭಾಷೆಯನ್ನು ಮಾತಾಡುವುದರಿಂದ ಒಟ್ಟಾಗಿ ಸೇರಿಕೊಂಡಿದ್ದಾರೆ. ಪ್ರಾರಂಭದಲ್ಲೇ ಇಂಥ ಕಾರ್ಯವನ್ನು ಮಾಡುತ್ತಿರುವ ಇವರು ಮುಂದೆ ಏನು ಬೇಕಾದರೂ ಮಾಡಲು ಶಕ್ತರಾಗುವರು.


ಯಜ್ಞವನ್ನರ್ಪಿಸುವವನು, “ಕೊಬ್ಬನ್ನು ಮೊದಲು ಹೋಮ ಮಾಡೋಣ. ಅನಂತರ ನಿಮಗೆ ಬೇಕಾದುದನ್ನು ತೆಗೆದುಕೊಳ್ಳಿ” ಎಂದು ಹೇಳಿದರೆ, ಯಾಜಕರ ಸೇವಕನು, “ಇಲ್ಲ, ಯಾಜಕನಿಗಾಗಿ ಕರಿಯಲು ಮಾಂಸವನ್ನು ಈಗಲೇ ಕೊಡು. ನೀನು ಕೊಡುವುದಿಲ್ಲವಾದರೆ, ನಾನೇ ತೆಗೆದುಕೊಳ್ಳುತ್ತೇನೆ” ಎಂದು ಹೇಳುತ್ತಿದ್ದನು.


ದೇವರು ಹೇಳಿದ್ದೇನೆಂದರೆ, “ನಿನ್ನ ತಂಗಿ ಸೊದೋಮ್ ಮತ್ತು ಆಕೆಯ ಹೆಣ್ಣುಮಕ್ಕಳು ಕೊಬ್ಬಿದ ಕಣ್ಣುಳ್ಳವರಾಗಿದ್ದರು. ಅವರಿಗೆ ತಿನ್ನಲು ಬೇಕಾದಷ್ಟಿತ್ತು. ಅವರು ಶಾಂತಿಕರವಾದ ಸುಭದ್ರತೆಯಲ್ಲಿ ಜೀವಿಸಿದರು. ಅವರು ಬಡವರಿಗೆ ಸಹಾಯ ಮಾಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು