ಆದಿಕಾಂಡ 2:8 - ಪರಿಶುದ್ದ ಬೈಬಲ್8 ದೇವರಾದ ಯೆಹೋವನು ಪೂರ್ವ ದಿಕ್ಕಿನಲ್ಲಿದ್ದ ಏದೆನ್ ಸೀಮೆಯಲ್ಲಿ ಒಂದು ತೋಟವನ್ನು ಮಾಡಿ ತಾನು ಸೃಷ್ಟಿಸಿದ ಮನುಷ್ಯನನ್ನು ಆ ತೋಟದಲ್ಲಿರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇದಲ್ಲದೆ ಯೆಹೋವನಾದ ದೇವರು ಮೂಡಣ ದಿಕ್ಕಿನಲ್ಲಿರುವ ಏದೆನ್ ಸೀಮೆಯಲ್ಲಿ ಒಂದು ಉದ್ಯಾನವನವನ್ನು ಸೃಷ್ಟಿಸಿ ತಾನು ಉಂಟುಮಾಡಿದ ಮನುಷ್ಯನನ್ನು ಅದರಲ್ಲಿ ತಂಗುವಂತೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಇದಲ್ಲದೆ, ದೇವರಾದ ಸರ್ವೇಶ್ವರ ಪೂರ್ವದಿಕ್ಕಿನಲ್ಲಿರುವ ಏದೆನ್ ಪ್ರದೇಶದಲ್ಲಿ ಒಂದು ಉದ್ಯಾನವನವನ್ನು ಮಾಡಿ ತಾವು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಇದಲ್ಲದೆ ಯೆಹೋವದೇವರು ಮೂಡಣ ದಿಕ್ಕಿನಲ್ಲಿರುವ ಏದೆನ್ ಸೀಮೆಯಲ್ಲಿ ಒಂದು ಉದ್ಯಾನವನವನ್ನು ಮಾಡಿ ತಾನು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆಹೋವ ದೇವರು ಪೂರ್ವದಿಕ್ಕಿಗಿರುವ ಏದೆನ್ ಸೀಮೆಯಲ್ಲಿ ತೋಟವನ್ನು ಮಾಡಿ, ತಾವು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇರಿಸಿದರು. ಅಧ್ಯಾಯವನ್ನು ನೋಡಿ |
ಅದೇ ರೀತಿಯಲ್ಲಿ ಯೆಹೋವನು ಚೀಯೋನನ್ನು ಮತ್ತು ನಿರ್ಜನವಾದ ಅದರ ಸ್ಥಳಗಳನ್ನು ಆದರಿಸುವನು; ಅವರಿಗಾಗಿ ಮಹಾದೊಡ್ಡ ಕಾರ್ಯವನ್ನು ಮಾಡುವನು. ಯೆಹೋವನು ಮರುಭೂಮಿಯನ್ನು ಏದೆನ್ ಉದ್ಯಾನವನದಂತೆ ಮಾಡುವನು. ಆ ದೇಶವು ಬರಿದಾಗಿತ್ತು. ಆದರೆ ಅದು ಯೆಹೋವನ ಉದ್ಯಾನವನವಾಗುವದು. ಅದರೊಳಗಿರುವ ಜನರು ಸಂತೋಷಭರಿತರಾಗುವರು. ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸುವರು. ಅವರು ಕೃತಜ್ಞತಾಸ್ತುತಿ ಮಾಡುವರು, ಜಯಗೀತೆಯನ್ನು ಹಾಡುವರು.
ನಾನು ಆ ಮರವನ್ನು ಬೀಳಿಸಿದೆನು. ಬೀಳುವ ಅದರ ಶಬ್ದವನ್ನು ಕೇಳಿ ರಾಜ್ಯಗಳೆಲ್ಲಾ ಭಯದಿಂದ ನಡುಗಿದವು. ನಾನು ಆ ಮರವನ್ನು ಪಾತಾಳಕ್ಕೆ ಕಳುಹಿಸಿದೆನು. ಅದು ಹೋಗಿ ಅದಕ್ಕಿಂತ ಮೊದಲೇ ಆ ಆಳವಾದ ಗುಂಡಿಗೆ ಹೋಗಿರುವವರೊಂದಿಗೆ ಸೇರಿಕೊಂಡಿತು. ಗತಿಸಿದ ದಿವಸಗಳಲ್ಲಿ ಏದೆನಿನಲ್ಲಿದ್ದ ಎಲ್ಲಾ ಮರಗಳು, ಲೆಬನೋನಿನ ಉತ್ಕೃಷ್ಟ ಮರಗಳು ಆ ನೀರನ್ನು ಕುಡಿದಿದ್ದವು. ಅವೆಲ್ಲವೂ ಪಾತಾಳದಲ್ಲಿ ಸಂತೈಸಿಕೊಂಡವು.
“ಈಜಿಪ್ಟೇ, ಏದೆನಿನಲ್ಲಿ ಎಷ್ಟೋ ದೊಡ್ಡ, ಬಲಶಾಲಿಯಾಗಿರುವ ಮರಗಳಿವೆ. ಅದರ ಯಾವ ಮರಕ್ಕೆ ನಿನ್ನನ್ನು ಹೋಲಿಸಲಿ? ಅವೆಲ್ಲವೂ ಭೂಮಿಯ ಕೆಳಗೆ ಪಾತಾಳವನ್ನು ಸೇರಿದವು. ನೀನು ಕೂಡಾ ಆ ಪರದೇಶಸ್ಥರೊಂದಿಗೆ ಆ ಸ್ಥಳಕ್ಕೆ ಸೇರುವೆ. ರಣರಂಗದಲ್ಲಿ ಸತ್ತವರೊಂದಿಗೆ ನೀನು ಬಿದ್ದುಕೊಳ್ಳುವೆ. “ಹೌದು, ಈ ರೀತಿಯಾಗಿ ಫರೋಹನಿಗೂ ಅವನೊಂದಿಗಿರುವ ಜನರ ಗುಂಪಿಗೂ ಆಗುವದು.” ಇದು ಒಡೆಯನಾದ ಯೆಹೋವನ ನುಡಿ.