Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 2:16 - ಪರಿಶುದ್ದ ಬೈಬಲ್‌

16 ದೇವರಾದ ಯೆಹೋವನು ಆ ಮನುಷ್ಯನಿಗೆ, “ತೋಟದಲ್ಲಿರುವ ಯಾವ ಮರದ ಹಣ್ಣನ್ನು ಬೇಕಾದರೂ ನೀನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇದಲ್ಲದೆ ಯೆಹೋವನಾದ ದೇವರು ಆ ಮನುಷ್ಯನಿಗೆ, “ನೀನು ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ಯಥೇಚ್ಛವಾಗಿ ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇದಲ್ಲದೆ, ದೇವರಾದ ಸರ್ವೇಶ್ವರ ಆ ಮನುಷ್ಯನಿಗೆ, “ನೀನು ಈ ತೋಟದಲ್ಲಿರುವ ಎಲ್ಲ ಮರಗಳ ಹಣ್ಣುಗಳನ್ನು ಯಥೇಚ್ಛವಾಗಿ ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇದಲ್ಲದೆ ಯೆಹೋವದೇವರು ಆ ಮನುಷ್ಯನಿಗೆ - ನೀನು ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ಯಥೇಚ್ಫವಾಗಿ ತಿನ್ನಬಹುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇದಲ್ಲದೆ ಯೆಹೋವ ದೇವರು ಮನುಷ್ಯನಿಗೆ, “ನೀನು ತೋಟದ ಎಲ್ಲಾ ಮರಗಳ ಹಣ್ಣುಗಳನ್ನು ನಿನ್ನ ಇಷ್ಟಾನುಸಾರವಾಗಿ ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 2:16
8 ತಿಳಿವುಗಳ ಹೋಲಿಕೆ  

ಆದಕ್ಕೆ ಸಮುವೇಲನು, “ಯೆಹೋವನಿಗೆ ಯಾವುದು ಹೆಚ್ಚು ಮೆಚ್ಚಿಗೆಯಾಗಿದೆ? ಸರ್ವಾಂಗಹೋಮಗಳೇ? ಯಜ್ಞಗಳೇ? ಇಲ್ಲವೆ ಯೆಹೋವನ ಆಜ್ಞೆಗಳಿಗೆ ವಿಧೇಯರಾಗುವುದೇ? ದೇವರಿಗೆ ಯಜ್ಞವನ್ನು ಸಮರ್ಪಿಸುವುದಕ್ಕಿಂತ ಆತನ ಆಜ್ಞೆಗಳಿಗೆ ವಿಧೇಯರಾಗಿರುವುದೇ ಉತ್ತಮ. ಟಗರುಗಳ ಕೊಬ್ಬನ್ನು ಅರ್ಪಿಸುವುದಕ್ಕಿಂತ ಆತನ ಮಾತುಗಳನ್ನು ಆಲಿಸುವುದು ಉತ್ತಮ.


ಆತನು ನಿರ್ಮಿಸಿದ ಪ್ರತಿಯೊಂದೂ ಉತ್ತಮವಾಗಿರುತ್ತದೆ. ಆತನಿಗೆ ಕೃತಜ್ಞತಾಸ್ತುತಿ ಮಾಡಿ ತೆಗೆದುಕೊಳ್ಳುವ ಯಾವುದನ್ನೇ ಆಗಲಿ ನಿಷಿದ್ಧವೆಂದು ತಿರಸ್ಕರಿಸಬಾರದು.


ಇಹಲೋಕದ ವಿಷಯಗಳಲ್ಲಿ ಶ್ರೀಮಂತರಾಗಿರುವ ಜನರಿಗೆ ಈ ಆಜ್ಞೆಗಳನ್ನು ತಿಳಿಸು. ಗರ್ವಪಡದಂತೆಯೂ ಹಣವನ್ನು ಅವಲಂಬಿಸಿಕೊಳ್ಳದೆ ದೇವರಲ್ಲೇ ನಿರೀಕ್ಷೆಯಿಡುವಂತೆಯೂ ಅವರಿಗೆ ತಿಳಿಸು. ಹಣವು ಭರವಸೆಗೆ ಯೋಗ್ಯವಲ್ಲ. ದೇವರಾದರೋ ನಮ್ಮ ಸಂತೋಷಕ್ಕಾಗಿ ಸಮಸ್ತವನ್ನು ನಮಗೆ ಧಾರಾಳವಾಗಿ ದಯಪಾಲಿಸುತ್ತಾನೆ.


ದೇವರಾದ ಯೆಹೋವನು ಆ ತೋಟದಲ್ಲಿ ಸುಂದರವಾದ ಪ್ರತಿಯೊಂದು ಮರವನ್ನು ಮತ್ತು ಊಟಕ್ಕೆ ಬೇಕಾದ ಒಳ್ಳೆಯ ಹಣ್ಣುಗಳನ್ನು ಬಿಡುವ ಪ್ರತಿಯೊಂದು ಮರವನ್ನು ಬೆಳೆಸಿದನು. ಇದಲ್ಲದೆ ತೋಟದ ಮಧ್ಯಭಾಗದಲ್ಲಿ ಜೀವದಾಯಕ ಮರವನ್ನೂ ಅಲ್ಲದೆ ಒಳ್ಳೆಯದರ ಮತ್ತು ಕೆಟ್ಟದ್ದರ ಬಗ್ಗೆ ಜ್ಞಾನ ಕೊಡುವ ಮರವನ್ನೂ ಬೆಳೆಸಿದನು.


ದೇವರಾದ ಯೆಹೋವನು ಆ ಮನುಷ್ಯನನ್ನು ಏದೆನ್ ತೋಟಕ್ಕೆ ಕರೆದೊಯ್ದು ವ್ಯವಸಾಯ ಮಾಡುವುದಕ್ಕಾಗಿಯೂ ಅದನ್ನು ನೋಡಿಕೊಳ್ಳುವುದಕ್ಕೂ ಅದರಲ್ಲಿರಿಸಿದನು.


ಆದರೆ ಒಂದು ಮರದ ಹಣ್ಣನ್ನು ಮಾತ್ರ ನಾವು ತಿನ್ನಕೂಡದು. ದೇವರು ನಮಗೆ, ‘ತೋಟದ ಮಧ್ಯದಲ್ಲಿರುವ ಮರದ ಹಣ್ಣನ್ನು ನೀವು ತಿನ್ನಕೂಡದು; ಆ ಮರವನ್ನು ಮುಟ್ಟಕೂಡದು, ಇಲ್ಲವಾದರೆ ನೀವು ಸಾಯುವಿರಿ’ ಎಂದು ಹೇಳಿದ್ದಾನೆ” ಎಂಬುದಾಗಿ ಉತ್ತರಕೊಟ್ಟಳು.


ಇದಲ್ಲದೆ ದೇವರು ಅವರಿಗೆ, “ಬೀಜಫಲಿಸುವ ಎಲ್ಲಾ ಸಸಿಗಳನ್ನು ಮತ್ತು ಬೀಜವುಳ್ಳ ಹಣ್ಣುಗಳನ್ನು ಫಲಿಸುವ ಎಲ್ಲಾ ಮರಗಳನ್ನು ನಿಮಗೆ ಆಹಾರವಾಗಿ ಕೊಟ್ಟಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು