ಆದಿಕಾಂಡ 2:18 - ಪರಿಶುದ್ದ ಬೈಬಲ್18 ಬಳಿಕ ದೇವರಾದ ಯೆಹೋವನು, “ಮನುಷ್ಯನು ಒಬ್ಬಂಟಿಗನಾಗಿರುವುದು ಒಳ್ಳೆಯದಲ್ಲವೆಂದು ನನಗೆ ತೋರುತ್ತದೆ. ಅವನಿಗೆ ಸರಿಹೊಂದುವ ಸಹಕಾರಿಣಿಯನ್ನು ಉಂಟುಮಾಡುವೆನು” ಎಂದುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅನಂತರ ಯೆಹೋವನಾದ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅನಂತರ ದೇವರಾದ ಸರ್ವೇಶ್ವರ, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ, ಅವನಿಗೆ ಸರಿಬೀಳುವ ಸಹಕಾರಿಯನ್ನು ಸೃಷ್ಟಿಮಾಡುವೆನು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಮತ್ತು ಯೆಹೋವದೇವರು - ಮನುಷ್ಯನು ಒಂಟಿಗನಾಗಿರುವದು ಒಳ್ಳೇದಲ್ಲ; ಅವನಿಗೆ ಸರಿಬೀಳುವ ಸಹಕಾರಿಯನ್ನು ಉಂಟುಮಾಡುವೆನು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅನಂತರ ಯೆಹೋವ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಬೀಳುವ ಸಹಕಾರಿಣಿಯನ್ನು ಉಂಟುಮಾಡುವೆನು,” ಎಂದರು. ಅಧ್ಯಾಯವನ್ನು ನೋಡಿ |