Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 2:1 - ಪರಿಶುದ್ದ ಬೈಬಲ್‌

1 ಹೀಗೆ ಭೂಮಿಯೂ ಆಕಾಶವೂ ಅವುಗಳಲ್ಲಿರುವ ಪ್ರತಿಯೊಂದೂ ನಿರ್ಮಿತವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹೀಗೆ ಭೂಮಿಯು ಆಕಾಶಗಳು ಅವುಗಳಲ್ಲಿರುವ ಸಮಸ್ತವೂ ನಿರ್ಮಿತವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪರಲೋಕ - ಭೂಲೋಕಗಳೂ ಅವುಗಳಲ್ಲಿ ಇರುವ ಸಮಸ್ತವೂ ಹೀಗೆ ನಿರ್ಮಿತವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಹೀಗೆ ಭೂಮ್ಯಾಕಾಶಗಳೂ ಅವುಗಳಲ್ಲಿರುವ ಸಮಸ್ತವೂ ನಿರ್ಮಿತವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಹೀಗೆ ಭೂಮ್ಯಾಕಾಶಗಳೂ ಅವುಗಳಲ್ಲಿರುವ ಸಮಸ್ತವೂ ಸಂಪೂರ್ಣವಾಗಿ ನಿರ್ಮಿತವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 2:1
34 ತಿಳಿವುಗಳ ಹೋಲಿಕೆ  

ಯೆಹೋವನು ಆಜ್ಞಾಪಿಸಲು ಆಕಾಶವು ಸೃಷ್ಟಿಯಾಯಿತು! ಆತನ ಉಸಿರು ಭೂಮಿಯ ಮೇಲಿರುವ ಸಮಸ್ತವನ್ನು ಸೃಷ್ಟಿಸಿತು.


ಸಬ್ಬತ್ ನನಗೂ ಮತ್ತು ಇಸ್ರೇಲರಿಗೂ ನಡುವೆ ಎಂದೆಂದೂ ಇರುವ ಸೂಚನೆಯಾಗಿರುವುದು.’” ಯೆಹೋವನು ಆರು ದಿನಗಳಲ್ಲಿ ಕೆಲಸಮಾಡಿ ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದನು. ಏಳನೆಯ ದಿನದಲ್ಲಿ ಕೆಲಸ ಮಾಡದೆ ವಿಶ್ರಮಿಸಿಕೊಂಡನು.


ಯಾಕೆಂದರೆ ಯೆಹೋವನು ಆರು ದಿನಗಳಲ್ಲಿ ಕೆಲಸ ಮಾಡಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಿಸಿ ಏಳನೆಯ ದಿನದಲ್ಲಿ ವಿಶ್ರಮಿಸಿದನು. ಆದ್ದರಿಂದ ಯೆಹೋವನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ತನ್ನ ದಿನವನ್ನಾಗಿ ಮಾಡಿದನು.


ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.


ಯೆಹೋವನು ದೇವರಾಗಿದ್ದಾನೆ. ಆತನು ಭೂಮ್ಯಾಕಾಶಗಳನ್ನು ಉಂಟುಮಾಡಿದ್ದಾನೆ. ಆತನು ಭೂಮಿಯನ್ನು ಅದರ ಸ್ಥಾನದಲ್ಲಿ ಇಟ್ಟಿದ್ದಾನೆ. ಆತನು ಈ ಲೋಕವನ್ನು ಸೃಷ್ಟಿಸಿದ್ದು ಅದು ಶೂನ್ಯವಾಗಿರಲೆಂದಲ್ಲ. ಅದು ಜನಭರಿತವಾಗಿರಲೆಂದೇ ಸೃಷ್ಟಿಸಿದನು. “ನಾನೇ ಯೆಹೋವನು, ನನ್ನ ಹೊರತು ಬೇರೆ ದೇವರುಗಳಿಲ್ಲ.


ನಿಜದೇವರಾದ ಯೆಹೋವನು ಹೀಗೆನ್ನುತ್ತಾನೆ: ಆಕಾಶವನ್ನು ನಿರ್ಮಿಸಿ ಅದನ್ನು ಭೂಮಿಯ ಮೇಲೆ ಹರಡಿದಾತನು ಯೆಹೋವನೇ. ಭೂಮಿಯ ಮೇಲಿರುವದನ್ನೆಲ್ಲಾ ಸೃಷ್ಟಿಸಿದಾತನು ಯೆಹೋವನೇ. ಭೂಮಿಯ ಮೇಲಿರುವ ಮನುಷ್ಯರಿಗೆಲ್ಲಾ ಜೀವಶ್ವಾಸವನ್ನು ಕೊಟ್ಟವನು ಆತನೇ. ಭೂಮಿಯ ಮೇಲೆ ನಡೆಯುವ ಪ್ರತಿಯೊಬ್ಬನಿಗೂ ಪ್ರಾಣವನ್ನು ಕೊಟ್ಟವನು ಆತನೇ.


ಹಿಜ್ಕೀಯನು ಯೆಹೋವನ ಸನ್ನಿಧಿಯಲ್ಲಿ, “ಯೆಹೋವನೇ, ಕೆರೂಬಿಗಳ ಮೇಲೆ ರಾಜನಾಗಿ ಕುಳಿತುಕೊಳ್ಳುವ ಇಸ್ರೇಲರ ದೇವರೇ, ಲೋಕದ ರಾಜ್ಯಗಳಿಗೆಲ್ಲಾ ನೀನೊಬ್ಬನೇ ದೇವರಾಗಿರುವೆ. ನೀನು ಪರಲೋಕವನ್ನು ಮತ್ತು ಈ ಲೋಕವನ್ನು ಸೃಷ್ಟಿಸಿದೆ!


ಭೂಮಿಯನ್ನು ನಿರ್ಮಿಸಿದವನೂ ಅದರಲ್ಲಿ ವಾಸಿಸುವ ಎಲ್ಲಾ ಜನರನ್ನು ಉಂಟುಮಾಡಿದವನೂ ನಾನೇ. ನನ್ನ ಸ್ವಹಸ್ತದಿಂದ ಆಕಾಶಮಂಡಲವನ್ನು ನಿರ್ಮಿಸಿದ್ದೇನೆ. ಆಕಾಶದಲ್ಲಿರುವ ಎಲ್ಲಾ ನಕ್ಷತ್ರಪುಂಜಗಳನ್ನು ನನ್ನ ಹತೋಟಿಯಲ್ಲಿಟ್ಟಿದ್ದೇನೆ.


ಯೆಹೋವನು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿದನು. ಆತನು ಅವುಗಳನ್ನು ಶಾಶ್ವತವಾಗಿ ಸಂರಕ್ಷಿಸುವನು.


ಇಸ್ರೇಲಿನ ಬಗ್ಗೆ ಯೆಹೋವನ ದುಃಖದ ಸಂದೇಶ. ಯೆಹೋವನು ಆಕಾಶವನ್ನೂ ಭೂಮಿಯನ್ನೂ ನಿರ್ಮಿಸಿರುತ್ತಾನೆ. ಮಾನವನಲ್ಲಿ ತನ್ನ ಆತ್ಮವನ್ನಿಟ್ಟನು. ಆ ಬಳಿಕ ಆತನು ಹೇಳಿದ್ದೇನೆಂದರೆ,


ಯಾಕೆಂದರೆ ಆತನು ನುಡಿದಾಗ ಭೂಲೋಕವು ಸೃಷ್ಟಿಯಾಯಿತು; ಆತನು ಆಜ್ಞಾಪಿಸಿದಾಗ ಸಮಸ್ತವು ಉಂಟಾಯಿತು.


ನೀನು ದೇವರಾಗಿರುವೆ. ಯೆಹೋವನೇ, ನೀನೊಬ್ಬನೇ ದೇವರು. ನೀನು ಆಕಾಶವನ್ನು ಉಂಟುಮಾಡಿರುವೆ. ಪರಲೋಕವನ್ನು ನೀನೇ ಮಾಡಿರುವೆ. ಅದರಲ್ಲಿರುವದನ್ನೆಲ್ಲಾ ನೀನೇ ನಿರ್ಮಿಸಿರುವೆ. ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ್ದು ನೀನೇ. ಸಮುದ್ರಗಳನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದಾತನು ನೀನೇ. ಎಲ್ಲಾದಕ್ಕೂ ಜೀವಕೊಡುವಾತನು ನೀನೇ. ಪರಲೋಕದ ದೂತರು ನಿನಗಡ್ಡಬಿದ್ದು ಆರಾಧಿಸುವರು.


ಇಸ್ರೇಲರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ, ಆತನು ಭೂಪರಲೋಕಗಳನ್ನು ಉಂಟುಮಾಡಿದನು. ಅರಸನಾದ ದಾವೀದನಿಗೆ ಒಬ್ಬ ಜ್ಞಾನವುಳ್ಳ ಮಗನನ್ನು ಅನುಗ್ರಹಿಸಿದ್ದಾನೆ. ನಿನಗೆ ಜ್ಞಾನವೂ ತಿಳುವಳಿಕೆಯೂ ಇರುವದರಿಂದ ನೀನು ದೇವಾಲಯವನ್ನು ಕಟ್ಟುವೆ ಮತ್ತು ನಿನಗೂ ಒಂದು ಅರಮನೆಯನ್ನು ಕಟ್ಟುವೆ.


ನಂಬುವವರಾದ ನಾವು ದೇವರ ವಿಶ್ರಾಂತಿಯಲ್ಲಿ ಸೇರಲು ಸಮರ್ಥರಾಗಿದ್ದೇವೆ. ದೇವರು ಹೇಳಿದಂತೆ: “ಆ ಜನರು ನನ್ನ ವಿಶ್ರಾಂತಿಯಲ್ಲಿ ಎಂದಿಗೂ ಪ್ರವೇಶಿಸುವುದಿಲ್ಲವೆಂದು ನಾನು ಕೋಪಗೊಂಡು ಪ್ರಮಾಣ ಮಾಡಿದೆನು.” ಈ ಲೋಕವನ್ನು ಸೃಷ್ಟಿಸಿದ ನಂತರ ತನ್ನ ಕಾರ್ಯಗಳು ಮುಗಿದುಹೋಗಿದ್ದರೂ ದೇವರು ಹೀಗೆ ಹೇಳಿದನು.


ಇದನ್ನು ಕೇಳಿದಾಗ ವಿಶ್ವಾಸಿಗಳು ಏಕಮನಸ್ಸಿನಿಂದ ದೇವರಲ್ಲಿ ಪ್ರಾರ್ಥಿಸಿದರು: ಅವರೆಲ್ಲರಲ್ಲಿ ಒಂದೇ ಮನಸ್ಸಿತ್ತು. “ಒಡೆಯನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಲೋಕದಲ್ಲಿರುವ ಪ್ರತಿಯೊಂದನ್ನೂ ನಿರ್ಮಿಸಿದಾತನು ನೀನೇ.


ಆದರೆ ಯಾಕೋಬ್ಯರ ದೇವರು ಆ ವಿಗ್ರಹಗಳಂತಲ್ಲ. ಆತನು ಸಮಸ್ತವನ್ನೂ ನಿರ್ಮಿಸಿದಾತನಾಗಿದ್ದಾನೆ. ಇಸ್ರೇಲು ಆತನ ಸ್ವಾಸ್ತ್ಯವಾದ ಜನಾಂಗ. “ಸರ್ವಶಕ್ತನಾದ ಯೆಹೋವ” ಎಂಬುದು ಆತನ ನಾಮಧೇಯ.


ದೇವರು ತನ್ನ ಶಕ್ತಿಯಿಂದ ಭೂಲೋಕವನ್ನು ಸೃಷ್ಟಿಸಿದನು. ದೇವರು ತನ್ನ ಜ್ಞಾನದಿಂದ ಈ ಜಗತ್ತನ್ನು ನಿರ್ಮಿಸಿದನು. ತನ್ನ ವಿವೇಕದಿಂದ ದೇವರು ಈ ಭೂಮಂಡಲದ ಮೇಲೆ ಆಕಾಶವನ್ನು ಹೊದಿಸಿದ್ದಾನೆ.


“ನಾನು ಹೊಸ ಭೂಮ್ಯಾಕಾಶಗಳನ್ನು ಸೃಷ್ಟಿಸುವೆನು. ಜನರು ಗತಿಸಿದ ದಿನಗಳನ್ನು ತಮ್ಮ ನೆನಪಿಗೆ ತರುವದಿಲ್ಲ. ಅವರು ಈ ಸಂಗತಿಗಳಲ್ಲಿ ಯಾವುದನ್ನೂ ಜ್ಞಾಪಿಸಿಕೊಳ್ಳುವದಿಲ್ಲ.


ಭೂಮಿಯನ್ನು ನನ್ನ ಕೈಗಳಿಂದಲೇ ನಿರ್ಮಿಸಿದೆನು. ನನ್ನ ಬಲಗೈ ಆಕಾಶವನ್ನು ಉಂಟುಮಾಡಿತು. ನಾನು ಅವುಗಳನ್ನು ಕರೆದಾಗ ಅವು ನನ್ನ ಬಳಿಗೆ ಬರುವವು.


ನೀವು ಆಕಾಶವನ್ನು ತಲೆಯೆತ್ತಿ ನೋಡುವಾಗ ಅಲ್ಲಿ ಕಾಣುವ ಸೂರ್ಯಚಂದ್ರ ನಕ್ಷತ್ರಾದಿಗಳನ್ನು ಪೂಜಿಸಬೇಡಿ. ಇವುಗಳನ್ನೆಲ್ಲಾ ಅನ್ಯರು ಪೂಜಿಸುವರು.


ಇದು ಆಕಾಶದ ಮತ್ತು ಭೂಮಿಯ ಚರಿತ್ರೆ. ದೇವರು ಭೂಮಿಯನ್ನು ಮತ್ತು ಆಕಾಶವನ್ನು ಸೃಷ್ಟಿಸಿದಾಗ ನಡೆದ ಸಂಗತಿಗಳೇ ಈ ಚರಿತ್ರೆ.


ದೇವರು ಒಣನೆಲಕ್ಕೆ ಭೂಮಿಯೆಂದೂ ಒಟ್ಟಿಗೆ ಸೇರಿಕೊಂಡಿದ್ದ ನೀರಿಗೆ ಸಮುದ್ರವೆಂದೂ ಹೆಸರಿಟ್ಟನು. ದೇವರಿಗೆ ಇವು ಒಳ್ಳೆಯದಾಗಿ ಕಂಡವು.


ಅವರು ಬೇರೆ ದೇವರುಗಳನ್ನಾಗಲಿ ಸೂರ್ಯಚಂದ್ರ ನಕ್ಷತ್ರಗಳನ್ನಾಗಲಿ ಪೂಜಿಸುತ್ತಾರೆ ಎಂಬ ಸುದ್ದಿಯನ್ನು ನೀವು ಕೇಳಿದರೂ ಕೇಳಬಹುದು, ಅದು ದೇವರ ಕಟ್ಟಳೆಗೆ ವಿರುದ್ಧವಾದದ್ದು.


ಜೆರುಸಲೇಮಿನ ಜನರು ಸೂರ್ಯನನ್ನು, ಚಂದ್ರನನ್ನು, ನಕ್ಷತ್ರಗಣಗಳನ್ನು ಪ್ರೀತಿಸಿ, ಅನುಸರಿಸಿ, ವಿಚಾರಿಸಿ, ಪೂಜಿಸಿದ್ದರಿಂದ ಅವರ ಎಲುಬುಗಳನ್ನು ಅವುಗಳ ಕೆಳಗೆ ಭೂಮಿಯ ಮೇಲೆ ಹರಡುವರು. ಯಾರೊಬ್ಬರೂ ಆ ಎಲುಬುಗಳನ್ನು ಪುನಃ ಒಂದೆಡೆ ಸೇರಿಸಿ ಹೂಳುವುದಿಲ್ಲ. ಆ ಎಲುಬುಗಳು ಭೂಮಿಯ ಮೇಲೆ ಎಸೆದ ಸಗಣಿಯಂತಾಗುವವು.


ಆಕಾಶವು ಭೂಮಿಗಿಂತ ಎಷ್ಟು ಎತ್ತರವಾಗಿದೆಯೋ ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತ ಅಷ್ಟೇ ಉನ್ನತವಾಗಿವೆ; ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತ ಅಷ್ಟೇ ಉನ್ನತವಾಗಿವೆ.” ಇದು ಯೆಹೋವನ ನುಡಿ.


ಇದನ್ನು ಮಾಡಿದಾತನು ಯೆಹೋವನೇ ಎಂಬುದು ಈ ಸೃಷ್ಟಿಗಳಲ್ಲಿ ಪ್ರತಿಯೊಂದಕ್ಕೂ ಗೊತ್ತು.


ಆದರೆ ದೇವರು ಅವರಿಗೆ ವಿರೋಧವಾಗಿ, ಆಕಾಶದ ಸುಳ್ಳುದೇವರುಗಳನ್ನು ಪೂಜಿಸುವಂತೆ ಅವರನ್ನು ಬಿಟ್ಟುಬಿಟ್ಟನು. ಇದರ ಬಗ್ಗೆ ಪ್ರವಾದಿಗಳ ಪುಸ್ತಕದಲ್ಲಿ ಹೀಗೆ ಬರೆದಿದೆ: ದೇವರು ಹೀಗೆನ್ನುತ್ತಾನೆ, ‘ಯೆಹೂದ್ಯ ಜನರಾದ ನೀವು ನಲವತ್ತು ವರ್ಷಗಳ ಕಾಲ ಮರಳುಗಾಡಿನಲ್ಲಿದ್ದಾಗ ನನಗೆ ಯಜ್ಞಗಳನ್ನು ಅರ್ಪಿಸಲಿಲ್ಲ; ಕಾಣಿಕೆಗಳನ್ನು ತರಲಿಲ್ಲ.


ತಕ್ಷಣವೇ ಪರಲೋಕದಿಂದ ದೇವದೂತರು ಬಹು ದೊಡ್ಡ ಗುಂಪಾಗಿ ಬಂದು ಮೊದಲನೆಯ ದೇವದೂತನೊಡನೆ ಸೇರಿಕೊಂಡರು. ಅವರೆಲ್ಲರೂ,


ಆಕಾಶವು ಸುರುಳಿಯಂತೆ ಮುಚ್ಚಿಹೋಗುವದು. ನಕ್ಷತ್ರಗಳು ದ್ರಾಕ್ಷಾಲತೆಯ ಒಣಗಿದ ಎಲೆಗಳಂತೆಯೂ ಅಂಜೂರದ ಒಣಗಿದ ಎಲೆಗಳಂತೆಯೂ ಉದುರಿಬೀಳುವವು. ಆಕಾಶದಲ್ಲಿರುವ ಎಲ್ಲಾ ನಕ್ಷತ್ರಗಳು ಕರಗಿಹೋಗುವವು.


ನೀನು ಬೆಳಕನ್ನು ನಿಲುವಂಗಿಯಂತೆ ಧರಿಸಿಕೊಂಡಿರುವೆ ನೀನು ಆಕಾಶಮಂಡಲವನ್ನು ಪರದೆಯಂತೆ ಹರಡಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು