ಆದಿಕಾಂಡ 2:21 - ಪರಿಶುದ್ದ ಬೈಬಲ್21 ಆದ್ದರಿಂದ ದೇವರಾದ ಯೆಹೋವನು ಮನುಷ್ಯನಿಗೆ ಗಾಢವಾದ ನಿದ್ರೆಯನ್ನು ಬರಮಾಡಿ ಅವನ ದೇಹದ ಪಕ್ಕೆಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಆ ಪಕ್ಕೆಲುಬಿನ ಸ್ಥಳವನ್ನು ಮಾಂಸದಿಂದ ಮುಚ್ಚಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಹೀಗಿರುವಲ್ಲಿ ಯೆಹೋವನಾದ ದೇವರು ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ತುಂಬಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಹೀಗಿರುವಲ್ಲಿ ದೇವರಾದ ಸರ್ವೇಶ್ವರ ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿದರು. ಅವನು ನಿದ್ರಿಸುತ್ತಿರುವಾಗ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ಮುಚ್ಚಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಹೀಗಿರುವಲ್ಲಿ ಯೆಹೋವದೇವರು ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ಮುಚ್ಚಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದಕಾರಣ ಯೆಹೋವ ದೇವರು ಮನುಷ್ಯನಿಗೆ ಗಾಢನಿದ್ರೆ ಬರಮಾಡಿದರು. ಅವನು ನಿದ್ರಿಸುತ್ತಿರುವಾಗ, ಅವರು ಅವನ ಪಕ್ಕೆಯನ್ನು ತೆಗೆದುಕೊಂಡು, ಅದರ ಸ್ಥಳವನ್ನು ಮಾಂಸದಿಂದ ಮುಚ್ಚಿದರು. ಅಧ್ಯಾಯವನ್ನು ನೋಡಿ |
ಅಂತೆಯೇ, ಸೌಲನ ತಲೆಯ ಹತ್ತಿರವಿದ್ದ ಭರ್ಜಿಯನ್ನೂ ನೀರಿನ ತಂಬಿಗೆಯನ್ನೂ ದಾವೀದನು ತೆಗೆದುಕೊಂಡನು. ನಂತರ ದಾವೀದ ಮತ್ತು ಅಬೀಷೈ ಸೌಲನ ಪಾಳೆಯನ್ನು ಬಿಟ್ಟು ಹೋದರು. ಇದನ್ನು ಯಾರೂ ನೋಡಲಿಲ್ಲ. ಇದರ ಬಗ್ಗೆ ಯಾರಿಗೂ ತಿಳಿಯಲಿಲ್ಲ. ಒಬ್ಬನಾದರೂ ನಿದ್ರೆಯಿಂದ ಎಚ್ಚರಗೊಳ್ಳಲಿಲ್ಲ! ಸೌಲನು ಮತ್ತು ಅವನ ಸೈನಿಕರೆಲ್ಲರೂ ನಿದ್ರಿಸುತ್ತಿದ್ದರು. ಏಕೆಂದರೆ ಯೆಹೋವನು ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದನು.